• About us
  • Contact us
  • Disclaimer
Monday, March 16, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಜ.24ರಿಂದ 28ರವರೆಗೆ ಮಂಗಳೂರು ಸ್ಟ್ರೀಟ್ ಫುಡ್ ಫೆಸ್ಟಿವಲ್

Coastal Times by Coastal Times
January 23, 2024
in ಕರಾವಳಿ
ಜ.24ರಿಂದ 28ರವರೆಗೆ ಮಂಗಳೂರು ಸ್ಟ್ರೀಟ್ ಫುಡ್ ಫೆಸ್ಟಿವಲ್
45
VIEWS
WhatsappTelegramShare on FacebookShare on Twitter

ಮಂಗಳೂರು, ಜ.23: “ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಜ.24ರಿಂದ 28ರವರೆಗೆ ಮಂಗಳೂರು ಸ್ಟ್ರೀಟ್ ಫುಡ್ ಫೆಸ್ಟಿವಲ್ ದ್ವಿತೀಯ ಆವೃತ್ತಿಯ ಕಾರ್ಯಕ್ರಮ ಆಯೋಜಿಸಲಾಗಿದೆ” ಎಂದು ಶಾಸಕ ಡಿ.ವೇದವ್ಯಾಸ ಕಾಮತ್ ನಗರದ ಖಾಸಗಿ ಹೊಟೇಲಿನಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.

“ಕಳೆದ ಬಾರಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ನನ್ನ ಮಾರ್ಗದರ್ಶನದಲ್ಲಿ ಸ್ಟ್ರೀಟ್ ಫುಡ್ ಫಿಯೆಸ್ಟ ಯಶಸ್ವಿಯಾಗಿದ್ದು ಜ.24ರ ಸಂಜೆ 7 ಗಂಟೆಗೆ ಅಧಿಕೃತ ಚಾಲನೆ ದೊರೆಯಲಿದೆ. ಕಳೆದ ವರ್ಷದ ಮಂಗಳೂರಿನ ಸ್ಟ್ರೀಟ್ ಫುಡ್ ಫಿಯೆಸ್ಟ ಲಕ್ಷಾಂತರ ಜನರನ್ನು ಆಕರ್ಷಿಸಿ ಭಾರೀ ಜನಮನ್ನಣೆ ಪಡೆದು ಅತ್ಯಂತ ಯಶಸ್ವಿಯಾಗಿತ್ತು. ಆ ಯಶಸ್ಸು ಸೀಸನ್ -2ಗೆ ಪ್ರೇರಣೆಯಾಗಿದ್ದು, ಈಗಾಗಲೇ ಸಾರ್ವಜನಿಕ ವಲಯದಿಂದ ಅತ್ಯುತ್ತಮ ಸ್ಪಂದನೆ ಹಾಗೂ ನಿರೀಕ್ಷೆ ಲಭಿಸಿದೆ” ಎಂದರು.

“ಕರಾವಳಿ ವಸ್ತು ಪ್ರದರ್ಶನ ಮೈದಾನದಿಂದ ನಾರಾಯಣ ಗುರು ವೃತ್ತ, ಮಣ್ಣಗುಡ್ಡ ಗುರ್ಜಿ ವೃತ್ತ, ಕೆನರಾ ಉರ್ವದವರೆಗೆ ಪ್ರತಿ ನಿತ್ಯ ಸಂಜೆ 4ರಿಂದ ರಾತ್ರಿ 10.30 ರವರೆಗೆ (ಕೊನೆಯ ಮೂರು ದಿನ, ಶುಕ್ರವಾರ ಶನಿವಾರ ಮತ್ತು ರವಿವಾರ ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 10.30 ತನಕ) ಸ್ಟ್ರೀಟ್ ಫುಡ್ ಫಿಯೆಸ್ಟ ನಡೆಯಲಿದೆ. 160 ವಿಶೇಷ ಆಹಾರ ಮಳಿಗೆಗಳನ್ನು ಅಂತಿಮಗೊಳಿಸಲಾಗಿದೆ. ರಾಜ್ಯ-ದೇಶದ ವಿವಿಧ ಶೈಲಿಯ ಸಾಂಪ್ರದಾಯಿಕ ಆಹಾರವನ್ನು ಪರಿಚಯಿಸಲಾಗುತ್ತಿದೆ ಎಂದು ವೇದವ್ಯಾಸ ಕಾಮತ್ ಹೇಳಿದರು.

