ಬೆಂಗಳೂರು: ಎಟಿಎಂ ಯಂತ್ರಗಳಿಗೆ ತುಂಬಿಸಲು ಕೊಂಡೊಯ್ಯುತ್ತಿದ್ದ 7.11 ಕೋಟಿ ರೂ. ಹಣ ದರೋಡೆ ಪ್ರಕರಣದ ಮೂವರು ಆರೋಪಿಗಳನ್ನು ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಸಿಎಂಎಸ್ ಸೆಕ್ಯುರಿಟೀಸ್ ಕಸ್ಟೋಡಿಯನ್ ವಾಹನದ ಮೇಲ್ವಿಚಾರಕ ರವಿ, ಮಾಜಿ ಉದ್ಯೋಗಿ ಕ್ಸೇವಿಯರ್ ಹಾಗೂ ಗೋವಿಂದಪುರ ಠಾಣೆಯ ಕಾನ್ಸ್‌ಟೇಬಲ್ ಅಣ್ಣಪ್ಪ ನಾಯ್ಕ್ ಎಂಬವರನ್ನು ಬಂಧಿಸಲಾಗಿದೆ. ಅವರಿಂದ 5.76 ಕೋಟಿ ರೂಪಾಯಿ ಹಣವನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣ ವರದಿಯಾದ 54 ಗಂಟೆಗಳೊಳಗೆ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಕೃತ್ಯದಲ್ಲಿ ಆರರಿಂದ 8 ಜನರು ಶಾಮೀಲಾಗಿರುವ ಸಾಧ್ಯತೆಯಿದೆ. ಉಳಿದ ಆರೋಪಿಗಳಿಗಾಗಿ ಹುಡುಕಾಟ ಮುಂದುವರೆಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಇಂದು ಮಾಧ್ಯಮಗೋಷ್ಟಿಯಲ್ಲಿ ಮಾಹಿತಿ ನೀಡಿದರು.
ಮೂರು ತಿಂಗಳುಗಳಿಂದ ದರೋಡೆಗೆ ಸಂಚು ರೂಪಿಸಿದ್ದ ಆರೋಪಿಗಳು, ಕೃತ್ಯಕ್ಕೆ 15 ದಿನಗಳಿಂದಲೂ ಸ್ಥಳವನ್ನು ನಿಗದಿ ಮಾಡಿದ್ದರು. ನವೆಂಬರ್ 19ರಂದು 12:48ರ ಸುಮಾರಿಗೆ ನಕಲಿ ನಂಬರ್ ಪ್ಲೇಟ್ ಅಳವಡಿಸಿದ ಕಾರಿನಲ್ಲಿ ಅಶೋಕ ಪಿಲ್ಲರ್ – ಜಯನಗರ – ಡೇರಿ ಸರ್ಕಲ್ ಮಾರ್ಗದಲ್ಲಿ ಬಂದು, ಕಸ್ಟೋಡಿಯನ್ ವಾಹನವನ್ನು ಅಡ್ಡಗಟ್ಟಿ ತಾವು ಆರ್‌ಬಿಐ ನಿಯಂತ್ರಣಾಧಿಕಾರಿಗಳೆಂದು ಭದ್ರತಾ ಸಿಬ್ಬಂದಿ ಹಾಗೂ ಕಸ್ಟೋಡಿಯನ್ ಸಿಬ್ಬಂದಿಯನ್ನು ಕೆಳಗಿಳಿಸಿದ್ದರು. ನಂತರ ಮತ್ತೋರ್ವ ಆರೋಪಿ ಕಸ್ಟೋಡಿಯನ್ ವಾಹನದೊಳಗೆ ಕುಳಿತು ಚಾಲಕನಿಗೆ ಡೇರಿ ಸರ್ಕಲ್‌ನತ್ತ ಚಲಾಯಿಸುವಂತೆ ಸೂಚಿಸಿದ್ದ ಎಂದು ಆಯುಕ್ತರು ವಿವರಿಸಿದರು.


5 ರಾಜ್ಯಗಳಲ್ಲಿ ಶೋಧ, ತನಿಖೆಗೆ 11 ತಂಡ ರಚನೆ : ಇದೇ ವೇಳೆ 5 ರಾಜ್ಯಗಳಲ್ಲಿ ಶೋಧ ನಡೆಸಲಾಗಿದ್ದು, ತನಿಖೆಗೆ ಒಟ್ಟು 11 ತಂಡಗಳನ್ನು ರಚನೆ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಾನ್‌ಸ್ಟೆಬಲ್ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಮೊದಲ 24 ಗಂಟೆಗಳ ಅಂತ್ಯದ ವೇಳೆಗೆ, ಆರೋಪಿಗಳು ಮತ್ತು ಬಳಸಿದ ವಾಹನಗಳನ್ನು ನಿರ್ದಿಷ್ಟ ಮಾಹಿತಿಯ ಮೂಲಕ ಗುರುತಿಸಲಾಯಿತು.
