• About us
  • Contact us
  • Disclaimer
Friday, March 13, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಳ್ಳಾಲದಲ್ಲಿ ಮಧ್ಯರಾತ್ರಿ ನಾಲ್ಕು ಮನೆಗಳ ಬಾಗಿಲು ತಟ್ಟಿದ್ದ ಐವರ ತಂಡ! ಪೊಲೀಸರನ್ನ ಕಂಡು ಪರಾರಿ, ಸಾರ್ವಜನಿಕರು ಎಚ್ಚರದಿಂದಿರಲು ಪೊಲೀಸರ ಮನವಿ

Coastal Times by Coastal Times
June 23, 2024
in ಕ್ರೈಮ್ ನ್ಯೂಸ್
ಉಳ್ಳಾಲದಲ್ಲಿ ಮಧ್ಯರಾತ್ರಿ ನಾಲ್ಕು ಮನೆಗಳ ಬಾಗಿಲು ತಟ್ಟಿದ್ದ ಐವರ ತಂಡ! ಪೊಲೀಸರನ್ನ ಕಂಡು ಪರಾರಿ, ಸಾರ್ವಜನಿಕರು ಎಚ್ಚರದಿಂದಿರಲು ಪೊಲೀಸರ ಮನವಿ
117
VIEWS
WhatsappTelegramShare on FacebookShare on Twitter

ಉಳ್ಳಾಲ, ಜೂ.23: ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಬಂಡಿಕೊಟ್ಯ ಎಂಬಲ್ಲಿ ಜೂ.18ರ ಮಧ್ಯರಾತ್ರಿ ಆಗಂತುಕರ ತಂಡವೊಂದು ನಾಲ್ಕು ಮನೆಗಳ ಬಾಗಿಲು ತಟ್ಟಿದ್ದು, ಮಂಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಉಳಾಯಿಬೆಟ್ಟುವಿನ ಉದ್ಯಮಿ ಪದ್ಮನಾಭ ಕೋಟ್ಯಾನ್ ಮನೆಯಲ್ಲಿ ಶುಕ್ರವಾರ ರಾತ್ರಿ ದರೋಡೆ ನಡೆಸಿದ ತಂಡವೇ ಉಳ್ಳಾಲದಲ್ಲೂ ಕೃತ್ಯ ಎಸಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

ಬಂಡಿಕೊಟ್ಯದ ನಾಲ್ಕು ಮನೆಗಳ ಬಾಗಿಲುಗಳನ್ನು ಆಗಂತುಕರ ತಂಡವೊಂದು ನಡುರಾತ್ರಿ ಬಡಿದಿದೆ ಎನ್ನಲಾಗಿದೆ. ಬಾಗಿಲನ್ನ ಜೋರಾಗಿ ಬಡಿಯುತ್ತಿರುವುದನ್ನ ಗ್ರಹಿಸಿ ಭಯಭೀತರಾದ ಮನೆಮಂದಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ‌. ಗಸ್ತಿನಲ್ಲಿದ್ದ ಹೊಯ್ಸಳ ಪೊಲೀಸರು ತಕ್ಷಣವೇ ಸ್ಥಳಕ್ಕೆ ಧಾವಿಸಿದ್ದು ಈ ವೇಳೆ ಆಗಂತುಕರ ತಂಡ ಪರಾರಿಯಾಗಿದೆ. ಶುಕ್ರವಾರ ಉಳಾಯಿಬೆಟ್ಟುವಿನ ಉದ್ಯಮಿ ಮನೆಯಲ್ಲಿ ನಡೆದಿರುವ ದರೋಡೆ ಕೃತ್ಯ ಬೆಳಕಿಗೆ ಬರುತ್ತಿದ್ದಂತೆ ಉಳ್ಳಾಲ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ.

ಉಳಾಯಿಬೆಟ್ಟುವಿನಲ್ಲಿ ದರೋಡೆ ನಡೆಸಿದ ತಂಡವೇ ಉಳ್ಳಾಲದಲ್ಲೂ ದರೋಡೆಗೆ ವಿಫಲ ಯತ್ನ ನಡೆಸಿತ್ತೇ ಎಂದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಉಳ್ಳಾಲದಲ್ಲಿ ನಡೆದಿರುವ ಘಟನೆ ಬಗ್ಗೆ ಯಾರೂ ಠಾಣೆಗೆ ದೂರು ನೀಡಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ.