ಗ್ರಾಹಕರಿಗೆ ತುಳುನಾಡಿನ ಸಾಂಪ್ರದಾಯಿಕ ಆಹಾರ ಶೈಲಿ ಮಾತ್ರವಲ್ಲದೆ ಉತ್ತರ ಕರ್ನಾಟಕ, ಗುಜರಾತಿ, ಆಂಧ್ರ, ಪಂಜಾಬಿ ಸೇರಿದಂತೆ ದಕ್ಷಿಣ ಭಾರತೀಯ, ಉತ್ತರ ಭಾರತೀಯ, ಸಸ್ಯಾಹಾರಿ, ಮಾಂಸಾಹಾರಿ, ಹೀಗೆ ಬಹು ಬೇಡಿಕೆಯ ವಿವಿಧ ಶೈಲಿಯ ಸಾಂಪ್ರದಾಯಿಕ ಆಹಾರ ಮಳಿಗೆಗಳು ಇರಲಿವೆ.

ಈ ಬಾರಿ ಡಿಜಿಟಲ್ ವಹಿವಾಟಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಗ್ರಾಹಕರು ಹಾಗೂ ಮಳಿಗೆದಾರರ ನಡುವೆ ನಗದು ಅಥವಾ ಕ್ಯಾಶ್ ರೂಪದ ವ್ಯವಹಾರಕ್ಕಿಂತ ಎಲ್ಲಾ ಮಳಿಗೆದಾರರಿಗೂ ನೀಡಲಾಗಿರುವ

ಪ್ರತ್ಯೇಕ ಕ್ಯೂಆರ್ ಕೋಡ್ ಸ್ಕ್ಯಾನ್ ಬಳಸಲು ಹೆಚ್ಚಿನ ಉತ್ತೇಜನ ನೀಡಲಾಗುತ್ತಿದೆ. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತಿರಲು ಈ ಬಾರಿ ಕ್ರಮಬದ್ಧವಾದ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡಲಾಗಿದ್ದು, ಕೊಟ್ಟಾರ ಚೌಕಿ ಕಡೆಯಿಂದ ಬರುವ ವಾಹನಗಳಿಗೆ ಉರ್ವ ಚರ್ಚ್ ಆವರಣ, ಉರ್ವ ಆಟದ ಮೈದಾನ, ಹಾಗೂ ಲೇಡಿಹಿಲ್ ವಿಕ್ಟೋರಿಯಾ ಕಾಲೇಜು ಆವರಣದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

ಹಾಗೆಯೇ ಲಾಲ್ ಬಾಗ್ ಕಡೆಯಿಂದ ಬರುವ ವಾಹನಗಳಿಗೆ ಕೆನರಾ ಉರ್ವ ಶಾಲೆಯ ಆವರಣ ಮತ್ತು ಕರಾವಳಿ ಉತ್ಸವ ಮೈದಾನದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಈ ನಿಗದಿತ ಸ್ಥಳಗಳಲ್ಲದೇ, ರಸ್ತೆಯ ಬದಿಯಲ್ಲಿ ಎಲ್ಲಿಯೂ ವಾಹನ ಪಾರ್ಕಿಂಗ್ ಮಾಡದೇ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

