• About us
  • Contact us
  • Disclaimer
Friday, June 20, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಇಸ್ರೇಲ್-ಹಮಾಸ್ ಯುದ್ಧ : ಹಸಿವಿನಿಂದ ಬಳಲುತ್ತಿರುವ ಗಾಜಾದ ಜನರಿಗೆ ನೆರವಾದ ಭಾರತ!

Coastal Times by Coastal Times
October 22, 2023
in ರಾಷ್ಟ್ರೀಯ ಸುದ್ದಿ
ಇಸ್ರೇಲ್-ಹಮಾಸ್ ಯುದ್ಧ : ಹಸಿವಿನಿಂದ ಬಳಲುತ್ತಿರುವ ಗಾಜಾದ ಜನರಿಗೆ ನೆರವಾದ ಭಾರತ!
75
VIEWS
WhatsappTelegramShare on FacebookShare on Twitter

ಹೊಸದಿಲ್ಲಿ, ಅ.22: ಇಸ್ರೇಲ್‌ನಿಂದ ದಿಗ್ಬಂಧನಕ್ಕೊಳಗಾಗಿರುವ ಗಾಝಾಗೆ ಭಾರತವು ವೈದ್ಯಕೀಯ ನೆರವು ಹಾಗೂ ಪರಿಹಾರ ಸಾಮಾಗ್ರಿಗಳನ್ನು ರವಾನಿಸಿತು ಎಂದು ವರದಿಯಾಗಿದೆ. ಇಸ್ರೇಲ್-ಹಮಾಸ್ ಯುದ್ಧದಿಂದಾಗಿ ಗಾಜಾದಲ್ಲಿ ವಾಸಿಸುವ ಲಕ್ಷಾಂತರ ಜನರು ಹಸಿವಿನಿಂದ ಬಳಲುತ್ತಿದ್ದಾರೆ. ಇಲ್ಲಿನ ಜನರು ಆಹಾರ, ನೀರು, ಔಷಧ ಮತ್ತು ಮೂಲಭೂತ ವಸ್ತುಗಳ ತೀವ್ರ ಕೊರತೆ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಭಾರತ ಸರ್ಕಾರ ಪ್ಯಾಲೆಸ್ತೀನ್ ಜನತೆಗೆ ಪರಿಹಾರ ಸಾಮಗ್ರಿ ಕಳುಹಿಸಿದೆ.

ಸುಮಾರು 6.5 ಟನ್ ವೈದ್ಯಕೀಯ ನೆರವು ಮತ್ತು 32 ಟನ್ ವಿಪತ್ತು ಪರಿಹಾರ ಸಾಮಗ್ರಿಗಳನ್ನು ಹೊತ್ತ IAF C-17 ವಿಮಾನ ಭಾನುವಾರ ಬೆಳಿಗ್ಗೆ ಘಾಜಿಯಾಬಾದ್‌ನಿಂದ ಈಜಿಪ್ಟ್‌ನ ಎಲ್-ಅರಿಶ್ ವಿಮಾನ ನಿಲ್ದಾಣಕ್ಕೆ ಹೊರಟಿತು. ಇವುಗಳಲ್ಲಿ ಅಗತ್ಯ ಜೀವ ಉಳಿಸುವ ಔಷಧಿಗಳು, ಶಸ್ತ್ರಚಿಕಿತ್ಸಾ ಸಾಮಗ್ರಿಗಳು, ಟೆಂಟ್‌ಗಳು, ಮಲಗುವ ಹಾಸಿಗೆಗಳು, ಟಾರ್ಪೌಲಿನ್‌ಗಳು, ನೈರ್ಮಲ್ಯ ಸೌಲಭ್ಯಗಳು, ನೀರು ಶುದ್ಧೀಕರಣ ಮಾತ್ರೆಗಳು ಮತ್ತು ಇತರ ಅಗತ್ಯ ವಸ್ತುಗಳು ಇವೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಭಾನುವಾರ ಮಾತನಾಡಿ, ಭಾರತವು ಪ್ಯಾಲೆಸ್ತೀನ್ ಜನರಿಗೆ ಮಾನವೀಯ ನೆರವನ್ನು ಕಳುಹಿಸಿದೆ. ಇದರಲ್ಲಿ ವೈದ್ಯಕೀಯ ನೆರವು ಮತ್ತು ವಿಪತ್ತು ಪರಿಹಾರ ಸಾಮಗ್ರಿಗಳು ಇವೆ. ತಕ್ಷಣದ ಪರಿಹಾರಕ್ಕಾಗಿ ನೀರಿನ ಬಾಟಲಿಗಳು ಮತ್ತು ನೋವು ನಿವಾರಕಗಳನ್ನು ಕಳುಹಿಸಲಾಗಿದೆ. ಸುಮಾರು 32 ಟನ್ ತೂಕದ ವಿಪತ್ತು ಪರಿಹಾರ ಸಾಮಗ್ರಿಗಳು, ಟೆಂಟ್‌ಗಳು, ಮಲಗುವ ಹಾಸಿಗೆ, ಟಾರ್ಪಾಲಿನ್‌ಗಳು, ಮೂಲಭೂತ ನೈರ್ಮಲ್ಯ ಸೌಲಭ್ಯಗಳು, ನೀರು ಶುದ್ಧೀಕರಣ ಮಾತ್ರೆಗಳು ಇತ್ಯಾದಿಗಳನ್ನು ಮಾನವೀಯ ನೆರವಾಗಿ ನೀಡಲಾಗಿದೆ ಎಂದು ಹೇಳಿದರು.

