• About us
  • Contact us
  • Disclaimer
Friday, August 21, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್

Coastal Times by Coastal Times
May 23, 2026
in ಆರೋಗ್ಯ, ರಾಜ್ಯ
ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್
54
VIEWS
WhatsappTelegramShare on FacebookShare on Twitter

ಬೆಂಗಳೂರು, ಮೇ 22: ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕ ಆರೋಗ್ಯ ಇಲಾಖೆಯು ರಾಜ್ಯಾದ್ಯಂತ ಹೈ ಅಲರ್ಟ್ ಘೋಷಿಸಿದೆ. ಭಾರತದಲ್ಲಿ ಇದುವರೆಗೆ ಎಬೋಲಾ ಪ್ರಕರಣ ಕಂಡುಬಂದಿಲ್ಲವಾದರೂ ಕರ್ನಾಟಕದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹೌದು…ಎಬೋಲಾ ವೈರಸ್ ಹರಡದಂತೆ ತಡೆಯಲು ರಾಜ್ಯ ಆರೋಗ್ಯ ಇಲಾಖೆ ಇಂದು (ಮೇ 22) ಮಾರ್ಗಸೂಚಿ  ಪ್ರಕಟಿಸಿದ್ದು, ಎಬೋಲಾ ಪೀಡಿತ ದೇಶಗಳಿಂದ ಬೆಂಗಳೂರಿಗೆ ಬರುವಪ್ರಯಾಣಿಕರು ಕನಿಷ್ಠ 21 ದಿನಗಳ ಕಾಲ ಕ್ವಾರಂಟೈನ್ ಹಾಗೂ ರೋಗಲಕ್ಷಣ ಕಂಡುಬಂದ್ರೆ ಕೂಡಲೇ ಹತ್ತಿರದ ಆಸ್ಪತ್ರೆಯಲ್ಲಿ ವರದಿ ವರದಿಮಾಡಿಕೊಳ್ಳಲು ಸೂಚಚಿಸಲಾಗಿದೆ.

ಎಬೋಲಾ ಲಕ್ಷಣಗಳು ಮತ್ತು ಹರಡುವಿಕೆ:

  • ಎಬೋಲಾ ಒಂದು ಗಂಭೀರ ವೈರಲ್ ಸೋಂಕಾಗಿದ್ದು, ಇದರ ಲಕ್ಷಣಗಳು ಈ ಕೆಳಗಿನಂತಿರುತ್ತವೆ:
  • ತೀವ್ರ ಜ್ವರ ಮತ್ತು ತಲೆನೋವು.
  • ಸ್ನಾಯು ನೋವು ಮತ್ತು ಗಂಟಲು ನೋವು.
  • ವಾಂತಿ, ಅತಿಸಾರ ಮತ್ತು ಹೊಟ್ಟೆ ನೋವು.
  • ದದ್ದುಗಳು ಹಾಗೂ ಕಣ್ಣು ಕೆಂಪಾಗುವುದು.

ಸೋಂಕಿತ ವ್ಯಕ್ತಿಯ ರಕ್ತ, ಅಂಗಾಂಗಗಳು ಅಥವಾ ದೇಹದ ದ್ರವಗಳೊಂದಿಗೆ ನೇರ ಸಂಪರ್ಕ ಹೊಂದುವುದರಿಂದ ಅಥವಾ ಕಲುಷಿತಗೊಂಡ ಬಟ್ಟೆ, ಹಾಸಿಗೆ ಮತ್ತು ಸಿರಿಂಜ್‌ಗಳ ಮೂಲಕ ಈ ರೋಗ ಹರಡುತ್ತದೆ. ಆರೋಗ್ಯ ಸಿಬ್ಬಂದಿ ಮತ್ತು ರೋಗಿಯ ಕುಟುಂಬಸ್ಥರಿಗೆ ಸೋಂಕಿನ ಅಪಾಯ ಹೆಚ್ಚಿರುತ್ತದೆ.