ಇದೇ ವೇಳೆ, ಉಳ್ಳಾಲದ ನಿವಾಸಿಗಳಿಗೆ ಪೊಲೀಸ್ ಠಾಣಾಧಿಕಾರಿ ಹೆಚ್.ಎನ್ ಬಾಲಕೃಷ್ಣ ಎಚ್ಚರಿಕೆಯ ಪ್ರಕಟಣೆ ಹೊರಡಿಸಿದ್ದಾರೆ. ಉಳ್ಳಾಲದಲ್ಲಿ ಕಳೆದ ಕೆಲವು ದಿನಗಳಿಂದ ಅಪರಿಚಿತ ಏಳೆಂಟು ಜನರ ತಂಡವು ಒಂಟಿ ಮನೆ ಹಾಗೂ ಬೀಗ ಜಡಿದಿರುವ ನಿವಾಸಗಳಿಗೆ ತೆರಳುತ್ತಿರುವ ಬಗ್ಗೆ ಗುಪ್ತಚರ ಮೂಲದ ಮಾಹಿತಿ ಲಭ್ಯವಾಗಿದೆ. ಠಾಣಾ ವ್ಯಾಪ್ತಿಯ ನಿವಾಸಿಗಳು ಈ ವಿಚಾರದಲ್ಲಿ ಸದಾ ಎಚ್ಚರದಿಂದ ಇರಬೇಕು. ಸಮರ್ಪಕ ದಾಖಲೆಗಳಿಲ್ಲದೆ ಯಾರಿಗೂ ಬಾಡಿಗೆ ಮನೆ ನೀಡುವಂತಿಲ್ಲ. ಮನೆಗೆ ಯಾರಾದರೂ ಬಂದರೆ ಪರಿಶೀಲಿಸಿ ಬಾಗಿಲು ತೆಗೆಯಬೇಕು. ಅಪರಿಚಿತರ ಬಗ್ಗೆ ಸಂಶಯ ಬಂದಲ್ಲಿ ಉಳ್ಳಾಲ ಠಾಣಾ ಇನ್ಸ್ ಪೆಕ್ಟರ್  9480802315  ಅಥವಾ 112ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಆಮಿರ್​ ಖಾನ್​ ಮಗನ ‘ಮಹಾರಾಜ್​’ ಸಿನಿಮಾ ಬಿಡುಗಡೆಗೆ ಕೋರ್ಟ್​ ಅನುಮತಿ

Next Post

ಇನ್​ಸ್ಟಾಗ್ರಾಂ ರೀಲ್ಸ್​ಗಾಗಿ ಕಟ್ಟಡದ ತುದಿಗೆ ಹೋಗಿ ಅಪಾಯಕಾರಿ ಸ್ಟಂಟ್​ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ ಪೊಲೀಸರು

Related Posts

ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳ್ಳತನ ಪ್ರಕರಣ; ಓರ್ವ ಆರೋಪಿ ಸೆರೆ
ಕ್ರೈಮ್ ನ್ಯೂಸ್

ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳ್ಳತನ ಪ್ರಕರಣ; ಓರ್ವ ಆರೋಪಿ ಸೆರೆ

March 13, 2026
57
ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ
ಕ್ರೈಮ್ ನ್ಯೂಸ್

ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

March 12, 2026
31
Next Post
ಇನ್​ಸ್ಟಾಗ್ರಾಂ ರೀಲ್ಸ್​ಗಾಗಿ ಕಟ್ಟಡದ ತುದಿಗೆ ಹೋಗಿ ಅಪಾಯಕಾರಿ ಸ್ಟಂಟ್​ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ ಪೊಲೀಸರು

ಇನ್​ಸ್ಟಾಗ್ರಾಂ ರೀಲ್ಸ್​ಗಾಗಿ ಕಟ್ಟಡದ ತುದಿಗೆ ಹೋಗಿ ಅಪಾಯಕಾರಿ ಸ್ಟಂಟ್​ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ ಪೊಲೀಸರು

Discussion about this post

Recent News

ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳ್ಳತನ ಪ್ರಕರಣ; ಓರ್ವ ಆರೋಪಿ ಸೆರೆ

ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳ್ಳತನ ಪ್ರಕರಣ; ಓರ್ವ ಆರೋಪಿ ಸೆರೆ

March 13, 2026
57
ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ

ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ

March 12, 2026
68
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳ್ಳತನ ಪ್ರಕರಣ; ಓರ್ವ ಆರೋಪಿ ಸೆರೆ

ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳ್ಳತನ ಪ್ರಕರಣ; ಓರ್ವ ಆರೋಪಿ ಸೆರೆ

March 13, 2026
ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ

ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ

March 12, 2026
ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

March 12, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d