• About us
  • Contact us
  • Disclaimer
Monday, September 21, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣ: ಹೆಚ್ಚುವರಿ ಪ್ಲಾಟ್‌ಫಾರಂ ಸೆಪ್ಟಂಬರ್‌ಗೆ ಸಿದ್ಧ

Coastal Times by Coastal Times
December 22, 2021
in ಕರಾವಳಿ
ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣ: ಹೆಚ್ಚುವರಿ ಪ್ಲಾಟ್‌ಫಾರಂ ಸೆಪ್ಟಂಬರ್‌ಗೆ ಸಿದ್ಧ
26
VIEWS
WhatsappTelegramShare on FacebookShare on Twitter

ಮಂಗಳೂರು 4 ಮತ್ತು 5ನೇ ಪ್ಲಾಟ್‌ಫಾರಂ ಸೆಪ್ಟಂಬರ್‌ ವೇಳೆಗೆ ಸಿದ್ಧಗೊಂಡು ರೈಲು ಸಂಚಾರಕ್ಕೆ ಲಭ್ಯವಾಗಲಿದೆ ಎಂದು ದಕ್ಷಿಣ ರೈಲ್ವೇ ಮಹಾಪ್ರಬಂಧಕ ಜಾನ್‌ ಥಾಮಸ್‌ ತಿಳಿಸಿದ್ದಾರೆ.

ಮಂಗಳೂರಿಗೆ ಮಂಗಳವಾರ ಭೇಟಿ ನೀಡಿ ರೈಲ್ವೇ ವ್ಯವಸ್ಥೆ ಹಾಗೂ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದ ಬಳಿಕ ಸೆಂಟ್ರಲ್‌ ರೈಲು ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಂಗಳೂರು ಸೆಂಟ್ರಲ್‌ನಲ್ಲಿ ಪಿಟ್‌ಲೆçನ್‌ ಕಾಮಗಾರಿ ಪ್ರಗತಿಯಲ್ಲಿದ್ದು ಮುಂದಿನ ಮಾರ್ಚ್‌ ವೇಳೆಗೆ ಪೂರ್ಣಗೊಳ್ಳಲಿದೆ. ಇದಾದ ಬಳಿಕ ಹೊಸ ಪ್ಲಾಟ್‌ಫಾರಂಗಳ ಕಾಮಗಾರಿಯನ್ನು ಕೈಗೆತ್ತಿಕೊಂಡು ಆರು ತಿಂಗಳಿನಲ್ಲಿ ಪೂರ್ಣಗೊಳಿಸಲಾಗುವುದು. ಇದರ ನಿರ್ಮಾಣಕ್ಕೆ ಅನುದಾನ ಈಗಾಗಲೇ ಬಿಡುಗಡೆಯಾಗಿದ್ದು ಗುತ್ತಿಗೆ ಪ್ರಕ್ರಿಯೆ ಕೂಡ ನಡೆದಿದೆ ಎಂದರು.

ಇನ್ನು ಹೆಚ್ಚುವರಿ ಪ್ಲಾಟ್‌ಫಾರಂಗಳ ನಿರ್ಮಾಣ ದಿಂದ ಜಿಲ್ಲೆಯ ಜನರ ಬೇಡಿಕೆಗೆ ಅನು ಗುಣವಾಗಿ ಹೆಚ್ಚಿನ ಸಂಖ್ಯೆಯಲ್ಲಿ ರೈಲು ಗಳನ್ನು ಓಡಿಸಲು ಅನುಕೂಲವಾಗಲಿದೆ ಎಂದು ಹೇಳಿದರು. ರೈಲ್ವೇ ವಿಭಾಗೀಯ ಪ್ರಬಂಧಕ ತ್ರಿಲೋಕ್‌ ಕೊಠಾರಿ ಉಪಸ್ಥಿತರಿದ್ದರು.

ರೈಲ್ವೇ ಯಾತ್ರಿ ಅಭಿವೃದ್ಧಿ ಸಮಿತಿಯಿಂದ ಮನವಿ :
ಮಂಗಳೂರು ಭಾಗದ ವಿವಿಧ ಬೇಡಿಕೆ ಗಳ ಬಗ್ಗೆ ಪಶ್ಚಿಮ ಕರಾವಳಿ ರೈಲ್ವೇ ಯಾತ್ರಿ ಅಭಿವೃದ್ಧಿ ಸಮಿತಿ ಸದಸ್ಯರು, ಜಿ.ಎಂ. ಜಾನ್‌ ಥಾಮಸ್‌ ಅವರಿಗೆ ಮನವಿ ಸಲ್ಲಿಸಿದರು.

