ಮಂಗಳೂರು, ಮೇ 23: ಎನ್‌ಆರ್‌ಸಿ, ಸಿಎಎ ಕಾಯ್ದೆಯನ್ನು ವಿರೋಧಿಸಿ 2020ರಲ್ಲಿ ನಗರದಲ್ಲಿ ನಡೆದಿದ್ದ ಗಲಭೆಗೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂದರು ಪೊಲೀಸರು ಮುಂಬೈನಲ್ಲಿ ಬಂಧಿಸಿದ್ದಾರೆ. ನಗರ ಹೊರವಲಯದ ಅಡ್ಯಾರ್ ಸಮೀಪದ ವಳಚ್ಚಿಲ್‌ನ ರೈಲ್ವೆ ಗೇಟ್ ಬಳಿಯ ನಿವಾಸಿ ನವಾಝ್ ಶರೀಫ್(28) ಬಂಧಿತ ಆರೋಪಿ.
ಮಂಗಳೂರಿನ ಅಡ್ಯಾರ್ ಬಳಿಯ ನಿವಾಸಿ ನವಾಝ್ ಶರೀಫ್ ಎಂಬುವವರ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ನೋಂದಣಿ ಸಂಖ್ಯೆ 46/2020 ಕಲಂ 143, 147, 323, 504, 427, 307 ಆರ್/ಡಬ್ಲ್ಯು 149 ಐಪಿಸಿ ಮತ್ತು ಅಡಿಯಲ್ಲಿ ಪ್ರಕರಣಗಳು ದಾಖಲಾಗಿವೆ. ಈತ ನ್ಯಾಯಾಲಯಕ್ಕೆ ಹಾಜರಾಗದೆ ಒಂದು ವರ್ಷದ ಹಿಂದೆ ವಿದೇಶಕ್ಕೆ ಹೋಗಿ ತಲೆಮರೆಸಿಕೊಂಡಿದ್ದ. ಈತನ ವಿರುದ್ಧ ನ್ಯಾಯಾಲಯ ಹಲವು ಬಾರಿ ವಾರಂಟ್‌ಗಳನ್ನು ಹೊರಡಿಸಿತ್ತು.
ಈತ ದುಬೈನಿಂದ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಈತನ ವಿರುದ್ಧ ಬಂದರು ಠಾಣೆಯಲ್ಲಿ ಕೊಲೆಯತ್ನ ಸಹಿತ ಹಲವು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post