• About us
  • Contact us
  • Disclaimer
Tuesday, May 26, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕುಕ್ಕರ್ ಬಾಂಬ್ ಸ್ಫೋಟದ ಸಂತ್ರಸ್ತ, ಆಟೊ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ಪರಿಹಾರ : ಎಡಿಜಿಪಿ ಅಲೋಕ್‌ ಕುಮಾರ್‌

Coastal Times by Coastal Times
November 22, 2022
in ಕರಾವಳಿ
ಕುಕ್ಕರ್ ಬಾಂಬ್ ಸ್ಫೋಟದ ಸಂತ್ರಸ್ತ, ಆಟೊ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ಪರಿಹಾರ : ಎಡಿಜಿಪಿ ಅಲೋಕ್‌ ಕುಮಾರ್‌
101
VIEWS
WhatsappTelegramShare on FacebookShare on Twitter

ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟದ ಸಂತ್ರಸ್ತ, ಆಟೊ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ಪರಿಹಾರ ದೊರಕಿಸಿಕೊಡಲು ಕ್ರಮ ಕೈಗೊಳ್ಳಲಾಗುವುದು ಎಂದು ಎಡಿಜಿಪಿ ಅಲೋಕ್‌ ಕುಮಾರ್‌ ಸೋಮವಾರ ತಿಳಿಸಿದ್ದಾರೆ. ಜನಪ್ರತಿನಿಧಿಗಳು ಭೇಟಿಯಾಗಿ ಸಾಂತ್ವನವನ್ನೂ ಹೇಳಿದ್ದಾರೆ. ಆದರೂ ಪುರುಷೋತ್ತಮ ಅವರ ಮನೆಮಂದಿಯಲ್ಲಿ ಮೂಡಿರುವ ಆತಂಕ ಕಡಿಮೆಯಾಗಿಲ್ಲ.

ಶನಿವಾರ ಸಂಜೆ ನಡೆದ ಸ್ಫೋಟದಲ್ಲಿ ಪುರುಷೋತ್ತಮ ಗಾಯಗೊಂಡ ವಿಷಯ ತಿಳಿದಾಗ ಗಾಬರಿಯಾದ ಕುಟುಂಬದವರು ಘಟನೆ ಭಯೋತ್ಪಾದನಾ ಕೃತ್ಯ ಎಂದು ಭಾನುವಾರ ಸಾಬೀತಾ ಗುತ್ತಿದ್ದಂತೆ ಇನ್ನಷ್ಟು ಕುಗ್ಗಿಹೋದರು. ಅವರೆಲ್ಲರೂ ಆಸ್ಪತ್ರೆಗೆ ಧಾವಿಸಿರುವುದರಿಂದ ಭಾನುವಾರದಿಂದ ಮನೆಗೆ ಬೀಗ ಹಾಕಲಾಗಿದೆ. ಪತ್ನಿ ಚಿತ್ರ, ಮಕ್ಕಳು ಮೇಘಶ್ರೀ ಮತ್ತು ವಿನ್ಯಶ್ರೀ ಅವರು ಪುರುಷೋತ್ತಮ ಅವರ ಚೇತರಿಕೆಗಾಗಿ ಪ್ರಾರ್ಥಿಸುತ್ತ ಆಸ್ಪತ್ರೆಯ ಆವರಣದಲ್ಲೇ ಕಾಲ ದೂಡುತ್ತಿದ್ದಾರೆ. ನಗರದ ಉಜ್ಜೋಡಿ–ಗೋರಿಗುಡ್ಡದಲ್ಲಿ  ಪುರುಷೋತ್ತಮ ಅವರ ಮನೆ. ಈ ಮನೆಯಲ್ಲಿ ಭಾರಿ ಸೌಲಭ್ಯಗಳೇನೂ ಇಲ್ಲ. ಪಿತ್ರಾರ್ಜಿತವಾಗಿ ಲಭಿಸಿರುವ ಸಣ್ಣ ಜಾಗದಲ್ಲಿ ಪುರುಷೋತ್ತಮ ಮತ್ತು ಸಹೋದರ, ಗ್ಯಾರೇಜ್‌ ನಡೆಸುತ್ತಿರುವ ನಾಗೇಶ್‌ ಒಂದೇ ಕಟ್ಟಡದಲ್ಲಿ ಎರಡು ಮನೆಗಳನ್ನು ನಿರ್ಮಿಸಿಕೊಂಡಿದ್ದಾರೆ.

