ಮಂಗಳೂರು : ಕಾಂಗ್ರೆಸ್ ಮುಖಂಡೆ, ಸುರತ್ಕಲ್ ಎನ್ಐಟಿಕೆ ಟೋಲ್ ಗೇಟ್ ವಿರೋಧಿ ಹೋರಾಟಗಾರ್ತಿ ಪ್ರತಿಭಾ ಕುಳಾಯಿ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮಾಡಿದ ವಿಚಾರದಲ್ಲಿ ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಮಂಗಳೂರು ನಗರ ಪೊಲೀಸ್ ಕಮೀಷನರ್ ಶಶಿಕುಮಾರ್ ಅವರು ಟೋಲ್ ಗೇಟ್ ವಿರುದ್ಧ ಸಾಮಾಜಿಕ ಕಾರ್ಯಕರ್ತೆ ಪ್ರತಿಭಟನೆ ನಡೆಸುತ್ತಿರುವ ಫೋಟೋವನ್ನು ಹಾಕಿ ಅದಕ್ಕೆ ಅಶ್ಲೀಲ ಕಮೆಂಟ್ ಮಾಡಿರುವ ಬಗ್ಗೆ ದೂರು ಬಂದಿದ್ದು, ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಆರೋಪಿಗಳನ್ನು ಶೀಘ್ರವಾಗಿ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಪ್ರತಿಭಾ ಕುಳಾಯಿ ಅವರನ್ನು ಲೈಂಗಿಕ ದೌರ್ಜನ್ಯ ಭಾಷೆಯಲ್ಲಿ ತೇಜೋವಧೆ ಮಾಡಿರುವ ಶ್ಯಾಮ ಸುದರ್ಶನ್ ಭಟ್ನನ್ನು ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯಡಿ ಬಂಧಿಸಲು ಒತ್ತಾಯಿಸಿ ಸಮಾನ ಮನಸ್ಕ ಸಂಘಟನೆಗಳ ನೇತೃತ್ವದಲ್ಲಿ ಇಂದು ಪೊಲೀಸ್ ಉಪ ಆಯುಕ್ತರಿಗೆ ಮನವಿಯನ್ನು ಸಲ್ಲಿಸಲಾಯಿತು. ನಿಯೋಗದಲ್ಲಿ ಸಾಮಾಜಿಕ ಮುಖಂಡರಾದ ಮಂಜುಳಾ ನಾಯಕ್, ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಭಾರತೀ ಬೋಳಾರ, ಪ್ರಮೀಳಾ ಶಕ್ತಿನಗರ, ಅಸುಂತ ಡಿಸೋಜಾ ಪ್ರಮೀಳಾ ದೇವಾಡಿಗ, ಡಿವೈಎಫ್ಐ ಯುವತಿಯರ ಉಪ ಸಮಿತಿ ಮುಖಂಡರಾದ ಆಶಾ ಬೋಳೂರು, ದೀಕ್ಷಿತಾ ಜಲ್ಲಿಗುಡ್ಡೆ, ಸೌಮ್ಯ ಪಂಜಿಮೊಗರು ಮುಂತಾದವರು ಉಪಸ್ಥಿತರಿದ್ದರು.
Discover more from Coastal Times Kannada
Subscribe to get the latest posts sent to your email.







Discussion about this post