• About us
  • Contact us
  • Disclaimer
Monday, April 13, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಕಾಂಗ್ರೆಸ್ ನ ಮಾಜಿ ಸಚಿವ ಯು. ಟಿ. ಖಾದರ್ ನಾಮಪತ್ರ ಸಲ್ಲಿಕೆ

Coastal Times by Coastal Times
May 23, 2023
in ರಾಜಕೀಯ
ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಕಾಂಗ್ರೆಸ್ ನ ಮಾಜಿ ಸಚಿವ ಯು. ಟಿ. ಖಾದರ್ ನಾಮಪತ್ರ ಸಲ್ಲಿಕೆ
177
VIEWS
WhatsappTelegramShare on FacebookShare on Twitter

ವಿಧಾನಸೌಧ: ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಕಾಂಗ್ರೆಸ್ ನ ಮಾಜಿ ಸಚಿವ ಯು. ಟಿ. ಖಾದರ್ ನಾಮಪತ್ರ ಸಲ್ಲಿಸಿದ್ದಾರೆ. ಖಾದರ್ ಅವರ ಹೆಸರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸ್ತಾಪಿಸಿ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅನುಮೋದಿಸಿದ ಅರ್ಜಿಯನ್ನು ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿ ವಿಶಾಲಾಕ್ಷಿ ಅವರಿಗೆ ಮಂಗಳವಾರ ಸಲ್ಲಿಸಲಾಯಿತು.

ಎಚ್.ಕೆ. ಪಾಟೀಲ. ಆರ್. ವಿ. ದೇಶಪಾಂಡೆ ಸೇರಿದಂತೆ ಹಿರಿಯ ಶಾಸಕರ ಪೈಕಿ ಒಬ್ಬರನ್ನು ಸಭಾಧ್ಯಕ್ಷರನ್ನಾಗಿ ಮಾಡಲು ಕಾಂಗ್ರೆಸ್ ವರಿಷ್ಠರು‌ ಮುಂದಾಗಿದ್ದರು. ಆದರೆ ಅವರು ಯಾರೂ ಸ್ಥಾನ ವಹಿಸಿಕೊಳ್ಳಲು ಮುಂದಾಗದ ಕಾರಣ ಖಾದರ್ ಅವರನ್ನು ಆಯ್ಕೆ ಮಾಡಲಾಗಿದೆ, ಪಕ್ಷದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಸಲಹೆಯಂತೆ ಸಭಾಧ್ಯಕ್ಷ ಸ್ಥಾನ ವಹಿಸಿಕೊಳ್ಳಲು ಖಾದರ್ ಒಪ್ಪಿದ್ದಾರೆ.

ಯುಟಿ ಖಾದರ್ ಪರಿಚಯ; 

ಹೆಸರು: ಯು ಟಿ ಅಬ್ದುಲ್ ಖಾದರ್ ಫರೀದ್ BA,LLB
ತಂದೆಯ ಹೆಸರು: ಯು ಟಿ ಫರೀದ್ BA,LLB (1972,1978,1999,2004 ನಾಲ್ಕು ಬಾರಿ ಶಾಸಕರು)
ತಾಯಿಯ ಹೆಸರು : ಯು ಟಿ ನಸೀಮಾ ಫರೀದ್
ಜನ್ಮ ದಿನಾಂಕ : 12-10-1969

ಶೈಕ್ಷಣಿಕ ವಿವರ :
ಯು ಟಿ ಖಾದರ್ ರವರು ತನ್ನ LKG ಶಿಕ್ಷಣವನ್ನು ರೋಶನಿ ನಿಲಯದಲ್ಲಿ,ಒಂದರಿಂದ ನಾಲ್ಕನೇ ತರಗತಿ ವರೆಗೆ ಸೈನ್ಟ್ ಜೆರೋಝ,ನಾಲ್ಕನೇ ತರಗತಿಯಿಂದ ಪ್ರೌಢ ಶಿಕ್ಷಣದ ವರೆಗೆ ಸೈನ್ಟ್ ಅಲೋಶಿಯಸ್ ನಲ್ಲಿ ,ಪದವಿ ಪೂರ್ವ ಶಿಕ್ಷಣವನ್ನು ಮೂಡಬಿದಿರೆಯ ಮಹಾವೀರ ಕಾಲೇಜಿನಲ್ಲಿ ಕಲಿತು ನಂತರ SDM ಕಾಲೇಜಿನಲ್ಲಿ BA,LLB ಪಧವಿ ಶಿಕ್ಷಣ ಮುಗಿಸಿದರು.

