ಮಂಗಳೂರು, ಮಾ.23: ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 23 ಪ್ರಕರಣಗಳಲ್ಲಿ ಜಾಮೀನು ರಹಿತ ವಾರಂಟು ಇರುವ ಆರೋಪಿ ಅಜರುದ್ದೀನ್ (29) ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಅಜರುದ್ದೀನ್ ವಿರುದ್ಧ ಮಂಗಳೂರು ನಗರ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 23 ಪ್ರಕರಣಗಳನ್ನು ಎದುರಿಸುತ್ತಿದ್ದು, 23 ಪ್ರಕರಣಗಳಲ್ಲಿಯೂ ಬಂಧನ ವಾರಂಟ್ ಜಾರಿಯಾಗಿತ್ತು. ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಕಮಿಷನರ್ ಕುಲದೀಪ್ ಜೈನ್ ಆದೇಶದಂತೆ ಸುರತ್ಕಲ್ ಠಾಣೆ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಮತ್ತವರ ತಂಡ ಬಂಧಿಸಿದೆ.
ಮಂಗಳೂರು ಉತ್ತರ ಉಪವಿಭಾಗದ ಸಹಾಯಕ ಆಯುಕ್ತರಾದ ಮನೋಜ್ ಕುಮಾರ್‌ರವರ ನಿರ್ದೇಶನದಂತೆ ದಿನಾಂಕ 22/03/2023 ರಂದು ಸುರತ್ಕಲ್ ಪೊಲೀಸ್ ಠಾಣೆಯ ನಿರೀಕ್ಷಕರಾದ ಮಹೇಶ್ ಪ್ರಸಾದ್ ನೇತೃತ್ವದಲ್ಲಿ ಪೊಲೀಸ್ ಉಪನಿರೀಕ್ಷಕರಾದ ಮಲ್ಲಿಕಾರ್ಜುನ್ ಸಿಬ್ಬಂದಿಗಳಾದ ಅಜಿತ್ ಮ್ಯಾಥ್, ಮಣಿಕಂಠ, ಕಾರ್ತಿಕ್ ಅವರ ತಂಡ ಆರೋಪಿಯನ್ನು ದಸ್ತಗಿರಿ ಮಾಡಿ ಮಾನ್ಯ ಮಂಗಳೂರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Discover more from Coastal Times Kannada
Subscribe to get the latest posts sent to your email.








Discussion about this post