ಮಂಗಳೂರು, ನ.21: ಬಜ್ಪೆ ಕೆಂಜಾರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್)ಯ ಶ್ವಾನದಳದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಬಾಂಬ್ ಪತ್ತೆ ಕಾರ್ಯದಲ್ಲಿ ಮುಂಚೂಣಿಯಲ್ಲಿದ್ದ ಲಾಬ್ರಡೋರ್ ಜಾತಿಗೆ ಸೇರಿದ ಶ್ವಾನ ಲೀನಾ ಅನಾರೋಗ್ಯದಿಂದ ರವಿವಾರ ಸಾವಿಗೀಡಾಗಿದೆ.
ಕಳೆದ ವರ್ಷ ವಿಮಾನ ನಿಲ್ದಾಣದಲ್ಲಿ ಆದಿತ್ಯ ರಾವ್ ಇರಿಸಿದ್ದ ಬಾಂಬ್ ಪತ್ತೆ ಮಾಡಿದ ಹೆಗ್ಗಳಿಕೆಯು ಲೀನಾಗೆ ಇತ್ತು. ಈ ವರ್ಷದ ಫೆಬ್ರವರಿಯಿಂದ ಅನಾರೋಗ್ಯಕ್ಕೀಡಾಗಿ ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ರವಿವಾರ ಮುಂಜಾನೆ ಸಾವಿಗೀಡಾಗಿದೆ ಎಂದು ತಿಳಿದುಬಂದಿದೆ.
ಲೀನಾಳನ್ನು ಸೇನಾ ಗೌರವದೊಂದಿಗೆ ವಿಮಾನ ನಿಲ್ದಾಣದ ಆವರಣದಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು. 2013 ಮೇ 5ರಂದು ಜನಿಸಿದ ಲೀನಾ ರಾಂಚಿಯಲ್ಲಿ ಸ್ಫೋಟಕ ಪತ್ತೆ ಕಾರ್ಯಾಚರಣೆಯ ತರಬೇತಿ ಪಡೆದು ಮಂಗಳೂರು ವಿಮಾನ ನಿಲ್ದಾಣ ಶ್ವಾನದಳಕ್ಕೆ ಸೇರ್ಪಡೆಯಾಗಿತ್ತು. ಮಂಗಳೂರು ವಿಮಾನ ನಿಲ್ದಾಣದಲ್ಲಿರುವ ಶ್ವಾನದಳ ವಿಭಾಗದ ನಾಲ್ಕು ಶ್ವಾನಗಳಲ್ಲಿ ಲೀನಾ ಅತ್ಯಂತ ಚುರುಕಿನಿಂದ ಕೂಡಿತ್ತು ಎನ್ನಲಾಗಿದೆ. ದಾಖಲೆಗಳಲ್ಲಿ ಲೀನಾ ಎಂಬ ಹೆಸರಿದ್ದರೂ ಸಿಐಎಸ್‌ಎಫ್ ಸಿಬ್ಬಂದಿ ಇದನ್ನು ‘ಡೋಲಿ’ ಎಂದೇ ಕರೆಯುತ್ತಿದ್ದರು.
2020 ಜನವರಿ 12ರಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಆರೋಪಿ ಆದಿತ್ಯ ರಾವ್ ಇರಿಸಿದ್ದ ಬಾಂಬ್‌ನ್ನು ಲೀನಾ ಪತ್ತೆ ಮಾಡಿತ್ತು. ಬಳಿಕ ಸ್ಫೋಟಕ ತಜ್ಞರನ್ನು ಕರೆಸಿ ಪರಿಶೀಲಿಸಿದಾಗ ಅದು ನೈಜ ಬಾಂಬ್ ಎಂಬುದು ಸಾಬೀತಾಗಿತ್ತು
Discover more from Coastal Times Kannada
Subscribe to get the latest posts sent to your email.
Discussion about this post