ಬೆಂಗಳೂರು: ರಾಜ್ಯ ಸರ್ಕಾರವು 2027 ಕ್ಯಾಲೆಂಡರ್ ವರ್ಷದ ರಜಾದಿನಗಳ ಪಟ್ಟಿಯ ಅಧಿಸೂಚನೆ ಹೊರಡಿಸಿದೆ. ಒಟ್ಟು 18 ಸಾರ್ವತ್ರಿಕ ರಜೆಗಳು ಹಾಗೂ 19 ಪರಿಮಿತ ರಜಾ ದಿನಗಳಿವೆ, ಸಾಮಾನ್ಯ ಭಾನುವಾರಗಳು ಮತ್ತು 2ನೇ ಹಾಗೂ 4ನೇ ಶನಿವಾರಗಳನ್ನು ಹೊರತುಪಡಿಸಿ 2027ರ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ನೀಡಿದೆ. ಈ ಪಟ್ಟಿ ಇಲ್ಲಿದೆ…
ಧಾರ್ಮಿಕ, ರಾಷ್ಟ್ರೀಯ ಹಬ್ಬಗಳಿಗೆ ರಜೆ ; ಈ ರಜಾ ಪಟ್ಟಿಯಲ್ಲಿ ಭಾನುವಾರಗಳಂದು ಬರುವ ಮಹಾವೀರ ಜಯಂತಿ (18.04.2007), ಬಸವೇಶ್ವರ ಜಯಂತಿ (09.05.2027), ಸ್ವಾತಂತ್ರ್ಯ ದಿನಾಚರಣೆ ಮತ್ತು ಈದ್-ಮಿಲಾದ್ (15.08.2027) ಹಾಗೂ ವಿಜಯ ದಶಮಿ (10.10.2027) ಮತ್ತು ಎರಡನೇ ಶನಿವಾರದಂದು ಬರುವ ಮಹಾನವಮಿ/ಆಯುಧಪೂಜೆ (09.10.2027) ಹಾಗೂ ನಾಲ್ಕನೇ ಶನಿವಾರದಂದು ಬರುವ ಕ್ರಿಸ್ಮಸ್ (25.12.2027) ಅನ್ನು ನಮೂದಿಸಿಲ್ಲ.
ಸಾರ್ವತ್ರಿಕ ರಜಾ ದಿನಗಳಲ್ಲಿ ರಾಜ್ಯಾದ್ಯಂತ ಸರ್ಕಾರಿ ಕಚೇರಿಗಳು ಮುಚ್ಚಲ್ಪಡುತ್ತವೆ. ಕಚೇರಿಯ ಅಗತ್ಯ ಕೆಲಸವನ್ನು ವಿಲೇವಾರಿ ಮಾಡುವ ಬಗ್ಗೆ, ಇಲಾಖಾ ಮುಖ್ಯಸ್ಥರುಗಳು ಸೂಕ್ತ ವ್ಯವಸ್ಥೆ ಮಾಡುವಂತೆ ಸೂಚಿಸಲಾಗಿದೆ. ಈ ಪಟ್ಟಿಯಲ್ಲಿ ಸೇರಿಸಲಾಗಿರುವ ಮುಸ್ಲಿಂ ಬಾಂಧವರ ಹಬ್ಬಗಳು ನಿಗದಿತ ದಿನಾಂಕದಂದು ಬೀಳದಿದ್ದರೆ ಸರ್ಕಾರಿ ಸೇವೆಯಲ್ಲಿರುವ ಮುಸ್ಲಿಂರಿಗೆ ನಿಗದಿತ ರಜೆಗೆ ಬದಲಾಗಿ ಹಬ್ಬದ ದಿವಸ ರಜೆ ಮಂಜೂರು ಮಾಡಬಹುದಾಗಿದೆ.


3.09.2027 (ಶುಕ್ರವಾರ) ಕೈಲ್ ಮೂಹೂರ್ತ, 18.10.2027 (ಸೋಮವಾರ)ರ ತುಲಾ ಸಂಕ್ರಮಣ ಮತ್ತು 13.12.2027 (ಸೋಮವಾರ) ಹುತ್ತರಿ ಹಬ್ಬವನ್ನು ಆಚರಿಸಲು ಕೊಡಗು ಜಿಲ್ಲೆಗೆ ಮಾತ್ರ ಅನ್ವಯವಾಗುವಂತೆ ಸ್ಥಳೀಯ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ. ಶಿಕ್ಷಣ ಇಲಾಖೆಗೆ ಸಂಬಂಧಿಸಿದ ರಜೆಗಳಿಗೆ ಅನ್ವಯಿಸಿದಂತೆ ಪ್ರತ್ಯೇಕ ರಜಾ ದಿನಗಳ ಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಪ್ರಕಟಿಸಲಿದ್ದಾರೆ.
ಸಾರ್ವತ್ರಿಕ ರಜಾ ದಿನಗಳ ಜೊತೆಗೆ ರಾಜ್ಯ ಸರ್ಕಾರಿ ನೌಕರರು ಎರಡು ದಿವಸಗಳಿಗೆ ಮೀರದಂತೆ 2027ನೇ ವರ್ಷದಲ್ಲಿ 19 ಪರಿಮಿತ ರಜೆಯನ್ನು ಪೂರ್ವಾನುಮತಿ ಪಡೆದು ಉಪಯೋಗಿಸಿಕೊಳ್ಳಬಹುದು. ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಅಧಿಕಾರವುಳ್ಳ ಅಧಿಕಾರಿಗಳು ಪ್ರಸ್ತುತ ಅನುಮತಿಗೆ ಮಂಜೂರಾತಿ ನೀಡುವಂತೆ ಆದೇಶಿಸಲಾಗಿದೆ.


Discover more from Coastal Times Kannada
Subscribe to get the latest posts sent to your email.






Discussion about this post