• About us
  • Contact us
  • Disclaimer
Tuesday, July 1, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಚಿನ್ನದ ಆಸೆಗೆ ಬಿದ್ದು ಪ್ರಾಣ ಕಳೆದುಕೊಂಡ ಮೂವರು

Coastal Times by Coastal Times
March 23, 2024
in ಕ್ರೈಮ್ ನ್ಯೂಸ್
ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಚಿನ್ನದ ಆಸೆಗೆ ಬಿದ್ದು ಪ್ರಾಣ ಕಳೆದುಕೊಂಡ ಮೂವರು
221
VIEWS
WhatsappTelegramShare on FacebookShare on Twitter

ತುಮಕೂರು, ಮಾ.23: ತಾಲೂಕಿನ ಕುಚ್ಚಂಗಿ ಕೆರೆಯ ಬಳಿ ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮೂವರ ಶವ ಪತ್ತೆಯಾದ ಪ್ರಕರಣವು ಇದೀಗ ತಿರುವು ಪಡೆದುಕೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮೂಲದ ಮೂವರು ಚಿನ್ನದ ಆಸೆಗೆ ಬಿದ್ದು ತುಮಕೂರಿಗೆ ಹೋಗಿ ದರೋಡೆಕೋರರಿಂದ ಕೊಲೆಯಾದರು ಎನ್ನುವ ವಿಚಾರ ಬೆಳಕಿಗೆ ಬಂದಿದೆ.

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಮೂಲದ ಇಸಾಕ್ (56), ಸಾಹುಲ್ (45) ಮತ್ತು ಇಮ್ತಿಯಾಜ್ (34) ಹತ್ಯೆಯಾದವರಾಗಿದ್ದಾರೆ. ರಿಯಲ್ ಎಸ್ಟೇಟ್ ಕೆಲಸ ಮಾಡುತ್ತಿದ್ದ ಇಸಾಕ್​ಗೆ ದರೋಡೆಕೋರರು ತಮ್ಮ ಜಮೀನಿನಲ್ಲಿ ಕೃಷಿ ಮಾಡುವಾಗ ಚಿನ್ನದಹಂಡೆ ಸಿಕ್ಕಿದೆ ಅಂತ ನಕಲಿ ಚಿನ್ನವನ್ನು ತೋರಿಸಿ ಅದನ್ನು ಕಡಿಮೆ ಬೆಲೆಗೆ ಚಿನ್ನ ಕೊಡುತ್ತೇವೆ ಎಂದು ನಂಬಿಸಿ ತಮಕೂರಿಗೆ ಕರೆಸಿಕೊಂಡಿದ್ದರು. ದರೋಡೆಕೋರರ ಮಾತನ್ನು ನಂಬಿದ ಇಸಾಕ್, ಡೀಲ್ ಇದೆ ಬಾ ಅಂತಾ ತನ್ನ ಇಬ್ಬರು ಸ್ನೇಹಿತರಾದ ಸಾಹುಲ್ ಮತ್ತು ಇಮ್ತಿಯಾಜ್ ಅವರನ್ನು ಕರೆದಿದ್ದಾನೆ. ತುಮಕೂರು ಮೂಲದ ಸ್ವಾಮಿ ಎಂಬಾತನ ಪರಿಚಯದ ಮೂಲಕ ತುಮಕೂರಿಗೆ ಕಾರು ಮೂಲಕ ಹೋಗಿದ್ದರು. ಗುರುವಾರ ಸಂಜೆವರೆಗೂ ಕುಟುಂಬಸ್ಥರ ಜೊತೆ ಸಂಪರ್ಕದಲ್ಲಿದ್ದ ಇಸಾಕ್​ನ ಮೊಬೈಲ್ ಗುರುವಾರ ರಾತ್ರಿ ಸ್ವಿಚ್‌ ಆಫ್ ಆಗಿತ್ತು.

ಇನ್ನೊಂದೆಡೆ, ಮೂವರ ಶವ ಕಾರಿನಲ್ಲಿ ಪತ್ತೆಯಾಗಿರುವ ವಿಚಾರ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಅಲ್ಲದೆ, ಘಟನಾ ಸ್ಥಳದಲ್ಲಿದ್ದ ಕಾರಿನ ನಂಬರ್ ಆಧರಿಸಿ ಕಾರು ಮಾಲೀಕ ರಫೀಕ್ ಸಂಪರ್ಕ ಮಾಡಿದಾಗ ಇಸಾಕ್​ ಎಂಬಾತನಿಗೆ 15 ದಿನಗಳ ಹಿಂದೆ ಕಾರು ಕೊಟ್ಟಿದ್ದಾಗಿ ಹೇಳಿಕೊಂಡಿದ್ದಾರೆ. ಇದರಿಂದಾಗಿ ಮೃತರ ಗುರುತು ಪತ್ತೆಕಾರ್ಯ ಪೊಲೀಸರಿಗೆ ಸುಲಭವಾಯಿತು.

