• About us
  • Contact us
  • Disclaimer
Wednesday, June 3, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು : ಪೊಲೀಸ್ ಸಿಬಂದಿಗೆ ಹಲ್ಲೆಗೈದು ತಪ್ಪಿಸಿಕೊಳ್ಳಲು ಯತ್ನ: ಆರೋಪಿ ಕಾಲಿಗೆ ಗುಂಡೇಟು

Coastal Times by Coastal Times
August 23, 2022
in ಕ್ರೈಮ್ ನ್ಯೂಸ್
ಮಂಗಳೂರು : ಪೊಲೀಸ್ ಸಿಬಂದಿಗೆ ಹಲ್ಲೆಗೈದು ತಪ್ಪಿಸಿಕೊಳ್ಳಲು ಯತ್ನ: ಆರೋಪಿ ಕಾಲಿಗೆ ಗುಂಡೇಟು
132
VIEWS
WhatsappTelegramShare on FacebookShare on Twitter

ಮಂಗಳೂರು: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸ್ಥಳ ಮಹಜರು ನಡೆಸಲು ಕರೆದೊಯ್ದಾಗ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಅಡ್ಯಾರ್‌ನ ಮಿಷ್ತಾ ಅಲಿಯಾಸ್‌ ಮಹಮ್ಮದ್‌ ಮುಷ್ತಾಕ್‌ (26) ಎಂಬಾತನ ಮೇಲೆ ಮಂಗಳೂರು ಗ್ರಾಮಾಂತರ ಠಾಣೆಯ ಪಿಎಸ್‌ಐ ವಿನಾಯಕ ಬಾವಿಕಟ್ಟೆ ಅವರು ಸೋಮವಾರ ಕಂಬಳ ಗ್ರಾಮದಲ್ಲಿ ಗುಂಡು ಹಾರಿಸಿದ್ದಾರೆ.  ಗುಂಡೇಟು ತಗುಲಿದ ಆರೋಪಿಯ ಎಡಗಾಲಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ನಗರದ ಕಂಕನಾಡಿಯ ಫಾದರ್‌ ಮುಲ್ಲರ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಯಿಂದ ಹಲ್ಲೆಗೊಳಗಾದ ಮಂಗಳೂರು ಗ್ರಾಮಾಂತರ ಠಾಣೆಯ ಕಾನ್‌ಸ್ಟೆಬಲ್‌ ಸದ್ದಾಂ ಹುಸೇನ್‌ ಅವರೂ ಗಾಯಗೊಂಡಿದ್ದಾರೆ. ಆರೋಪಿ ಮಿಷ್ತಾ ತನ್ನ ಗೆಳೆಯ ಆಶೀಕ್‌ ಜೊತೆ ಸೇರಿ ಇದೇ 19ರಂದು ರಾತ್ರಿ ವಳಚ್ಚಿಲ್‌ನ ಬದ್ರಿಯಾ ಮಸೀದಿ ಬಳಿ ವಿದ್ಯಾರ್ಥಿ ಯೂಸುಫ್‌ ಮಿರ್ಷಾದ್‌ ಅವರ ಸಹೋದರ ರಮ್ಲಾನ್‌ ಮಿಫ್ತ ಅವರ ಮೊಬೈಲ್‌ ಕಿತ್ತುಕೊಂಡಿದ್ದ. ಯೂಸುಫ್‌ ಮಿರ್ಷಾದ್‌ ಹಾಗೂ ಅವರ ಮಾವ ರಮ್ಲಾನ್‌ ಆಸಿಫ್‌ ಅವರು ಸ್ಥಳಕ್ಕೆ ತೆರಳಿ ಮೊಬೈಲ್‌ ಮರಳಿಸುವಂತೆ ಕೇಳಿದ್ದರು. ಆಗ ಅವರ ಜೊತೆ ಜಗಳವಡಿದ್ದ ಮಿಷ್ತಾ ಡ್ರ್ಯಾಗರ್‌ನಿಂದ ರಮ್ಲಾನ್‌ ಆಸಿಫ್ ಅವರಿಗೆ ಹಲ್ಲೆ ನಡೆಸಿದ್ದ. ಅವರ ಕಿವಿಯಿಂದ ಒಳಹೊಕ್ಕ ಡ್ರ್ಯಾಗರ್‌ ಬಾಯಿಯಲ್ಲಿ ಹೊರಗೆ ಬಂದಿತ್ತು. ಅವರ ಎದೆಗೂ ಗಾಯಗಳಾಗಿತ್ತು. ಆರೋಪಿ ಮಿಷ್ತಾನನ್ನು ಪೊಲೀಸರು ಬಂಧಿಸಿದ್ದರು.