ಸರ್ಕಾರದ ಸಿದ್ಧತೆ ಮತ್ತು ಆಸ್ಪತ್ರೆಗಳ ವಿವರ:  ಸೋಂಕು ತಡೆಗಟ್ಟಲು ರಾಜ್ಯ ಸರ್ಕಾರವು ಬೆಂಗಳೂರು ಮತ್ತು ಮಂಗಳೂರಿನಲ್ಲಿ ವಿಶೇಷ ವ್ಯವಸ್ಥೆ ಮಾಡಿದೆ:

  • ಬೆಂಗಳೂರು: ರಾಜೀವ್ ಗಾಂಧಿ ಎದೆರೋಗಗಳ ಸಂಸ್ಥೆ (RGICD)ಯನ್ನು ಐಸೋಲೇಷನ್ ಕೇಂದ್ರವಾಗಿ ಮತ್ತು ಎಪಿಡೆಮಿಕ್ ಡಿಸೀಸ್ ಆಸ್ಪತ್ರೆಯನ್ನು ಕ್ವಾರಂಟೈನ್ ಕೇಂದ್ರವಾಗಿ ನಿಗದಿಪಡಿಸಲಾಗಿದೆ.
  • ಮಂಗಳೂರು: ಶ್ರೀನಿವಾಸ್ ಪೋರ್ಟ್ ಆಸ್ಪತ್ರೆ (NMPA) ಮತ್ತು ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಚಿಕಿತ್ಸಾ ವ್ಯವಸ್ಥೆ ಮಾಡಲಾಗಿದೆ.
  • ಪರಿಶೀಲನೆ: ಶಂಕಾಸ್ಪದ ಪ್ರಕರಣಗಳ ಮಾದರಿಗಳನ್ನು ಬೆಂಗಳೂರಿನ ಎನ್.ಐ.ವಿ (NIV) ಮೂಲಕ ಪುಣೆಯ ಮುಖ್ಯ ಕೇಂದ್ರಕ್ಕೆ ಪರೀಕ್ಷೆಗೆ ಕಳುಹಿಸಲಾಗುತ್ತದೆ.

ಪ್ರಯಾಣಿಕರಿಗೆ ಸೂಚನೆ: ಎಬೋಲಾ ಪೀಡಿತ ದೇಶಗಳಿಂದ (DRC ಮತ್ತು ಉಗಾಂಡಾ) ಭಾರತಕ್ಕೆ ಮರಳಿದ ಪ್ರಯಾಣಿಕರು ಕನಿಷ್ಠ 21 ದಿನಗಳ ಕಾಲ ಆರೋಗ್ಯ ಇಲಾಖೆಯ ಮೇಲ್ವಿಚಾರಣೆಯಲ್ಲಿ ಇರಬೇಕು. ಯಾವುದೇ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ಹತ್ತಿರದ ಆರೋಗ್ಯ ಕೇಂದ್ರಕ್ಕೆ ವರದಿ ಮಾಡಬೇಕು. ತ್ವರಿತ ಪ್ರತಿಕ್ರಿಯೆ ತಂಡಗಳನ್ನು (RRT) ಈಗಾಗಲೇ ಸಜ್ಜುಗೊಳಿಸಲಾಗಿದೆ.

ಸಾರ್ವಜನಿಕರು ಅನಗತ್ಯವಾಗಿ ಆತಂಕಕ್ಕೊಳಗಾಗಬಾರದು ಮತ್ತು ಕೇವಲ ಅಧಿಕೃತ ಮಾಹಿತಿಗಳನ್ನು ಮಾತ್ರ ನಂಬಬೇಕು ಎಂದು ಆರೋಗ್ಯ ಇಲಾಖೆ ಮನವಿ ಮಾಡಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ವಚನಾನಂದ ಶ್ರೀಗಳಿಗೆ ಹೆಚ್ಚಿದ ಬಂಧನದ ಭೀತಿ: ನಿರೀಕ್ಷಣಾ ಜಾಮೀನು ರದ್ದು ಕೋರಿ ಕೋರ್ಟ್​ಗೆ ಪೊಲೀಸರ ಮನವಿ

Next Post

ಮಂಗಳೂರು: ಪ್ರಥಮ ಬಾರಿ ಏಕಕಾಲಕ್ಕೆ ಪಾಲೆಮಾರ್ ಸಮೂಹದಿಂದ ನಾಲ್ಕು ಅತ್ಯಾಧುನಿಕ ಸಭಾಭವನಗಳು ಲೋಕಾರ್ಪಣೆ

Related Posts

ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿಧನ
ರಾಜ್ಯ

ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿಧನ

August 19, 2026
24
ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ
ಆರೋಗ್ಯ

ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

August 12, 2026
38
Next Post
ಮಂಗಳೂರು: ಪ್ರಥಮ ಬಾರಿ ಏಕಕಾಲಕ್ಕೆ ಪಾಲೆಮಾರ್ ಸಮೂಹದಿಂದ ನಾಲ್ಕು ಅತ್ಯಾಧುನಿಕ ಸಭಾಭವನಗಳು ಲೋಕಾರ್ಪಣೆ

