ಬೆಂಗಳೂರು: ಬಿಗ್ ಬಾಸ್ ಓಟಿಟಿಯ ಆವೃತ್ತಿಯಲ್ಲಿ ಆಯ್ಕೆಯಾಗಿರುವ ಸಾನ್ಯ ಅಯ್ಯರ್, ಆರ್ಯವರ್ಧನ್ ಗುರೂಜಿ , ರಾಕೇಶ್ ಅಡಿಗ ಮತ್ತು ರೂಪೇಶ್ ಶೆಟ್ಟಿ ,ಇನ್ನೂ ತಮ್ಮ ತಮ್ಮ ಮನೆ ತಲುಪಿಲ್ಲ. ಸದ್ಯಕ್ಕೆ ಅವರು ತಲುವುದೂ ಇಲ್ಲ. ಅಂದು ಓಟಿಟಿ ಫಿನಾಲೆ ಮುಗಿದ ತಕ್ಷಣವೇ ಈ ನಾಲ್ವರನ್ನೂ ನಿಗೂಢ ಜಾಗಕ್ಕೆ ಕರೆದುಕೊಂಡು ಹೋಗಲಾಗಿದ್ದು, ಅಲ್ಲಿಯೇ ಅವರು ದಿನಗಳನ್ನು ಕಳೆಯುತ್ತಿದ್ದಾರೆ. ಸೆ.24ರವರೆಗೂ ಅವರು ಈಗಿರುವ ಸ್ಥಳದಲ್ಲೇ ಇರಬೇಕಾಗಿದೆ.
ಈ ಮೊದಲು ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ವೊಂದರಲ್ಲಿ ಆ ನಾಲ್ವರನ್ನೂ ಇಡಲಾಗಿದೆ ಎಂದು ಹೇಳಲಾಗಿತ್ತು. ಆದರೆ, ಅಸಲಿಯಾಗಿ ಅವರು ಇರುವುದು ಬೆಂಗಳೂರು ಕನಕಪುರ ರಸ್ತೆಯಲ್ಲಿರುವ ರೆಸಾರ್ಟ್ ವೊಂದರಲ್ಲಿ ಎಂದು ಗೊತ್ತಾಗಿದೆ. ಯಾರ ಸಂಪರ್ಕಕ್ಕೂ ಸಿಗದೇ ಇರುವ ರೀತಿಯಲ್ಲಿ ಅವರನ್ನು ರೆಸಾರ್ಟ್ನಲ್ಲಿ ಇಡಲಾಗಿದ್ದು, ಬಿಗ್ ಬಾಸ್ ಸೀಸನ್ 9 ವೇದಿಕೆಯ ಮೇಲೆಯೇ ಈ ನಾಲ್ವರು ಕಾಣಿಸಿಕೊಳ್ಳಲಿದ್ದಾರೆ.
ಬೆಂಗಳೂರು ಕನಪುರ ರಸ್ತೆಯಲ್ಲಿನ ಐಷಾರಾಮಿ ರೆಸಾರ್ಟ್ ನಲ್ಲಿ ನಾಲ್ವರು ಇದ್ದರು, ಅವರನ್ನು ಯಾರಿಂದಲೂ ಸಂಪರ್ಕಿಸಲು ಸಾಧ್ಯವಾಗದಂತೆ ನೋಡಿಕೊಳ್ಳಲಾಗಿದೆ. ಅಲ್ಲದೇ, ರೆಸಾರ್ಟ್ಗೆ ಹೋಗುವ ದಾರಿಯಲ್ಲಿ ಕಾವೇರಿ ನೀರು ಯೋಜನೆ ಕಾಮಗಾರಿ ನಡೆಯುತ್ತಿರುವುದರಿಂದ ಸುಲಭಕ್ಕೆ ಹೋಗುವುದು ಅಸಾಧ್ಯ ಎನ್ನುವ ಕಾರಣಕ್ಕಾಗಿ ಆ ರೆಸಾರ್ಟ್ ಅನ್ನು ಆಯ್ಕೆ ಮಾಡಿಕೊಳ್ಳಲಾಗಿದೆಯಂತೆ.
ಈ ಮಧ್ಯೆಯೂ ನಿನ್ನೆ ಸಾನ್ಯ ಐಯ್ಯರ್ ಅವರ ಹುಟ್ಟು ಹಬ್ಬವನ್ನು ಅದೇ ರೆಸಾರ್ಟ್ ನಲ್ಲಿ ಆಚರಿಸಲಾಗಿದೆ. ರೂಪೇಶ್, ರಾಕೇಶ್ ಅಡಿಗ ಮತ್ತು ಆರ್ಯವರ್ಧನ್ ಗುರೂಜಿ ಕೇಕ್ ತರಿಸಿ, ಸಾನ್ಯ ಹುಟ್ಟುಹಬ್ಬವನ್ನು ಸಡಗರದಿಂದ ಆಚರಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕುಟುಂಬಕ್ಕೆ ಅವಕಾಶವನ್ನು ನಿರಾಕರಿಸಲಾಗಿತ್ತು ಎಂದು ಹೇಳಲಾಗುತ್ತಿದೆ.
Discover more from Coastal Times Kannada
Subscribe to get the latest posts sent to your email.
Discussion about this post