‘ಸ್ಥಳ ಮಹಜರು ನಡೆಸಲು, ಕೃತ್ಯಕ್ಕೆ ಬಳಸಿದ ಆಯುಧ ಮತ್ತು ವಾಹನ ವಶಪಡಿಸಿಕೊಳ್ಳಲು ಆರೋಪಿಯನ್ನು ಸಂಜೆ 4.30ರ ಸುಮಾರಿಗೆ  ಘಟನೆ ನಡೆದ ಸ್ಥಳಕ್ಕೆ ಕರೆದೊಯ್ಯಲಾಗಿತ್ತು. ಆಗ ಆತ ಪೊಲೀಸ್‌ ಸಿಬ್ಬಂದಿ ಮೇಲೆಯೇ ಹಲ್ಲೆ ನಡೆಸಿ ಜಿಗಿದು ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಈ ವೇಳೆ ಗ್ರಾಮಾಂತರ ಠಾಣೆಯ ಸಬ್‌ ಇನ್‌ಸ್ಪೆಕ್ಟರ್‌ ವಿನಾಯಕ ಬಾವಿಕಟ್ಟೆ ಅವರು ಮೂರು ಸುತ್ತಿನ ಗುಂಡು ಹಾರಿಸಿದ್ದರು. ಒಂದು ಗುಂಡು ಆರೋಪಿಯ ಕಾಲಿಗೆ ತಾಗಿದ್ದರಿಂದ ಆತ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ’ ಎಂದು ನಗರ ಪೊಲೀಸ್‌ ಕಮಿಷನರ್‌ ಎನ್‌.ಶಶಿಕುಮಾರ್‌ ಸುದ್ದಿಗಾರರಿಗೆ ತಿಳಿಸಿದರು. ‘ಆರೋಪಿ ಮಿಷ್ತಾ ವಿರುದ್ಧ ಈ ಹಿಂದೆಯೂ ಕೊಲೆ ಯತ್ನ, ದರೋಡೆ ಮತ್ತು ಕಳ್ಳತನ ಪ್ರಕರಣಗಳು ದಾಖಲಾಗಿವೆ. ಮಲ್ಪೆ, ಕೊಣಾಜೆ ಠಾಣೆಗಳಲ್ಲೂ ಈತನ ವಿರುದ್ಧ ಪ್ರಕರಣಗಳು ದಾಖಲಾದ ಮಾಹಿತಿ ಇದೆ. ‌ಆರೋಪಿಯು ಅಡ್ಯಾರ್‌ ಪರಿಸರದಲ್ಲಿ ಜನರಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದ. ಗಾಂಜಾ ಸೇವಿಸಿ ರಾತ್ರಿ ವೇಳೆ ಜನರಿಗೆ ಡ್ರ್ಯಾಗರ್‌ ತೋರಿಸಿ ಬೆದರಿಸಿದ ದೂರುಗಳಿವೆ. ಆರೋಪಿಯಿಂದ ಕಿರುಕುಳ ಅನುಭವಿಸಿದ್ದ ಅನೇಕರು ಭಯದಿಂದ ದೂರು ನೀಡಲು ಹಿಂದೇಟು ಹಾಕಿದ್ದರು. ಆರೋಪಿಯು ಪ್ರಕರಣವೊಂದರಲ್ಲಿ ಈ ಹಿಂದೆಯೂ ಬಂಧಿತನಾಗಿದ್ದ. ಜಾಮೀನಿನ ಮೇಲೆ ಬಿಡುಗಡೆ ಆದ ಬಳಿಕವೂ ಅಪರಾಧ ಕೃತ್ಯಗಳನ್ನು ಮುಂದುವರಿಸಿದ್ದ’ ಎಂದು ಅವರು ಮಾಹಿತಿ ನೀಡಿದರು. ಅಡ್ಯಾರ್‌ ಪ್ರದೇಶದಲ್ಲಿ ಗಾಂಜಾ ಹಾವಳಿ ಜಾಸ್ತಿ ಆಗಿರುವ ಬಗ್ಗೆ ಪ್ರತಿಕ್ರಿಯಿಸಿದ ಪೊಲೀಸ್‌ ಕಮಿಷನರ್‌, ‘ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಗಾಂಜಾ ಹಾವಳಿ ತಡೆಯಲು ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದೇವೆ. ಇದು ಗಡಿ ಪ್ರದೇಶವಾಗಿರುವುದರಿಂದ ಹೊರರಾಜ್ಯಗಳಿಂದ ಗಾಂಜಾ ಪೂರೈಕೆ ತಡೆಯಲು ತಪಾಸಣೆ ಹೆಚ್ಚಿಸಿದ್ದೇವೆ’ ಎಂದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಸುಳ್ಯ : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಭೇದಿಸಿದ ಪೊಲೀಸರಿಗೆ ಗೌರವಾರ್ಪಣೆ