ಹವ್ಯಾಸ : ಬೈಕ್ ಹಾಗೂ ಕಾರ್ ರೇಸ್ ನಲ್ಲಿ ಹೆಚ್ಚಿನ ಆಸಕ್ತಿ ಹೊಂದಿದ್ದು ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಮೋಟೋ ರೇಸ್ ಚಾಂಪಿಯನ್ಶಿಪ್ ನಲ್ಲಿ ಭಾಗವಹಿಸಿದ್ದರು.

ಕ್ರೀಡೆಯಲ್ಲಿ ಕೂಡ ಆಸಕ್ತಿ ಹೊಂದಿದ್ದು ಕ್ರಿಕೆಟ್,ಫೂಟ್ಬಾಲ್,ವಾಲಿಬಾಲ್,ಹಾಕಿ,ಟೆನ್ನಿಸ್ ಹಾಗೂ ಇತರ ಕ್ರೀಡೆಗಳನ್ನು ಆಡುತ್ತಿದ್ದರು.

ರಾಜಕೀಯ ವಿವರ :
1990ರಲ್ಲಿ NSUI ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ,1994 ರಿಂದ 1999ರ ವರೆಗೆ NSUI ಜಿಲ್ಲಾಧ್ಯಕ್ಷರಾಗಿ,1999 ರಿಂದ 2001 ರ ವರೆಗೆ NSUI ರಾಜ್ಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

2003 ರಲ್ಲಿ ಘಟಪ್ರಭ ದಲ್ಲಿ ನಡೆದ ರಾಷ್ಟ್ರ ಮಟ್ಟದ ಸೇವಾದಳ ತರಬೇತಿ ಶಿಬಿರದಲ್ಲಿ,2004 ರಲ್ಲಿ ಹಿಮಾಚಲ ಪ್ರದೇಶದ ಕಂದಘಾಟ್ ನಲ್ಲಿ ನಡೆದ ರಾಷ್ಟ್ರ ಮಟ್ಟದ ಸೇವಾದಳ ತರಬೇತಿ ಶಿಬಿರದಲ್ಲಿ ಭಾಗವಹಿಸಿ 2005ರಲ್ಲಿ ಸೇವಾದಳದ ಹೆಚ್ಚುವರಿ ಮುಖ್ಯ ಸಲಹೆಗಾರರಾಗಿ ಆಯ್ಕೆಯಾಗಿದ್ದರು.ನಂತರ ಕೆಪಿಸಿಸಿ ಸದಸ್ಯರಾಗಿ 2008 ರಲ್ಲಿ ಕೆಪಿಸಿಸಿ ಕಾರ್ಯದರ್ಶಿಯಾಗಿ ಆಯ್ಕೆಯಾದರು.

ಚುನಾವಣಾ ರಾಜಕೀಯ :
2008 ರಲ್ಲಿ ತಮ್ಮ ತಂದೆಯವರ ನಿಧನದಿಂದ ತೆರವಾದ ಶಾಸಕ ಸ್ಥಾನಕ್ಕೆ ಉಪ ಚುನಾವಣೆಯಲ್ಲಿ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿ ನಂತರ 2008,2013,2018 ಹಾಗೂ 2023 ರಲ್ಲಿ ಸತತ ಐದು ಬಾರಿ ಶಾಸಕರಾಗಿ ಆಯ್ಕೆಯಾದರು.ಅಲ್ಲದೆ ತಾವು ಶಾಸಕರಾಗಿದ್ದ 2008 ರಿಂದ 2013 ರ ಅವಧಿಯ ವಿಧಾನಸಭೆಯ ಅತ್ಯುತ್ತಮ ಕಾರ್ಯ ವೈಖರಿಗಾಗಿ ಸದನ ವೀರ ಹಾಗೂ ಶೈನಿಂಗ್ ಇಂಡಿಯಾ ಅವಾರ್ಡ್ ಪ್ರಶಸ್ತಿ ಗಳಿಸಿದರು.