ಮಂಗಳೂರು: ಪ್ರಥಮ ಬಾರಿ ಏಕಕಾಲಕ್ಕೆ ಪಾಲೆಮಾರ್ ಸಮೂಹದಿಂದ ನಾಲ್ಕು ಅತ್ಯಾಧುನಿಕ ಸಭಾಭವನಗಳು ಲೋಕಾರ್ಪಣೆ

Discussion about this post

Recent News

94ನೇ ವಯಸ್ಸಿಗೆ ಕೊನೆಯುಸಿರೆಳೆದ ದಕ್ಷಿಣ ಭಾರತದ ಖ್ಯಾತ ನಟಿ ಸಾಹುಕಾರ್ ಜಾನಕಿ

94ನೇ ವಯಸ್ಸಿಗೆ ಕೊನೆಯುಸಿರೆಳೆದ ದಕ್ಷಿಣ ಭಾರತದ ಖ್ಯಾತ ನಟಿ ಸಾಹುಕಾರ್ ಜಾನಕಿ

August 21, 2026
9
1988ರಲ್ಲಿ ನಡೆದ ಕೊಲೆ ಪ್ರಕರಣ ಮುಕ್ತಾಯಗೊಳಿಸಿರುವ ಸುಪ್ರೀಂ ಕೋರ್ಟ್, ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 105 ವರ್ಷದ ವೃದ್ಧನಿಗೆ ​ಸೆರೆವಾಸದಿಂದ ಮುಕ್ತಿ

1988ರಲ್ಲಿ ನಡೆದ ಕೊಲೆ ಪ್ರಕರಣ ಮುಕ್ತಾಯಗೊಳಿಸಿರುವ ಸುಪ್ರೀಂ ಕೋರ್ಟ್, ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 105 ವರ್ಷದ ವೃದ್ಧನಿಗೆ ​ಸೆರೆವಾಸದಿಂದ ಮುಕ್ತಿ

August 21, 2026
30
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

94ನೇ ವಯಸ್ಸಿಗೆ ಕೊನೆಯುಸಿರೆಳೆದ ದಕ್ಷಿಣ ಭಾರತದ ಖ್ಯಾತ ನಟಿ ಸಾಹುಕಾರ್ ಜಾನಕಿ

94ನೇ ವಯಸ್ಸಿಗೆ ಕೊನೆಯುಸಿರೆಳೆದ ದಕ್ಷಿಣ ಭಾರತದ ಖ್ಯಾತ ನಟಿ ಸಾಹುಕಾರ್ ಜಾನಕಿ

August 21, 2026
1988ರಲ್ಲಿ ನಡೆದ ಕೊಲೆ ಪ್ರಕರಣ ಮುಕ್ತಾಯಗೊಳಿಸಿರುವ ಸುಪ್ರೀಂ ಕೋರ್ಟ್, ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 105 ವರ್ಷದ ವೃದ್ಧನಿಗೆ ​ಸೆರೆವಾಸದಿಂದ ಮುಕ್ತಿ

1988ರಲ್ಲಿ ನಡೆದ ಕೊಲೆ ಪ್ರಕರಣ ಮುಕ್ತಾಯಗೊಳಿಸಿರುವ ಸುಪ್ರೀಂ ಕೋರ್ಟ್, ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 105 ವರ್ಷದ ವೃದ್ಧನಿಗೆ ​ಸೆರೆವಾಸದಿಂದ ಮುಕ್ತಿ

August 21, 2026
ಬಂಟ್ವಾಳ: ಬೈಕ್ ಸವಾರನಿಗೆ ಅಡ್ಡಗಟ್ಟಿ ತಲ್ವಾರ್ ತೋರಿಸಿ, ಸಿಮೆಂಟ್ -ಕಬ್ಬಿಣ ಮಾರಾಟ ಸಂಸ್ಥೆಯ ಲೈನ್ ಸೇಲ್ ಸಂಗ್ರಹದ 8.5 ಲಕ್ಷ ರೂ ಸುಲಿಗೆ

ಬಂಟ್ವಾಳ: ಬೈಕ್ ಸವಾರನಿಗೆ ಅಡ್ಡಗಟ್ಟಿ ತಲ್ವಾರ್ ತೋರಿಸಿ, ಸಿಮೆಂಟ್ -ಕಬ್ಬಿಣ ಮಾರಾಟ ಸಂಸ್ಥೆಯ ಲೈನ್ ಸೇಲ್ ಸಂಗ್ರಹದ 8.5 ಲಕ್ಷ ರೂ ಸುಲಿಗೆ

August 21, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d