Next Post

ಮಂಗಳೂರು: ಕೆಎಂಎಫ್‌ನಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ ಪ್ರಕರಣ; ಮಹಿಳೆ ಸಹಿತ ಮೂವರು ಆರೋಪಿಗಳು ಅರೆಸ್ಟ್

Related Posts

ವೆಬ್​ ಸೀರೀಸ್ ನೋಡಿ ಒಂದೇ ಕುಟುಂಬದ ನಾಲ್ವರನ್ನು ಕೊಂದ 17ರ ಬಾಲಕ, ಕೊನೆಗೂ ಸಿಕ್ಕಿ ಬಿದ್ದ
ಕ್ರೈಮ್ ನ್ಯೂಸ್

ವೆಬ್​ ಸೀರೀಸ್ ನೋಡಿ ಒಂದೇ ಕುಟುಂಬದ ನಾಲ್ವರನ್ನು ಕೊಂದ 17ರ ಬಾಲಕ, ಕೊನೆಗೂ ಸಿಕ್ಕಿ ಬಿದ್ದ

May 30, 2026
89
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ ಪರಾರಿಯಾಗಿದ್ದ ಆರೋಪಿಗಳ ಬಂಧನ
ಕ್ರೈಮ್ ನ್ಯೂಸ್

ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ ಪರಾರಿಯಾಗಿದ್ದ ಆರೋಪಿಗಳ ಬಂಧನ

May 27, 2026
91
Next Post
ಮಂಗಳೂರು: ಕೆಎಂಎಫ್‌ನಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ ಪ್ರಕರಣ; ಮಹಿಳೆ ಸಹಿತ ಮೂವರು ಆರೋಪಿಗಳು ಅರೆಸ್ಟ್

ಮಂಗಳೂರು: ಕೆಎಂಎಫ್‌ನಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ ಪ್ರಕರಣ; ಮಹಿಳೆ ಸಹಿತ ಮೂವರು ಆರೋಪಿಗಳು ಅರೆಸ್ಟ್

Discussion about this post

Recent News

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

June 2, 2026
66
ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

June 1, 2026
23
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

June 2, 2026
ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

June 1, 2026
ವೆಬ್​ ಸೀರೀಸ್ ನೋಡಿ ಒಂದೇ ಕುಟುಂಬದ ನಾಲ್ವರನ್ನು ಕೊಂದ 17ರ ಬಾಲಕ, ಕೊನೆಗೂ ಸಿಕ್ಕಿ ಬಿದ್ದ

ವೆಬ್​ ಸೀರೀಸ್ ನೋಡಿ ಒಂದೇ ಕುಟುಂಬದ ನಾಲ್ವರನ್ನು ಕೊಂದ 17ರ ಬಾಲಕ, ಕೊನೆಗೂ ಸಿಕ್ಕಿ ಬಿದ್ದ

May 30, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d