ಭಾರತೀಯ ವಾಯುಪಡೆಯ C17 ವಿಮಾನ ಪರಿಹಾರ ಸಾಮಗ್ರಿಗಳನ್ನು ಹೊತ್ತು ಬೆಳಗ್ಗೆ 8 ಗಂಟೆಗೆ ಹಿಂಡನ್ ವಾಯುನೆಲೆಯಿಂದ ಹೊರಟಿದೆ. ಮಧ್ಯಾಹ್ನ 3 ಗಂಟೆಗೆ ಈಜಿಪ್ಟ್‌ನ ಎಲ್-ಅರಿಶ್ ವಿಮಾನ ನಿಲ್ದಾಣದಲ್ಲಿ ಇದು ಲ್ಯಾಂಡ್ ಆಗಲಿದೆ. ಈಜಿಪ್ಟ್‌ನಿಂದ 20 ಸಹಾಯ ಟ್ರಕ್‌ಗಳ ಮೂಲಕ ಗಾಜಾಕ್ಕೆ ಇವುಗಳನ್ನು ಕಳುಹಿಸಲಾಗುತ್ತದೆ. ಶನಿವಾರ ಬೆಳಿಗ್ಗೆ ಗಾಜಾ ಪ್ರವೇಶಕ್ಕಾಗಿ ರಫಾ ಗಡಿಯನ್ನು ತೆರೆಯಲಾಗಿದೆ.

ಇಸ್ರೇಲ್​​ ನಿಯಂತ್ರಣಕ್ಕೆ ಒಳಗಾಗದ ರಫಾ ಗಡಿ ಒಂದೇ ಗಾಜಾಗೆ ಇರುವ ಏಕೈಕ ಮಾರ್ಗವಾಗಿದೆ. ತಮ್ಮ ಮಿತ್ರ ದೇಶವಾಗಿರುವ ಯುನೈಟೆಡ್​ ಸ್ಟೇಟ್ಸ್​ ಮನವಿಯ ಮೇರೆಗೆ ಈಜಿಪ್ಟ್​ನಿಂದ ಗಾಜಾಗೆ ನೆರವು ಸಾಗಿಸಲು ಇಸ್ರೇಲ್​ ಅನುಮತಿಸಿದೆ. ಭಾರತ ಕಳುಹಿಸಿಕೊಟ್ಟಿರುವ ಅಗತ್ಯ ವಸ್ತುಗಳು ರಫಾ ಗಡಿಯ ಮೂಲಕ ಗಾಜಾಗೆ ತಲುಪಲಿದೆ.

ವಿಶ್ವಸಂಸ್ಥೆಯ ವಿವಿಧ ಏಜೆನ್ಸಿಗಳಿಂದ ಬಂದ ನೆರವನ್ನು ಗಾಜಾಗೆ ತಲುಪಿಸುವ ಜವಾಬ್ದಾರಿಯನ್ನು ಈಜಿಪ್ಟಿನ ರೆಡ್ ಕ್ರೆಸೆಂಟ್‌ ಕಚೇರಿಯು ಹೊತ್ತಿದೆ. ನಿನ್ನೆ ಇಪ್ಪತ್ತು ಟ್ರಕ್‌ಗಳು ಈಜಿಪ್ಟಿನ ಟರ್ಮಿನಲ್ ಅನ್ನು ಪ್ರವೇಶಿಸಿದ್ದವು. ಪ್ಯಾಲೆಸ್ತೀನ್​ ಕಡೆಯ 36 ಖಾಲಿ ಟ್ರೇಲರ್‌ಗಳು ಟರ್ಮಿನಲ್‌ಗೆ ಪ್ರವೇಶಿಸಿ ಈಜಿಪ್ಟಿನ ಕಡೆಗೆ ಹೋಗಿ, ನೆರವನ್ನು ಲೋಡ್ ಮಾಡಿಕೊಂಡು ರಫಾ ಗಡಿಯ ಮೂಲಕ ಗಾಜಾಗೆ ತೆರಳಿದವು.