‘ಪುರುಷೋತ್ತಮ ಪೂಜಾರಿ ಅವರು ಭಯೋತ್ಪಾದನಾ ಕೃತ್ಯದ ಸಂತ್ರಸ್ತ. ಈ ಘಟನೆಯಿಂದ ತುಂಬ ನಷ್ಟ ಅನುಭವಿಸಿದ್ದಾರೆ. ಸ್ಪೋಟದಿಂದ ಅವರ ದೇಹದ ಶೇ 25ರಷ್ಟು ಭಾಗ ಸುಟ್ಟು ಹೋಗಿದೆ. ರಿಕ್ಷಾಕ್ಕೂ ಹಾನಿಯಾಗಿದೆ. ಅವರಿಗೆ ಗುಣಮಟ್ಟದ ಚಿಕಿತ್ಸೆಗೆ ಒದಗಿಸುವುದಕ್ಕೂ ಕ್ರಮ ಕೈಗೊಳ್ಳಲಾಗುವುದು. ಪರಿಹಾರ ಕೊಡಿಸುವ ಬಗ್ಗೆ ಜಿಲ್ಲಾಧಿಕಾರಿ ಜೊತೆ ಚರ್ಚಿಸಲಾಗಿದೆ. ಕುಟುಂಬದ ಸದಸ್ಯರ ಜೊತೆಗೂ ಮಾತನಾಡಿದ್ದೇವೆ’ ಎಂದು ಅಲೋಕ್ ಕುಮಾರ್‌ ಹೇಳಿದರು.

ಮಗಳಿಗೆ ಮದುವೆ ನಿಶ್ಚಯ: ಪುರುಷೋತ್ತಮ ಅವರ ಹಿರಿಯ ಪುತ್ರಿ ಮೇಘಶ್ರೀ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಕಿರಿಯ ಪುತ್ರಿ ವಿನ್ಯಶ್ರೀ ವಿದ್ಯಾರ್ಥಿನಿ. ಮೇಘಶ್ರೀ ಅವರಿಗೆ ಮೂಲ್ಕಿಯ ಗಂಡಿನೊಂದಿಗೆ ಮದುವೆ ನಿಶ್ಚಯವಾಗಿದೆ. ಮುಂದಿನ ವರ್ಷದ ಮೇ ತಿಂಗಳಲ್ಲಿ ನಡೆಯಬೇಕಿರುವ ಮದುವೆಯ ಕನಸಿನಲ್ಲಿದ್ದ ಕುಟುಂಬಕ್ಕೆ ಕುಕ್ಕರ್ ಬಾಂಬ್ ಪ್ರಕರಣ ಆಘಾತ ನೀಡಿದೆ. ‘ಆಟೊ ಖರೀದಿಸಲು ಮಾಡಿರುವ ಸಾಲ ಮುಗಿಯುತ್ತ ಬಂದಿದೆ. ಮಗಳ ಮದುವೆಯ ಕನಸು ನನಸಾಗಿಸುವುದಕ್ಕಾಗಿ ಶ್ರಮಪಟ್ಟು ದುಡಿಯುತ್ತಿದ್ದರು. ಈಗ ಆರೋಗ್ಯಕ್ಕೂ– ಆಟೊಗೂ ಹಾನಿ ಆಗಿದೆ. ಭವಿಷ್ಯವು ಪ್ರಶ್ನಾರ್ಥಕ ಚಿಹ್ನೆಯಾಗಿ ಉಳಿದಿದೆ. ಸರ್ಕಾರ ನೆರವು ನೀಡಬೇಕು’ ಎಂದು ನಾಗೇಶ್ ಕೋರಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು ಸ್ಫೋಟ ಪ್ರಕರಣ- ಮೈಸೂರಿನ ಬಾಡಿಗೆ ಮನೆಯಲ್ಲಿ ಸ್ಫೋಟಕ ಸಾಮಗ್ರಿ ವಶ : ಎಡಿಜಿಪಿ ಅಲೋಕ್ ಕುಮಾರ್

Next Post

ಫಿಫಾ ವಿಶ್ವಕಪ್‌ ಫುಟ್‌ಬಾಲ್‌: ಇರಾನ್​ ಮೇಲೆ ಗೋಲಿನ ಸುರಿಮಳೆಗೈದ ಇಂಗ್ಲೆಂಡ್

Related Posts

ಅಮ್ಮ ಮಂಗಳೂರಿನಲ್ಲಿ ಮೇ 28 ಮತ್ತು29 ರಂದು ಜೀವನೋಲ್ಲಾಸದ ಸಂಭ್ರಮಾಚರಣೆ.
ಕರಾವಳಿ

ಅಮ್ಮ ಮಂಗಳೂರಿನಲ್ಲಿ ಮೇ 28 ಮತ್ತು29 ರಂದು ಜೀವನೋಲ್ಲಾಸದ ಸಂಭ್ರಮಾಚರಣೆ.

