ಮಂಗಳೂರು: ಮಂಗಳೂರಿನಲ್ಲಿ ಜೋಡಿ ಕೊಲೆಗೈದು ದರೋಡೆ ಮಾಡಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ದಂಡುಪಾಳ್ಯ ಗ್ಯಾಂಗ್ ನ ಸದಸ್ಯನೋರ್ವನನ್ನು 29 ವರ್ಷಗಳ ಬಳಿಕ ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ದಂಡುಪಾಳ್ಯ ಗ್ಯಾಂಗ್ ನ ಆರೋಪಿ ಚಿಕ್ಕ ಹನುಮ @ ಚಿಕ್ಕ ಹನುಮಂತಪ್ಪ (50) ಬಂಧಿತ ವ್ಯಕ್ತಿ. ಈತನನ್ನು ಆಂಧ್ರಪ್ರದೇಶದಲ್ಲಿ ಮಂಗಳೂರಿನ ಉರ್ವಾ ಪೊಲೀಸರು ಬಂಧಿಸಿದ್ದಾರೆ.
ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 1997 ರಲ್ಲಿ ಜೋಡಿ ಕೊಲೆ ನಡೆದಿತ್ತು. 11-10-1997 ರಂದು ಮಧ್ಯರಾತ್ರಿ ಮಂಗಳೂರು ತಾಲೂಕು ಉರ್ವಾ ಮಾರಿಗುಡಿ ಕ್ರಾಸ್ ಬಳಿಯ ಇರುವ ಅನ್ವರ್ ಮಹಲ್ ಎಂಬ ಮನೆಗೆ ನುಗ್ಗಿದ್ದ, ದಂಡುಪಾಳ್ಯ ಗ್ಯಾಂಗ್ ಎಂದೇ ಕುಖ್ಯಾತಿ ಪಡೆದಿರುವ ಗ್ಯಾಂಗ್ ನ ಸಹಚರಗಳಾದ ದೊಡ್ಡ ಹನುಮ @ ಹನುಮ ವೆಂಕಟೇಶ @ ಚಂದ್ರ, ಮುನಿಕೃಷ್ಣ @ ಕೃಷ್ಣ ನಲ್ಲತಿಮ್ಮ @ ತಿಮ್ಮ, ಕೃಷ್ಣ @ ದಂಡುಪಾಳ್ಯ ಕೃಷ್ಣ @ ನಾಗರಾಜ, ಚಿಕ್ಕ ಹನುಮ , ಕೃಷ್ಣಾಡು @ ಕೃಷ್ಣ , ವೆಂಕಟೇಶ್ @ ರಮೇಶ್ ಇವರುಗಳು ಜೋಡಿ ಕೊಲೆ ಮಾಡಿದ್ದರು. ಮನೆಯಲ್ಲಿದ್ದ 80 ವರ್ಷದ ಲೂವಿಸ್ ಡಿಮೆಲ್ಲೋ ಹಾಗೂ 19 ವರ್ಷದ ರಂಜಿತ್ ವೇಗಸ್ ಎಂಬವರನ್ನು ಕೊಲೆ ಮಾಡಿ ಚಿನ್ನಾಭರಣಗಳ್ನು ದೊಚಿಕೊಂಡು ಹೋಗಿದ್ದರು.
ಇವರ ಮೇಲೆ ತನಿಖೆ ನಡೆಸಿ ದೋಷರೋಪಣಾ ಪಟ್ಟಿಯನ್ನು ನಾಯಾಲಯಕ್ಕೆ ಸಲ್ಲಿಸಿದ್ದು, 34 ನೇ ಅಪರ ನಗರ ಸಿವಿಲ್ ಮತ್ತು ಸೆಷನ್ ನ್ಯಾಯಾಧೀಶರು (ವಿಶೇಷ ನ್ಯಾಯಾಲಯ), ಕೇಂದ್ರ ಕಾರಾಗೃಹ ಆವರಣ ಪರಪ್ಪನ ಅಗ್ರಹಾರ ಬೆಂಗಳೂರು ಅವರ ಎಸ್.ಸಿ ನಂ. 728/2010 ರಂತೆ ನ್ಯಾಯಾಲಯದಲ್ಲಿ ವಿಚಾರಣೆ ಮುಕ್ತಾಯಗೊಂಡು ಇತರೆ 5 ಆಪಾದಿತರು ದೊಡ್ಡ ಹನುಮ @ ಹನುಮ ಸೇರಿ ನ್ಯಾಯಾಲಯವು ದೋಷಿ ಎಂದು ತೀರ್ಪು ನೀಡಿದೆ.
