ನವದೆಹಲಿ: ಸಿಖ್ ಮೂಲಭೂತವಾದಿ, ಧರ್ಮ ಪ್ರಚಾರಕ ಅಮೃತಪಾಲ್ ಸಿಂಗ್ ಅವರನ್ನು ಬಂಧಿಸಲಾಗಿದೆ ಎಂದು ಪಂಜಾಬ್ ಪೊಲೀಸರು ತಿಳಿಸಿದ್ದಾರೆ.ಪಂಜಾಬ್ ಪೊಲೀಸ್ ಮೂಲಗಳ ಪ್ರಕಾರ ಅಮೃತಪಾಲ್ ಸಿಂಗ್ ಅವರನ್ನು ಅಸ್ಸಾಂನ ದಿಬ್ರುಗಢಕ್ಕೆ ಸ್ಥಳಾಂತರಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಮಾರ್ಚ್ 18ರಿಂದ ಅಮೃತಪಾಲ್ ಸಿಂಗ್ ವಿರುದ್ಧ ಪಂಜಾಬ್ ಪೊಲೀಸರು ಭಾರಿ ಕಾರ್ಯಾಚರಣೆ ನಡೆಸುತ್ತಿದ್ದರು. ಅಮೃತಪಾಲ್ ಸಿಂಗ್‌ನ ನೂರಾರು ಬೆಂಬಲಿಗರನ್ನು ಬಂಧಿಸಲಾಗಿದೆ. ಕೆಲವರನ್ನು ವಶಕ್ಕೆ ಪಡೆಯಲಾಗಿದೆ. ರೈಫಲ್, ರಿವಾಲ್ವರ್, ಸಜೀವ ಗುಂಡುಗಳನ್ನು ಜಪ್ತಿ ಮಾಡಲಾಗಿದೆ.
ಇತ್ತೀಚೆಗಷ್ಟೇ ಅಮೃತ್ಪಾಲ್ ಸಿಂಗ್ ಪತ್ನಿಯನ್ನು ವಶಕ್ಕೆ ಪಡೆಯಲಾಗಿತ್ತು. ಕಿರಣ್ ದೀಪ್ ಕೌರ್ ಅವರು (ಏಪ್ರಿಲ್ 20) ಲಂಡನ್ ಗೆ ವಿಮಾನ ಹತ್ತಲು ಪ್ರಯತ್ನಿಸುತ್ತಿದ್ದಾಗ ಅಮೃತಸರದ ಶ್ರೀ ಗುರು ರಾಮ್ ದಾಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ತಡೆದು ಪ್ರಶ್ನೆ ಮಾಡಿದ್ದರು, ನಂತರ ಅವರನ್ನು ವಶಕ್ಕೆ ಪಡೆದುಕೊಂಡಿದ್ದರು.
ಮಾರ್ಚ್ 18ರಂದು ಪೊಲೀಸರು ಅಮೃತ್ ಪಾಲ್ ಸಿಂಗ್ ನನ್ನು ಬಂಧಿಸಲು ತೆರಳಿದ್ದರು. ಈ ವೇಳೆ ಖಲಿಸ್ತಾನ್ ಸಹಾನುಭೂತಿಯು ಜಲಂಧರ್ ಜಿಲ್ಲೆಯಲ್ಲಿ ಪೊಲೀಸರ ಬಲೆಯಿಂದ ತಪ್ಪಿಸಿಕೊಂಡು, ವಾಹನಗಳನ್ನು ಬದಲಿಸಿ ಸಿನಿಮೀಯ ರೂಪದಲ್ಲಿ ಅಮೃತ್ ಪಾಲ್ ಎಸ್ಕೇಪ್ ಆಗಿದ್ದ. ಅಂದಿನಿಂದಲೂ ಈತನಿಗಾಗಿ ದೇಶದಲ್ಲಿ ಹುಡುಕಾಟ ನಡೆಯುತ್ತಲೇ ಇತ್ತು. ನೇಪಾಳಕ್ಕೆ ಪರಾರಿಯಾಗಿದ್ದಾರೆ ಎಂದೂ ಹೇಳಲಾಗಿತ್ತು. ಕೊನೆಗೂ ಈತನನ್ನು ಬಂಧಿಸುವಲ್ಲಿ ಪಂಜಾಬ್ ಪೊಲೀಸರು ಯಶಸ್ವಿಯಾಗಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post