ಹಣ ದೋಚಲು ಮೂವರನ್ನು ಕೊಂದ ದರೋಡೆಕೋರರು : ಚಿನ್ನ ಖರೀದಿಗೆ ತಂದಿದ್ದ ಹಣ ದೋಚಲು ಮೂವರನ್ನು ಹತ್ಯೆ ಮಾಡಲಾಗಿದೆ. ನಕಲಿ ಚಿನ್ನ ತೋರಿಸಿ ಹಣ ದೋಚಲು ಮೂವರ ಮೇಲೆ ಹಲ್ಲೆಗೈದು ಕೈ, ಕಾಲು, ಕಟ್ಟಿಹಾಕಿ ಬೆಂಕಿ ಹಚ್ಚಿದ್ದರು. ಮೂವರ ಪೈಕಿ ಇಬ್ಬರ ಶವವನ್ನು ಕಾರಿನ ಡಿಕ್ಕಿಗೆ ಹಾಕಿದ್ದು, ಮತ್ತೊಬ್ಬನ ಶವವನ್ನು ಕಾರಿನ ಮಧ್ಯಭಾಗದಲ್ಲಿ ಇರಿಸಲಾಗಿತ್ತು. ಕೊಲೆ ವಿಚಾರ ತಿಳಿಯಬಾರದೆಂದು ಆರೋಪಿಗಳು ಕಾರಿಗೆ ಬೆಂಕಿ ಹಚ್ಚಿದ್ದರು. ಗುರುತು ಪತ್ತೆ ಹಚ್ಚಲು ಆಗದ ಸ್ಥಿತಿಯಲ್ಲಿ ಮೂವರ ದೇಹಗಳು ಸುಟ್ಟು ಹೋಗಿದ್ದವು.

Share this:

  • Facebook
  • X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ನಂತೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ; ಡಿವೈಡರ್ ಏರಿದ ಕಾರು ! ತೊಕ್ಕೊಟ್ಟಿನ‌ ಬಿಜೆಪಿ ಹಿರಿಯ ನಾಯಕಿ ಲಲಿತಾ ಸುಂದರ್ ಮೊಮ್ಮಗ ಬಲಿ

Next Post

20 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಗ್ಯಾಂಗ್‌ಸ್ಟರ್ ಪ್ರಸಾದ್ ಪೂಜಾರಿಯನ್ನು ಚೀನಾದಿಂದ ಭಾರತಕ್ಕೆ ಕರೆತಂದ ಮುಂಬೈ ಪೊಲೀಸರು

Related Posts

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!
ಕ್ರೈಮ್ ನ್ಯೂಸ್

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
31
ಉಳ್ಳಾಲ 2013ರಲ್ಲಿ ನಡೆದ ಮಾರಾಟ ಪ್ರಕರಣ: 12 ವರ್ಷಗಳ ಬಳಿಕ ಮೂವರ ಮೇಲಿನ ಅಪರಾಧ ಸಾಬೀತು, ಸೋಮವಾರ ಶಿಕ್ಷೆ ಪ್ರಕಟ
ಕ್ರೈಮ್ ನ್ಯೂಸ್

ಉಳ್ಳಾಲ 2013ರಲ್ಲಿ ನಡೆದ ಮಾರಾಟ ಪ್ರಕರಣ: 12 ವರ್ಷಗಳ ಬಳಿಕ ಮೂವರ ಮೇಲಿನ ಅಪರಾಧ ಸಾಬೀತು, ಸೋಮವಾರ ಶಿಕ್ಷೆ ಪ್ರಕಟ

June 28, 2025
50
Next Post
20 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಗ್ಯಾಂಗ್‌ಸ್ಟರ್ ಪ್ರಸಾದ್ ಪೂಜಾರಿಯನ್ನು ಚೀನಾದಿಂದ ಭಾರತಕ್ಕೆ ಕರೆತಂದ ಮುಂಬೈ ಪೊಲೀಸರು

20 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಗ್ಯಾಂಗ್‌ಸ್ಟರ್ ಪ್ರಸಾದ್ ಪೂಜಾರಿಯನ್ನು ಚೀನಾದಿಂದ ಭಾರತಕ್ಕೆ ಕರೆತಂದ ಮುಂಬೈ ಪೊಲೀಸರು

Discussion about this post

Recent News

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
31
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
174
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

June 28, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d