ಕಿಡ್ ಜೋನ್ ಗೆ ವಿಶೇಷ ಪ್ರಾಧಾನ್ಯತೆ: ಕಳೆದ ಬಾರಿ ಇದ್ದಂತಹ ಹತ್ತು ಹಲವು ಮನರಂಜನಾ ಕಾರ್ಯಕ್ರಮಗಳು ಈ ಬಾರಿಯೂ ಸಹ ಇರಲಿದ್ದು ಮಕ್ಕಳ ಆಟದ ಜೋನ್ ಗೆ ವಿಶೇಷ ಪ್ರಾಧಾನ್ಯತೆ ನೀಡಲಾಗಿದ್ದು, ಉತ್ಸವದ ಸಮಯದಲ್ಲಿ ಹಲವು ವೇದಿಕೆಗಳಲ್ಲಿ ಏಕಕಾಲಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವವನ್ನು ವೇದಿಕೆಗಳಲ್ಲಿ ಆಚರಿಸಲು ಅವಕಾಶ ಕಲ್ಪಿಸಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಗೌರವಾಧ್ಯಕ್ಷ ಗಿರಿಧರ್ ಶೆಟ್ಟಿ, ಅಧ್ಯಕ್ಷ ದಿವಾಕರ್ ಪಾಂಡೇಶ್ವರ್, ರಾಘವೇಂದ್ರ ಹೊಳ್ಳ, ನಿರ್ದೇಶಕರಾದ ಯತೀಶ್ ಬೈಕಂಪಾಡಿ, ಉದಯ ಪೂಜಾರಿ ಉಪಸ್ಥಿತರಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು ಕಥೊಲಿಕ ಕಾರಿಸ್ಮಾಟಿಕ ನವೀಕರಣದ ‘ಗೋಲ್ಡನ್ ಜುಬಿಲಿ ಮಹಾ ಸಮ್ಮೇಳನ’

Next Post

ಪುತ್ತೂರು: ಹಿಂದೂ ಮುಖಂಡ ಅವಿನಾಶ್ ಪುರುಷರಕಟ್ಟೆ ಗಡಿಪಾರಿಗೆ ಆದೇಶ

Related Posts

ಉಡುಪಿ: ಕಟಪಾಡಿ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ ; ಅನಿಲ ಸೋರಿಕೆ ಹಿನ್ನೆಲೆ ಉಡುಪಿ- ಮಂಗಳೂರು ಸಂಚಾರಕ್ಕೆ ಪರ್ಯಾಯ ರಸ್ತೆಗೆ ಸೂಚನೆ
ಕರಾವಳಿ

ಉಡುಪಿ: ಕಟಪಾಡಿ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ ; ಅನಿಲ ಸೋರಿಕೆ ಹಿನ್ನೆಲೆ ಉಡುಪಿ- ಮಂಗಳೂರು ಸಂಚಾರಕ್ಕೆ ಪರ್ಯಾಯ ರಸ್ತೆಗೆ ಸೂಚನೆ

March 16, 2026
31
ಶಿರಾಡಿ: ಕೆಎಸ್ಸಾರ್ಟಿಸಿ ಬಸ್‌ ಮತ್ತು ಕಾರು ಮುಖಾಮುಖಿಯಾಗಿ ಢಿಕ್ಕಿ ಮೂರು ಮಂದಿ ಸ್ಥಳದಲ್ಲೇ ಮೃತ್ಯು
ಕರಾವಳಿ

ಶಿರಾಡಿ: ಕೆಎಸ್ಸಾರ್ಟಿಸಿ ಬಸ್‌ ಮತ್ತು ಕಾರು ಮುಖಾಮುಖಿಯಾಗಿ ಢಿಕ್ಕಿ ಮೂರು ಮಂದಿ ಸ್ಥಳದಲ್ಲೇ ಮೃತ್ಯು

March 14, 2026
44
Next Post
ಪುತ್ತೂರು: ಹಿಂದೂ ಮುಖಂಡ ಅವಿನಾಶ್ ಪುರುಷರಕಟ್ಟೆ ಗಡಿಪಾರಿಗೆ ಆದೇಶ