2013ರ ಸಿದ್ದರಾಮಯ್ಯ ಸರಕಾರದಲ್ಲಿ ಆರೋಗ್ಯ ಸಚಿವರಾಗಿ 2016ರ ತನಕ ಕಾರ್ಯ ನಿರ್ವಹಿಸಿದರು.ಈ ಅವಧಿಯಲ್ಲಿ ರಾಜ್ಯದಲ್ಲಿ ಗುಟ್ಕಾ ನಿಷೇಧ,ಬೈಕ್ ಅಂಬ್ಯುಲೆನ್ಸ್,108,ಆರೋಗ್ಯಶ್ರೀ,ದಂತ ಭಾಗ್ಯ,ಸರಕಾರೀ ತಾಲೂಕು ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಘಟಕ,ಹರೀಶ್ ಸಾಂತ್ವನ ಯೋಜನೆ ಮುಂತಾದ ಕ್ರಾಂತಿಕಾರಿ ಯೋಜನೆಗಳನ್ನು ಜಾರಿಗೆ ತಂದು ಕೇಂದ್ರ ಸರಕಾರ ನೀಡುವ ಉತ್ತಮ ಆರೋಗ್ಯ ಸಚಿವ ಪ್ರಶಸ್ತಿ ಕೂಡ ತನ್ನದಾಗಿಸಿ ಕೊಂಡಿದ್ದರು.

ನಂತರ 2016 ರಿಂದ 2018 ರ ತನಕ ಆಹಾರ ಸಚಿವರಾಗಿ ಅಧಿಕಾರ ಸ್ವೀಕರಿಸಿ,ಬಡವರು ಪಡಿತರ ಚೀಟಿಗಾಗಿ ಸಲ್ಲಿಸಬೇಕಾಗಿದ್ದ 10 ರಿಂದ 13 ದಾಖಲೆಗಳನ್ನು ಕಡಿತಗೊಳಿಸಿ ಕೇವಲ ಆಧಾರ್ ಕಾರ್ಡ್ ಮೂಲಕ ಅರ್ಜಿ ಸಲ್ಲಿಸಿ ಮನೆ ಬಾಗಿಲಿಗೆ ರೇಷನ್ ಕಾರ್ಡ್ ತಲುಪಿಸುವ ಕ್ರಾಂತಿಕಾರಿ ಯೋಜನೆಗೆ ಚಾಲನೆ ನೀಡಿ ಇತಿಹಾಸ ಸೃಷ್ಟಿಸಿದರು.ಬಿಪಿಎಲ್ ಕಾರ್ಡು ಪಡೆಯಲು ನಿಗದಿಪಡಿಸಿದ್ದ ಆದಾಯ ಮಿತಿಯನ್ನು ಕಡಿತಗೊಳಿಸಿ ಬಿಪಿಎಲ್ ಕಾರ್ಡ್ ನಿಂದ ವಂಚಿತರಾಗಿದ್ದ ಲಕ್ಷಾಂತರ ಮಂದಿ ರೇಷನ್ ಕಾರ್ಡ್ ಪಡೆಯಲು ನೆರವಾದರು.

2018 ರ ಮೈತ್ರಿ ಸರಕಾರದಲ್ಲಿ ನಗರಾಭಿವ್ರಿದ್ದಿ ಮತ್ತು ವಸತಿ ಸಚಿವರಾಗಿ ಅಧಿಕಾರ ಸ್ವೀಕರಿಸಿ ಮಂಗಳೂರು ಸ್ಮಾರ್ಟ್ ಸಿಟಿ ಸಹಿತ ಅನೇಕ ಯೋಜನೆಗಳನ್ನು ಪರಿಚಯಿಸಿ ಯಶಶ್ವಿಯಾದರು.ಈ ಸಂದರ್ಭದಲ್ಲಿ ಕರ್ನಾಟಕ ವಸತಿ ನಿಗಮದ ಅಧ್ಯಕ್ಷರಾಗಿ,ಕರ್ನಾಟಕ ನಗರನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷರಾಗಿ,ರಾಜೀವ್ ಗಾಂಧಿ ಹೌಸಿಂಗ್ ಬೋರ್ಡ್ ನ ಅಧ್ಯಕ್ಷರಾಗಿ,ಕರ್ನಾಟಕ ಕೊಳಗೇರಿ ಮಂಡಳಿಯ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.