ಇದು ಅವರ ಬಂಧನಕ್ಕೆ ಕಾರಣವಾಯಿತು. ಆರ್‌ಬಿಐ ಅಧಿಕಾರಿಗಳಂತೆ ನಟಿಸಿದ ಗ್ಯಾಂಗ್ ಹಣದೊಂದಿಗೆ ಪರಾರಿಯಾಗಿದ್ದ ಸಂವೇದನಾಶೀಲ ದರೋಡೆಯ ಕುರಿತು ವರದಿಗಾರರಿಗೆ ವಿವರಿಸಿದ ಸಿಂಗ್, ಇಲ್ಲಿಯವರೆಗೆ 5.76 ಕೋಟಿ ರೂ. ವಶಪಡಿಸಿಕೊಳ್ಳಲಾಗಿದೆ ಮತ್ತು ಉಳಿದ ಮೊತ್ತವನ್ನು ಪತ್ತೆಹಚ್ಚಲು ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದರು.
ಸಿಸಿಟಿವಿ ಇಲ್ಲದ ಕಡೆಯಲ್ಲಿ ಆರೋಪಿಗಳು ಓಡಾಡಿದ್ದಾರೆ. ವಾಹನವನ್ನು ಸಿಸಿಟಿವಿ ಇಲ್ಲದ ಜಾಗದಲ್ಲಿ ತೆಗೆದುಕೊಂಡು ಹೋಗಿದ್ದಾರೆ. ಕೇರಳ, ತಮಿಳುನಾಡು, ಆಂಧ್ರ, ತೆಲಂಗಾಣ, ಗೋವಾದಲ್ಲಿ ಆರೋಪಿಗಳನ್ನು ಹುಡುಕಾಟ ನಡೆಸಿದ್ದಾರೆ. ಇನ್ನೂ ಹಣ ರಿಕವರಿ ಆಗಬೇಕು. 200 ಸ್ಟಾಪ್ ಬಳಕೆ ಮಾಡಲಾಗಿದೆ. 30 ಕ್ಕೂ ಹೆಚ್ಚು ಮಂದಿಯನ್ನ ವಿಚಾರಣೆ ಮಾಡಲಾಗಿದೆ. ಮೂವರು ಬಂಧಿಸಲಾಗಿದೆ ಎಂದು ಸೀಮಂತ್ ಕುಮಾರ್ ಸಿಂಗ್ ವಿವರಿಸಿದ್ದಾರೆ.
ಮೂರು ತಿಂಗಳಿಂದ ದರೋಡೆಗೆ ಸಂಚು: ಮೂರು ತಿಂಗಳುಗಳಿಂದ ದರೋಡೆಗೆ ಸಂಚು ರೂಪಿಸಿದ್ದ ಆರೋಪಿಗಳು, ಕೃತ್ಯಕ್ಕೆ 15 ದಿನಗಳಿಂದಲೂ ಸ್ಥಳವನ್ನು ನಿಗದಿ ಮಾಡಿದ್ದರು. ನವೆಂಬರ್ 19ರಂದು 12:48ರ ಸುಮಾರಿಗೆ ನಕಲಿ ನಂಬರ್ ಪ್ಲೇಟ್ ಅಳವಡಿಸಿದ ಕಾರಿನಲ್ಲಿ ಅಶೋಕ ಪಿಲ್ಲರ್ – ಜಯನಗರ – ಡೇರಿ ಸರ್ಕಲ್ ಮಾರ್ಗದಲ್ಲಿ ಬಂದು, ಕಸ್ಟೋಡಿಯನ್ ವಾಹನವನ್ನು ಅಡ್ಡಗಟ್ಟಿ ತಾವು ಆರ್‌ಬಿಐ ನಿಯಂತ್ರಣಾಧಿಕಾರಿಗಳೆಂದು ಭದ್ರತಾ ಸಿಬ್ಬಂದಿ ಹಾಗೂ ಕಸ್ಟೋಡಿಯನ್ ಸಿಬ್ಬಂದಿಯನ್ನು ಕೆಳಗಿಳಿಸಿದ್ದರು. ನಂತರ ಮತ್ತೋರ್ವ ಆರೋಪಿ ಕಸ್ಟೋಡಿಯನ್ ವಾಹನದೊಳಗೆ ಕುಳಿತು ಚಾಲಕನಿಗೆ ಡೇರಿ ಸರ್ಕಲ್‌ನತ್ತ ಚಲಾಯಿಸುವಂತೆ ಸೂಚಿಸಿದ್ದ ಎಂದು ಆಯುಕ್ತರು ವಿವರಿಸಿದರು.
Discover more from Coastal Times Kannada
Subscribe to get the latest posts sent to your email.







Discussion about this post