ವಿಚಾರಣಾ ನ್ಯಾಯಾಲಯವು ಐವರು ಆರೋಪಿಗಳನ್ನು ದೋಷಿಗಳೆಂದು ಘೋಷಿಸಿ, ಆರಂಭದಲ್ಲಿ ಮರಣದಂಡನೆ ವಿಧಿಸಿತ್ತು. ನಂತರ, ಅವರು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದರು ಮತ್ತು ಹೈಕೋರ್ಟ್‌ನ ನಿರ್ದೇಶನಗಳ ಆಧಾರದ ಮೇಲೆ ಶಿಕ್ಷೆಯನ್ನು ರದ್ದುಗೊಳಿಸಿ ಹೊಸದಾಗಿ ವಿಲೇವಾರಿ ಮಾಡಲು ಆದೇಶಿಸಿ, ಅವರ ವಿರುದ್ಧದ ಪ್ರಕರಣವನ್ನು ಖುಲಾಸೆಗೊಳಿಸಲಾಯಿತು. ಆದರೆ ಕರ್ನಾಟಕದಾದ್ಯಂತ ಅವರ ವಿರುದ್ಧ ಇನ್ನೂ ಪ್ರಕರಣಗಳು ಬಾಕಿ ಉಳಿದಿವೆ. ಆದರೆ ಪ್ರಕರಣದಲ್ಲಿ ಚಿಕ್ಕ ಹನುಮನನ್ನು ಖುಲಾಸೆಗೊಳಿಸಲಾಗಿಲ್ಲ. ಈ ಪ್ರಕರಣದಲ್ಲಿ ಮತ್ತು ಇತರೆ ಪ್ರಕರಣಗಳಲ್ಲಿಯೂ ಈತನನ್ನು ವಿಚಾರಣೆ ನಡೆಸಬೇಕಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಈ ಜೋಡಿ ಕೊಲೆ ಪ್ರಕರಣದಲ್ಲಿ 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ, “ ಚಿಕ್ಕ ಹನುಮ @ ಚಿಕ್ಕ ಹನುಮಂತಪ್ಪ @ ಕೆ. ಕೃಷ್ಣಪ್ಪ @ ಕೃಷ್ಣನನ್ನು ಆಂಧ್ರಪ್ರದೇಶ ರಾಜ್ಯದ ಅನ್ನಮಯ್ಯ ಜಿಲ್ಲೆಯ, ಮದನಪಲ್ಲಿ ಎಂಬಲ್ಲಿ ಉರ್ವಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಹೆಸರು ಬದಲಾಯಿಸಿಕೊಂಡಿದ್ದ ಆರೋಪಿ: ಚಿಕ್ಕ ಹನುಮ @ ಚಿಕ್ಕ ಹನುಮಂತಪ್ಪ @ ಕೆ. ಕೃಷ್ಣಪ್ಪ @ ಕೃಷ್ಣ ತನ್ನ ಬುದ್ಧಿವಂತಿಕೆಯನ್ನು ಬಳಸಿ ಚಿಕ್ಕ ಹನುಮಂತಪ್ಪ @ ಕೆ. ಕೃಷ್ಣಪ್ಪ @ ಕೃಷ್ಣ ಎಂದು ಹೆಸರು ಬದಲಾಯಿಸಿಕೊಂಡು ತಲೆಮರೆಸಿಕೊಂಡಿದ್ದ. ಈತ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ಆಂಧ್ರ ಪ್ರದೇಶದಲ್ಲಿ ತಲೆಮರೆಸಿಕೊಂಡಿದ್ದನು. ಈತನ ಮೇಲೆ ಮಂಗಳೂರಿನ JMFC 2ನೇ ನ್ಯಾಯಾಲಯವು 2010 ರಲ್ಲಿ LPC ವಾರೆಂಟ್ ಹೊರಡಿಸಿತ್ತು. ಈತನ ಮೇಲೆ ಕರ್ನಾಟಕ ರಾಜ್ಯದಲ್ಲಿ ಸುಮಾರು 13 ಕೊಲೆ, ದರೋಡೆ ಪ್ರಕರಣಗಳು ದಾಖಲಾಗಿರುವುದು ತಿಳಿದು ಬಂದಿದ್ದು, ಇದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ ಎಂದು ಕಮೀಷನರ್ ಮಾಹಿತಿ ನೀಡಿದರು.
ಈತನ ಪತ್ತೆ ಕಾರ್ಯದಲ್ಲಿ ಉರ್ವಾ ಪೊಲೀಸ್ ಠಾಣೆಯ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್.ಎಂ, ಪಿಎಸ್ಐ ಗುರಪ್ಪ ಕಾಂತಿ, ಪಿಎಸ್ಐ ಎಲ್. ಮಂಜುಳಾ ಎಎಸ್ಐ ವಿನಯ ಕುಮಾರ್ ಮತ್ತು ಸಿಬ್ಬಂದಿಗಳಾದ ಲಲಿತಲಕ್ಷ್ಮಿ, ಅನಿಲ್, ಪ್ರಮೋದ್, ಆತ್ಮಾನಂದ , ಹರೀಶ್ ಅವರು ಶ್ರಮಿಸಿದ್ದಾರೆ. ಸದ್ರಿ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಮಂಗಳೂರು ನಗರ ಪೊಲೀಸ್ ಆಯುಕ್ತರು ಪ್ರಶಂಸೆ ವ್ಯಕ್ತಪಡಿಸಿ, ಹೆಚ್ಚಿನ ಬಹುಮಾನಕ್ಕಾಗಿ ಕರ್ನಾಟಕ ರಾಜ್ಯದ ಡಿಜಿ & ಐಜಿಪಿ ಅವರಿಗೆ ಶಿಫಾರಸು ಮಾಡಲಾಗಿದೆ.
Discover more from Coastal Times Kannada
Subscribe to get the latest posts sent to your email.







Discussion about this post