2021 ರಲ್ಲಿ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಉಪ ನಾಯಕರಾಗಿ ಆಯ್ಕೆಯಾಗಿ 2023 ರ ವರೆಗೆ ಕಾರ್ಯ ನಿರ್ವಹಿಸಿ ಪ್ರತೀ ಹಂತದಲ್ಲೂ ಸರಕಾರದ ನ್ಯೂನತೆಗಳನ್ನು ಸದನದಲ್ಲಿ ಪ್ರಸ್ತಾಪಿಸಿ ಸೈ ಎನಿಸಿ ಕೊಂಡರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಜೂಜಾಟಗಾರರ ಜತೆ ಶಾಮೀಲು ಆರೋಪ: ಉಳ್ಳಾಲ ಠಾಣೆಯ ಸ್ಪೆಷಲ್ ಬ್ರಾಂಚ್ ಕಾನ್ಸ್ ಟೇಬಲ್ ವಾಸುದೇವ ಚೌಹಾಣ್ ಅಮಾನತು

Next Post

ಮಂಗಳೂರು : ತಲೆಮರೆಸಿಕೊಂಡಿದ್ದ ಆರೋಪಿ ದುಬೈನಿಂದ ಹಿಂದಿರುಗುತ್ತಿದ್ದಾಗ ಬಂಧನ

Related Posts

ರಾಜ್ಯ ಸರ್ಕಾರ ನಿಗಮ ಮಂಡಳಿಗೆ ನೇಮಕ: ಮೆಸ್ಕಾಂ ಹರೀಶ್ ಕುಮಾರ್, ಕರಾವಳಿ ಪ್ರಾಧಿಕಾರಕ್ಕೆ ಗಫೂರ್, ಪ್ರವಾಸೋದ್ಯಮ ಶಾಲೆಟ್ ಪಿಂಟೋ
ರಾಜಕೀಯ

ರಾಜ್ಯ ಸರ್ಕಾರ ನಿಗಮ ಮಂಡಳಿಗೆ ನೇಮಕ: ಮೆಸ್ಕಾಂ ಹರೀಶ್ ಕುಮಾರ್, ಕರಾವಳಿ ಪ್ರಾಧಿಕಾರಕ್ಕೆ ಗಫೂರ್, ಪ್ರವಾಸೋದ್ಯಮ ಶಾಲೆಟ್ ಪಿಂಟೋ

September 27, 2025
51
57 ವರ್ಷಗಳಲ್ಲಿ ಮೊದಲ ಬಾರಿಗೆ ಅರ್ಜೆಂಟೀನಾಗೆ ಭೇಟಿ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿ
ರಾಜಕೀಯ

57 ವರ್ಷಗಳಲ್ಲಿ ಮೊದಲ ಬಾರಿಗೆ ಅರ್ಜೆಂಟೀನಾಗೆ ಭೇಟಿ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿ

July 5, 2025
42
Next Post
ಮಂಗಳೂರು : ತಲೆಮರೆಸಿಕೊಂಡಿದ್ದ ಆರೋಪಿ ದುಬೈನಿಂದ ಹಿಂದಿರುಗುತ್ತಿದ್ದಾಗ ಬಂಧನ

ಮಂಗಳೂರು : ತಲೆಮರೆಸಿಕೊಂಡಿದ್ದ ಆರೋಪಿ ದುಬೈನಿಂದ ಹಿಂದಿರುಗುತ್ತಿದ್ದಾಗ ಬಂಧನ

Discussion about this post

Recent News

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

April 13, 2026
0
ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

April 13, 2026
3
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

April 13, 2026
ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

April 13, 2026
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,

ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,

April 12, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d