ಪುತ್ತೂರು: ಹಿಂದೂ ಮುಖಂಡ ಅವಿನಾಶ್ ಪುರುಷರಕಟ್ಟೆ ಗಡಿಪಾರಿಗೆ ಆದೇಶ

Discussion about this post

Recent News

ಉಡುಪಿ: ಕಟಪಾಡಿ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ ; ಅನಿಲ ಸೋರಿಕೆ ಹಿನ್ನೆಲೆ ಉಡುಪಿ- ಮಂಗಳೂರು ಸಂಚಾರಕ್ಕೆ ಪರ್ಯಾಯ ರಸ್ತೆಗೆ ಸೂಚನೆ

ಉಡುಪಿ: ಕಟಪಾಡಿ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ ; ಅನಿಲ ಸೋರಿಕೆ ಹಿನ್ನೆಲೆ ಉಡುಪಿ- ಮಂಗಳೂರು ಸಂಚಾರಕ್ಕೆ ಪರ್ಯಾಯ ರಸ್ತೆಗೆ ಸೂಚನೆ

March 16, 2026
31
LPG ಹೊತ್ತ 2 ಹಡಗುಗಳು ಹಾರ್ಮುಜ್ ಜಲಸಂಧಿ ದಾಟಿದ್ದು, ಇದೇ 16ರಂದು ಭಾರತ ತಲುಪಲಿವೆ ಕೇಂದ್ರ ಸರ್ಕಾರ

LPG ಹೊತ್ತ 2 ಹಡಗುಗಳು ಹಾರ್ಮುಜ್ ಜಲಸಂಧಿ ದಾಟಿದ್ದು, ಇದೇ 16ರಂದು ಭಾರತ ತಲುಪಲಿವೆ ಕೇಂದ್ರ ಸರ್ಕಾರ

March 15, 2026
44
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಉಡುಪಿ: ಕಟಪಾಡಿ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ ; ಅನಿಲ ಸೋರಿಕೆ ಹಿನ್ನೆಲೆ ಉಡುಪಿ- ಮಂಗಳೂರು ಸಂಚಾರಕ್ಕೆ ಪರ್ಯಾಯ ರಸ್ತೆಗೆ ಸೂಚನೆ

ಉಡುಪಿ: ಕಟಪಾಡಿ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ ; ಅನಿಲ ಸೋರಿಕೆ ಹಿನ್ನೆಲೆ ಉಡುಪಿ- ಮಂಗಳೂರು ಸಂಚಾರಕ್ಕೆ ಪರ್ಯಾಯ ರಸ್ತೆಗೆ ಸೂಚನೆ

March 16, 2026
LPG ಹೊತ್ತ 2 ಹಡಗುಗಳು ಹಾರ್ಮುಜ್ ಜಲಸಂಧಿ ದಾಟಿದ್ದು, ಇದೇ 16ರಂದು ಭಾರತ ತಲುಪಲಿವೆ ಕೇಂದ್ರ ಸರ್ಕಾರ

LPG ಹೊತ್ತ 2 ಹಡಗುಗಳು ಹಾರ್ಮುಜ್ ಜಲಸಂಧಿ ದಾಟಿದ್ದು, ಇದೇ 16ರಂದು ಭಾರತ ತಲುಪಲಿವೆ ಕೇಂದ್ರ ಸರ್ಕಾರ

March 15, 2026
ಶಿರಾಡಿ: ಕೆಎಸ್ಸಾರ್ಟಿಸಿ ಬಸ್‌ ಮತ್ತು ಕಾರು ಮುಖಾಮುಖಿಯಾಗಿ ಢಿಕ್ಕಿ ಮೂರು ಮಂದಿ ಸ್ಥಳದಲ್ಲೇ ಮೃತ್ಯು

ಶಿರಾಡಿ: ಕೆಎಸ್ಸಾರ್ಟಿಸಿ ಬಸ್‌ ಮತ್ತು ಕಾರು ಮುಖಾಮುಖಿಯಾಗಿ ಢಿಕ್ಕಿ ಮೂರು ಮಂದಿ ಸ್ಥಳದಲ್ಲೇ ಮೃತ್ಯು

March 14, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d