May 25, 2026
42
ಮಂಗಳೂರು: ಪ್ರಥಮ ಬಾರಿ ಏಕಕಾಲಕ್ಕೆ ಪಾಲೆಮಾರ್ ಸಮೂಹದಿಂದ ನಾಲ್ಕು ಅತ್ಯಾಧುನಿಕ ಸಭಾಭವನಗಳು ಲೋಕಾರ್ಪಣೆ
ಕರಾವಳಿ

ಮಂಗಳೂರು: ಪ್ರಥಮ ಬಾರಿ ಏಕಕಾಲಕ್ಕೆ ಪಾಲೆಮಾರ್ ಸಮೂಹದಿಂದ ನಾಲ್ಕು ಅತ್ಯಾಧುನಿಕ ಸಭಾಭವನಗಳು ಲೋಕಾರ್ಪಣೆ

May 23, 2026
73
Next Post
ಫಿಫಾ ವಿಶ್ವಕಪ್‌ ಫುಟ್‌ಬಾಲ್‌: ಇರಾನ್​ ಮೇಲೆ ಗೋಲಿನ ಸುರಿಮಳೆಗೈದ ಇಂಗ್ಲೆಂಡ್

ಫಿಫಾ ವಿಶ್ವಕಪ್‌ ಫುಟ್‌ಬಾಲ್‌: ಇರಾನ್​ ಮೇಲೆ ಗೋಲಿನ ಸುರಿಮಳೆಗೈದ ಇಂಗ್ಲೆಂಡ್

Discussion about this post

Recent News

ಆರೀಫ್ ಕೊಲೆ ಪ್ರಕರಣ ; ಹಣಕಾಸು ನೆರವು ನೀಡಿದ್ದ ಟೋಪಿ ನೌಫಾಲ್ ಸೋದರ ಇಬ್ರಾಹಿಂ ಸಿನಾನ್ ಬಂಧನ,

ಆರೀಫ್ ಕೊಲೆ ಪ್ರಕರಣ ; ಹಣಕಾಸು ನೆರವು ನೀಡಿದ್ದ ಟೋಪಿ ನೌಫಾಲ್ ಸೋದರ ಇಬ್ರಾಹಿಂ ಸಿನಾನ್ ಬಂಧನ,

May 26, 2026
13
ಅಮ್ಮ ಮಂಗಳೂರಿನಲ್ಲಿ ಮೇ 28 ಮತ್ತು29 ರಂದು ಜೀವನೋಲ್ಲಾಸದ ಸಂಭ್ರಮಾಚರಣೆ.

ಅಮ್ಮ ಮಂಗಳೂರಿನಲ್ಲಿ ಮೇ 28 ಮತ್ತು29 ರಂದು ಜೀವನೋಲ್ಲಾಸದ ಸಂಭ್ರಮಾಚರಣೆ.

May 25, 2026
42
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಆರೀಫ್ ಕೊಲೆ ಪ್ರಕರಣ ; ಹಣಕಾಸು ನೆರವು ನೀಡಿದ್ದ ಟೋಪಿ ನೌಫಾಲ್ ಸೋದರ ಇಬ್ರಾಹಿಂ ಸಿನಾನ್ ಬಂಧನ,

ಆರೀಫ್ ಕೊಲೆ ಪ್ರಕರಣ ; ಹಣಕಾಸು ನೆರವು ನೀಡಿದ್ದ ಟೋಪಿ ನೌಫಾಲ್ ಸೋದರ ಇಬ್ರಾಹಿಂ ಸಿನಾನ್ ಬಂಧನ,

May 26, 2026
ಅಮ್ಮ ಮಂಗಳೂರಿನಲ್ಲಿ ಮೇ 28 ಮತ್ತು29 ರಂದು ಜೀವನೋಲ್ಲಾಸದ ಸಂಭ್ರಮಾಚರಣೆ.

ಅಮ್ಮ ಮಂಗಳೂರಿನಲ್ಲಿ ಮೇ 28 ಮತ್ತು29 ರಂದು ಜೀವನೋಲ್ಲಾಸದ ಸಂಭ್ರಮಾಚರಣೆ.

May 25, 2026
ಬೆಂಗಳೂರು: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಯೋರ್ವರನ್ನು ಬೆದರಿಸಿ ಬರೋಬ್ಬರಿ 24 ಕೋಟಿ ರೂಪಾಯಿ ಸುಲಿಗೆ ಮಾಡಿದ ಐವರ ಬಂಧನ

ಬೆಂಗಳೂರು: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಯೋರ್ವರನ್ನು ಬೆದರಿಸಿ ಬರೋಬ್ಬರಿ 24 ಕೋಟಿ ರೂಪಾಯಿ ಸುಲಿಗೆ ಮಾಡಿದ ಐವರ ಬಂಧನ

May 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d