ಮಂಗಳೂರು: ಕಾಲೇಜು ವಿದ್ಯಾರ್ಥಿಗಳ ಸ್ವೇಚ್ಛಾಚಾರದ ಮತ್ತೊಂದು ವಿಡಿಯೋ ಲೀಕ್ ಆಗಿದ್ದು, ಮಂಗಳೂರಿನ ಜನರ ಮಾನವನ್ನೇ ಹರಾಜು ಹಾಕಿದೆ. ಲಿಪ್ ಲಾಕ್ ಮಾಡಿದ್ದ ವಿದ್ಯಾರ್ಥಿನಿಯ ಜೊತೆಗೇ ಸೆಕ್ಸ್ ನಡೆಸುವ ವಿಡಿಯೋ ಬಹಿರಂಗ ಆಗಿದ್ದು, ಪ್ರತಿಷ್ಠಿತ ಕಾಲೇಜು ಹೆಸರಲ್ಲಿ ವಿದ್ಯಾರ್ಥಿಗಳು ಮಾನಗೆಟ್ಟ ಕೆಲಸವನ್ನು ಮಾಡುವುದಕ್ಕೂ ಹೇಸುವುದಿಲ್ಲ ಎನ್ನುವುದನ್ನು ತೋರಿಸಿಕೊಟ್ಟಿದ್ದಾರೆ. ನಗರದ ಅಪಾರ್ಟ್‍ಮೆಂಟ್ ಸಮುಚ್ಚಯವೊಂದರ ಕೊಠಡಿಯಲ್ಲಿ ನಗರದ ಕಾಲೇಜಿನ ವಿದ್ಯಾರ್ಥಿಗಳು ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತಿಸಿರುವ ವಿಡಿಯೊ ವೈರಲ್ ಆಗಿರುವ ಪ್ರಕರಣದಲ್ಲಿ ಐವರು ಬಾಲಾರೋಪಿಗಳ ವಿರುದ್ಧ ಲೈಂಗಿಕ ದೌರ್ಜನ್ಯದಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಯಡಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ‘ಐವರನ್ನು ವಶಕ್ಕೆ ಪಡೆದು ಬಾಲ ನ್ಯಾಯಮಂಡಳಿ ಮುಂದೆ ಹಾಜರುಪಡಿಸಿದ್ದೇವೆ. ಅವರು ಮಕ್ಕಳನ್ನು ವಿಚಾರಣೆಗೆ ಒಳಪಡಿಸಿ ಮಕ್ಕಳನ್ನು ಪೋಷಕರ ಬಳಿಗೆ ಕಳುಹಿಸಿಕೊಟ್ಟಿದ್ದಾರೆ. ತನಿಖಾಧಿಕಾರಿ ಮಂದೆ ಹಾಜರಾಗುವಂತೆಯೂ ಸೂಚನೆ ನೀಡಿದ್ದಾರೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ನಗರದ ಅಪಾರ್ಟ್‌ಮೆಂಟ್ ಸಮುಚ್ಚಯವೊಂದರಲ್ಲಿ ವಿದ್ಯಾರ್ಥಿನಿ ಜೊತೆ ವಿದ್ಯಾರ್ಥಿಗಳು ಅನುಚಿತವಾಗಿ ವರ್ತಿಸಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿತ್ತು. ಈ ವಿಚಾರ ಗಮನಕ್ಕೆ ಬರುತ್ತಿದ್ದಂತೆಯೇ ಪೊಲೀಸರು, ವಿಡಿಯೊ ಚಿತ್ರೀಕರಿಸಿದ್ದ ವಿದ್ಯಾರ್ಥಿಯನ್ನು ಬುಧವಾರ ವಶಕ್ಕೆ ಪಡೆದಿದ್ದರು. ‘ಬೇರೆ ಜಿಲ್ಲೆಯ ಇಬ್ಬರು ಸ್ನೇಹಿತರು ಬಾಡಿಗೆ ಪಡೆದಿದ್ದ ಅಪಾರ್ಟ್‌ಮೆಂಟ್ ಸಮುಚ್ಚಯದಲ್ಲಿ ಮೂವರು ವಿದ್ಯಾರ್ಥಿನಿಯರು ಸೇರಿದಂತೆ 11 ಮಂದಿ ಸಹಪಾಠಿಗಳು ‘ಟ್ರುಥ್ ಆ್ಯಂಡ್ ಡೇರ್’ ಗೇಮ್ ಆಡುತ್ತಿರುವಾಗ ಈ ಘಟನೆ ನಡೆದಿದೆ ಎಂಬುದಾಗಿ ವಿದ್ಯಾರ್ಥಿಯು ವಿಚಾರಣೆಯ ವೇಳೆ ತಿಳಿಸಿದ್ದಾನೆ’ ಎಂದು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದರು.
Discover more from Coastal Times Kannada
Subscribe to get the latest posts sent to your email.
Discussion about this post