🇮🇳 sends Humanitarian aid to the people of 🇵🇸!

An IAF C-17 flight carrying nearly 6.5 tonnes of medical aid and 32 tonnes of disaster relief material for the people of Palestine departs for El-Arish airport in Egypt.

The material includes essential life-saving medicines,… pic.twitter.com/28XI6992Ph

— Randhir Jaiswal (@MEAIndia) October 22, 2023

Share this:

  • Facebook
  • X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಉಳ್ಳಾಲ ಹಾಡಹಗಲೇ ಗುತ್ತಿಗೆದಾರನಿಗೆ ಇರಿದು ಕಾರು ದರೋಡೆ, ಕೆಲವೇ ಗಂಟೆಗಳಲ್ಲಿ ರೌಡಿ ಹಸೈನಾರ್ ಲಾಕ್ !

Next Post

ಮಂಗಳೂರಿನಲ್ಲಿ ಅಕ್ರಮ ನೆಲೆಸಿದ್ದ ಇಬ್ಬರು ವಿದೇಶಿ ಪ್ರಜೆಗಳ ಬಂಧನ

Related Posts

ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ, ಸೋಷಿಯಲ್​ ಮೀಡಿಯಾ ಇನ್​​ಫ್ಲುಯೆನ್ಸರ್​ ಕೀರ್ತಿ ಪಟೇಲ್​ ಬಂಧನ
ರಾಷ್ಟ್ರೀಯ ಸುದ್ದಿ

ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ, ಸೋಷಿಯಲ್​ ಮೀಡಿಯಾ ಇನ್​​ಫ್ಲುಯೆನ್ಸರ್​ ಕೀರ್ತಿ ಪಟೇಲ್​ ಬಂಧನ

June 19, 2025
5
ಅಹಮದಾಬಾದ್​ ಏರ್ ಇಂಡಿಯಾ ವಿಮಾನ ದುರಂತ: ಮೃತರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ಘೋಷಿಸಿದ ಟಾಟಾ ಗ್ರೂಪ್
ರಾಷ್ಟ್ರೀಯ ಸುದ್ದಿ

ಅಹಮದಾಬಾದ್​ ಏರ್ ಇಂಡಿಯಾ ವಿಮಾನ ದುರಂತ: ಮೃತರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ಘೋಷಿಸಿದ ಟಾಟಾ ಗ್ರೂಪ್

June 13, 2025
63
Next Post
ಮಂಗಳೂರಿನಲ್ಲಿ ಅಕ್ರಮ ನೆಲೆಸಿದ್ದ ಇಬ್ಬರು ವಿದೇಶಿ ಪ್ರಜೆಗಳ ಬಂಧನ

ಮಂಗಳೂರಿನಲ್ಲಿ ಅಕ್ರಮ ನೆಲೆಸಿದ್ದ ಇಬ್ಬರು ವಿದೇಶಿ ಪ್ರಜೆಗಳ ಬಂಧನ

Discussion about this post

Recent News

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

June 19, 2025
45
16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ

16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ

June 19, 2025
139
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

June 19, 2025
16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ

16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ

June 19, 2025
ಸಿಂಗಲ್ ಸೈಟ್ ನಕ್ಷೆ, ಪ್ರಾಪರ್ಟಿ ಕಾರ್ಡ್ ಮಾಡಿಸಲು 43 ಸಾವಿರ ಲಂಚ ; ಸರ್ವೆಯರ್ ನಂದೀಶ್, ಬ್ರೋಕರ್ ದಿವಾಕರ್ ಬಂಧನ

ಸಿಂಗಲ್ ಸೈಟ್ ನಕ್ಷೆ, ಪ್ರಾಪರ್ಟಿ ಕಾರ್ಡ್ ಮಾಡಿಸಲು 43 ಸಾವಿರ ಲಂಚ ; ಸರ್ವೆಯರ್ ನಂದೀಶ್, ಬ್ರೋಕರ್ ದಿವಾಕರ್ ಬಂಧನ

June 19, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d