ಅತ್ತಾವರ ಕಡೆಯಿಂದ ಎರಡನೇ ಪ್ರವೇಶ ದ್ವಾರ ಅಭಿವೃದ್ಧಿ, ಮಂಗಳೂರು ಜಂಕ್ಷನ್‌ (ಗೊಮ್ಮಟೇಶ್ವರ ಎಕ್ಸ್‌ಪ್ರೆಸ್‌) ಹಗಲು ಎಕ್ಸ್‌ಪ್ರೆಸ್‌ ರೈಲನ್ನು ಮಂಗಳೂರು ಸೆಂಟ್ರಲ್‌ವರೆಗೆ ಪರಿಷ್ಕೃತ ಸಮಯದೊಂದಿಗೆ ಓಡಿಸಬೇಕು, ರೈಲು ಸಂಖ್ಯೆ 06484/85 ಮತ್ತು 06486/06487 ಮಂಗಳೂರು- ಪುತ್ತೂರು ಪ್ಯಾಸೆಂಜರ್‌ ರೈಲನ್ನು ಸುಬ್ರಹ್ಮಣ್ಯ ರಸ್ತೆಯವರೆಗೆ ವಿಸ್ತರಿಸಬೇಕು, ರೈಲು ಸಂಖ್ಯೆ 12133/34 ಮುಂಬಯಿ ಸಿಎಸ್‌ಟಿ ಎಕ್ಸ್‌ಪ್ರೆಸ್‌ ಅನ್ನು ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಬೇಕು, ಮತ್ಸ್ಯಗಂಧ ಎಕ್ಸ್‌ಪ್ರೆಸ್‌ಗೆ ಮಂಗಳೂರು ಜಂಕ್ಷನ್‌ನಲ್ಲಿ ನಿಲುಗಡೆ ನೀಡಬೇಕು ಮುಂತಾದ ಬೇಡಿಕೆಗಳನ್ನು ಸಲ್ಲಿಸಲಾಯಿತು. ಬೇಡಿಕೆಗಳನ್ನು ಪರಿಶೀಲಿ ಸುವುದಾಗಿ ಮಹಾಪ್ರಬಂಧಕರು ಭರವಸೆ ನೀಡಿದರು.

ರೈಲ್ವೇ ಬಳಕೆದಾರರ ಸಲಹಾ ಸಮಿತಿಯ ಸದಸ್ಯರಾದ ಹನುಮಂತ ಕಾಮತ್‌, ಅಹ್ಮದ್‌ ಬಾವ, ಪಶ್ಚಿಮ ಕರಾವಳಿ ರೈಲ್ವೇ ಯಾತ್ರಿ ಅಭಿವೃದ್ಧಿ ಸಮಿತಿಯ ಅನಿಲ್‌ ಹೆಗ್ಡೆ, ಜಿ.ಕೆ. ಭಟ್‌ ಉಪಸ್ಥಿತರಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಬೆಂಗಳೂರು: ಎಂಇಎಸ್‌ ನಿಷೇಧಿಸಲು ಆಗ್ರಹಿಸಿ ಡಿ.31ಕ್ಕೆ ಕರ್ನಾಟಕ ಬಂದ್‌ಗೆ ಕರೆ

Next Post

ಮಂಗಳೂರು: ಕ್ರಿಸ್ಮಸ್, ಹೊಸ ವರ್ಷಾಚರಣೆಗೆ ದ.ಕ. ಜಿಲ್ಲೆಗೆ ಮಾರ್ಗಸೂಚಿ ಪ್ರಕಟ

Related Posts

ಮಂಗಳೂರು : ಮೀನುಗಾರಿಕೆ ಧಕ್ಕೆಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ, ಹಳೆ ಬಂದರಿನಲ್ಲಿ ವ್ಯವಹಾರ ಸ್ಥಗಿತ
ಕರಾವಳಿ

ಮಂಗಳೂರು : ಮೀನುಗಾರಿಕೆ ಧಕ್ಕೆಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ, ಹಳೆ ಬಂದರಿನಲ್ಲಿ ವ್ಯವಹಾರ ಸ್ಥಗಿತ

September 19, 2026
64
ಮಂಗಳೂರಿಗೆ ‘ಮಂಗಳೂರು ಐ’ ಆಕಾಶಗೋಪುರ ಗಿಫ್ಟ್: 32,611 ಕೋಟಿ ರೂ. ಮೊತ್ತದ ಬೃಹತ್ ಯೋಜನೆಗಳಿಗೆ ಅನುಮೋದನೆ
ಕರಾವಳಿ

