ಮಣಿಪಾಲ: ವಿದ್ಯಾರತ್ನ ನಗರದಲ್ಲಿರುವ ಮನೆಯೊಂದರಲ್ಲಿ ರಾಜರೋಷವಾಗಿ ಈ ಮಾಂಸದ ದಂಧೆ ನಡೆಯುತಿತ್ತು. ʼಮಾಮಾʼ ಕೆಲಸ ಮಾಡುತ್ತಿದ್ದ ಅಬ್ದುಲ್ ಸಲಾಮತ್ ಹಾಗೂ ಚಂದ್ರಹಾಸ ಬಂಧಿತರು. ಪ್ರಕರಣದ ಕಿಂಗ್ ಪಿನ್ ಖಾಲಿದ್ ಪೊಲೀಸ್ ದಾಳಿಯ ಸ್ವಲ್ಪ ಮುಂಚೆ ಪೊಲೀಸ್ ಸಿಬ್ಬಂದಿಯಿಂದಲೇ ಖಾಲಿದ್ ಗೆ ಕಾರ್ಯಚರಣೆಯ ಮಾಹಿತಿ ಸೋರಿಕೆಯಾಗಿತ್ತು ಎಂಬ ಸಂಶಯ ಸ್ಥಳೀಯ ನಿವಾಸಿಗಳು ವ್ಯಕ್ತಪಡಿಸಿದ್ದಾರೆ.
ದಾಳಿಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, 5 ಮಂದಿ ಯುವತಿಯರ ರಕ್ಷಣೆ ಮಾಡಲಾಗಿದೆ. ಯುವತಿಯರಲ್ಲಿ 3 ಜನ ಬೆಂಗಳೂರು ಮೂಲದ ನಿವಾಸಿಗಳಾಗಿದ್ದು, ಇನ್ನಿಬ್ಬರು ಮಹಾರಾಷ್ಟ್ರದ ನಾಸಿಕ್ ಹಾಗೂ ಮುಂಬೈ ವಾಸಿಗಳಾಗಿದ್ದು, ಅವರನ್ನು ರಕ್ಷಿಸಲಾಯಿತು.
ಕಳೆದ ರಾತ್ರಿ ಬ್ರಹ್ಮಾವರ ಇನ್ಸ್ಪೆಕ್ಟರ್ ದಿವಾಕರ್ ಅವರಿಗೆ ಬಂದ ಖಚಿತ ಮಾಹಿತಿಯಂತೆ ಮಣಿಪಾಲದ ವಿದ್ಯಾರತ್ನ ನಗರದಲ್ಲಿರುವ ಭವಾನಿ ಎಂಬ ಹೆಸರಿನ ಮನೆಗೆ ದಾಳಿ ನಡೆಸಿ ಅನೈತಿಕ ಚಟುವಟಿಕೆ ಮಾಡಲು ವ್ಯಕ್ತಿಗಳಿಂದ ಹಣವನ್ನು ಸಂಗ್ರಹಿಸಿ ಕೊಠಡಿಗಳನ್ನು ಒದಗಿಸಿದ ಸಲಾಮತ್ ಹಾಗೂ ಚಂದ್ರಹಾಸ ಎಂಬವರನ್ನು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದವರಲ್ಲಿ 4 ಮೊಬೈಲ್ ಪೋನ್, 10000 ರೂ ನಗದು, ಕಾಂಡಮ್‌ಗಳು, ಕಾರು ಮತ್ತು 2 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
Discussion about this post