ಮಂಗಳೂರಿಗೆ ‘ಮಂಗಳೂರು ಐ’ ಆಕಾಶಗೋಪುರ ಗಿಫ್ಟ್: 32,611 ಕೋಟಿ ರೂ. ಮೊತ್ತದ ಬೃಹತ್ ಯೋಜನೆಗಳಿಗೆ ಅನುಮೋದನೆ

September 19, 2026
56
Next Post
ಮಂಗಳೂರು: ಕ್ರಿಸ್ಮಸ್, ಹೊಸ ವರ್ಷಾಚರಣೆಗೆ ದ.ಕ. ಜಿಲ್ಲೆಗೆ ಮಾರ್ಗಸೂಚಿ ಪ್ರಕಟ

ಮಂಗಳೂರು: ಕ್ರಿಸ್ಮಸ್, ಹೊಸ ವರ್ಷಾಚರಣೆಗೆ ದ.ಕ. ಜಿಲ್ಲೆಗೆ ಮಾರ್ಗಸೂಚಿ ಪ್ರಕಟ

Discussion about this post

Recent News

ಮಂಗಳೂರು : ಮೀನುಗಾರಿಕೆ ಧಕ್ಕೆಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ, ಹಳೆ ಬಂದರಿನಲ್ಲಿ ವ್ಯವಹಾರ ಸ್ಥಗಿತ

ಮಂಗಳೂರು : ಮೀನುಗಾರಿಕೆ ಧಕ್ಕೆಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ, ಹಳೆ ಬಂದರಿನಲ್ಲಿ ವ್ಯವಹಾರ ಸ್ಥಗಿತ

September 19, 2026
64
ಮಂಗಳೂರಿಗೆ ‘ಮಂಗಳೂರು ಐ’ ಆಕಾಶಗೋಪುರ ಗಿಫ್ಟ್: 32,611 ಕೋಟಿ ರೂ. ಮೊತ್ತದ ಬೃಹತ್ ಯೋಜನೆಗಳಿಗೆ ಅನುಮೋದನೆ

ಮಂಗಳೂರಿಗೆ ‘ಮಂಗಳೂರು ಐ’ ಆಕಾಶಗೋಪುರ ಗಿಫ್ಟ್: 32,611 ಕೋಟಿ ರೂ. ಮೊತ್ತದ ಬೃಹತ್ ಯೋಜನೆಗಳಿಗೆ ಅನುಮೋದನೆ

September 19, 2026
56
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು : ಮೀನುಗಾರಿಕೆ ಧಕ್ಕೆಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ, ಹಳೆ ಬಂದರಿನಲ್ಲಿ ವ್ಯವಹಾರ ಸ್ಥಗಿತ

ಮಂಗಳೂರು : ಮೀನುಗಾರಿಕೆ ಧಕ್ಕೆಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ, ಹಳೆ ಬಂದರಿನಲ್ಲಿ ವ್ಯವಹಾರ ಸ್ಥಗಿತ

September 19, 2026
ಮಂಗಳೂರಿಗೆ ‘ಮಂಗಳೂರು ಐ’ ಆಕಾಶಗೋಪುರ ಗಿಫ್ಟ್: 32,611 ಕೋಟಿ ರೂ. ಮೊತ್ತದ ಬೃಹತ್ ಯೋಜನೆಗಳಿಗೆ ಅನುಮೋದನೆ

ಮಂಗಳೂರಿಗೆ ‘ಮಂಗಳೂರು ಐ’ ಆಕಾಶಗೋಪುರ ಗಿಫ್ಟ್: 32,611 ಕೋಟಿ ರೂ. ಮೊತ್ತದ ಬೃಹತ್ ಯೋಜನೆಗಳಿಗೆ ಅನುಮೋದನೆ

September 19, 2026
ಮಂಗಳೂರು: ತುಳು ಭಾಷೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ – ಸಿಎಂ ಘೋಷಣೆ, ಮಂಗಳೂರಿನಲ್ಲಿ ಸಂಭ್ರಮಾಚರಣೆ

ಮಂಗಳೂರು: ತುಳು ಭಾಷೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ – ಸಿಎಂ ಘೋಷಣೆ, ಮಂಗಳೂರಿನಲ್ಲಿ ಸಂಭ್ರಮಾಚರಣೆ

September 18, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d