ನವದೆಹಲಿ(ಆ.22): ಪ್ರಧಾನಿ ನರೇಂದ್ರ ಮೋದಿ ಮತ್ತೆ ಕರ್ನಾಟಕದತ್ತ ಮುಖ ಮಾಡಿದ್ದಾರೆ. ಈ ಬಾರಿ ಮಂಗಳೂರು ಪ್ರವಾಸ ಕೈಗೊಳ್ಳುತ್ತಿದ್ದಾರೆ. ಸೆಪ್ಟೆಂಬರ್ 2 ರಂದು ಮೋದಿ ಅಧಿಕೃತ ಸರ್ಕಾರಿ ಕಾರ್ಯಕ್ರಮಕ್ಕಾಗಿ ಮಂಗಳೂರಿಗೆ ಆಗಮಿಸುತ್ತಿದ್ದಾರೆ. ನವ ಮಂಗಳೂರು ಬಂದರು ಪ್ರಾಧಿಕಾರದ ಕಾರ್ಯಕ್ರಮಕ್ಕೆ ಮೋದಿಗೆ ಆಹ್ವಾನ ನೀಡಲಾಗಿದೆ. ಇದರ ಜೊತೆಗೆ ಎನ್ ಎಂಪಿಎ ಹಲವು ಯೋಜನೆಗಳ ಉದ್ಘಾಟನೆಗಾಗಿ ಮೋದಿಗೆ ಆಹ್ವಾನ ನೀಡಲಾಗಿದೆ. ಈ ಕಾರ್ಯಕ್ರಮಕ್ಕೆ ಆಗಮಿಸುವುದಾಗಿ ಮೋದಿ ಒಪ್ಪಿಕೊಂಡಿದ್ದಾರೆ. ಶೀಘ್ರದಲ್ಲೇ ಪ್ರಧಾನಿ ಕಾರ್ಯಾಲಯಿಂದ ಮೋದಿ ಮಂಗಳೂರು ಪ್ರವಾಸ ಅಧಿಕೃತ ಪ್ರಕಟಣೆ ಹೊರಬೀಳಲಿದೆ. ಪ್ರಧಾನಿ ನರೇಂದ್ರ ಸರ್ಕಾರಿ ಅಧಿಕೃತ ಕಾರ್ಯಕ್ರಮಕ್ಕಾಗಿ ಮಂಗಳೂರಿಗ ಭೇಟಿ ನೀಡಲಿದ್ದಾರೆ. ಇದರ ಜೊತೆಗೆ ಮಂಗಳೂರಿನಲ್ಲಿನ ಕೇಂದ್ರ ಸರ್ಕಾರದ ಹಲವು ಯೋಜನೆಗಳಿಗೆ ಚಾಲನೆ ಸಿಗಲಿದೆ. ಈ ಕಾರ್ಯಕ್ರಮಕಗಳಿಗಾಗಿ ಮೋದಿ ಮಂಗಳೂರಿಗೆ ಆಗಮಿಸುತ್ತಿದ್ದಾರೆ. ಇದೇ ವೇಳೆ ಮಂಗಳೂರಿನಲ್ಲಿ ಪಕ್ಷದ ಕಾರ್ಯಕ್ರಮವನ್ನು ಆಯೋಜಿಸಲು ರಾಜ್ಯ ಬಿಜೆಪಿ ತಯಾರಿ ಮಾಡಿಕೊಂಡಿದೆ.
ಕೋಮು ಸಂಘರ್ಷ ಸೇರಿದಂತ ಹಲವು ಕಾರಣಗಳಿಂದ ಮಂಗಳೂರು ದೇಶದಲ್ಲಿ ಸುದ್ದಿಯಲ್ಲಿದೆ. ಇದರ ಜೊತೆಗೆ ಕಾರ್ಯಕರ್ತರ ಅಸಮಧಾನಗಳು ಬಿಜೆಪಿಗೆ ತೀವ್ರ ಹಿನ್ನಡೆಯನ್ನು ತಂದಿದೆ. ಈ ಎಲ್ಲಾ ಸಮಸ್ಯೆಗಳಿಗೆ ಫುಲ್ ಸ್ಟಾಪ್ ಹಾಕಿ, ಕರಾವಳಿ ಭದ್ರಕೋಟೆಯನ್ನು ಮತ್ತಷ್ಚು ಭದ್ರಪಡಿಸಲು ಬಿಜೆಪಿ ತಯಾರಿ ಮಾಡಿಕೊಂಡಿದೆ. ಇದಕ್ಕಾಗಿ ಮಂಗಳೂರಿನ ಹೊರವಲಯದಲ್ಲಿ ಪ್ರಧಾನಿ ನರೇಂದ್ರ ಮೋದಿಯ ಬೃಹತ್ ಸಮಾವೇಶವನ್ನು ಆಯೋಜಿಸಿದೆ. ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಭೇಟಿ ನೀಡುತ್ತಿದ್ದಾರೆ. ಇದೇ ವೇಳೆ ನಗರದ ಹೊರವಲಯ ಕೂಳೂರಿನಲ್ಲಿ ಪಕ್ಷದ ಕಾರ್ಯಕ್ರಮವನ್ನು ಆಯೋಜಿಸಲು ರಾಜ್ಯ ಬಿಜೆಪಿ ಪ್ಲಾನ್ ಮಾಡಿಕೊಂಡಿದೆ. ಈ ಮೂಲಕ ಬಿಜೆಪಿ ಕಾರ್ಯಕರ್ತರು, ಹಿಂದೂ ಕಾರ್ಯಕರ್ತರಿಗೆ ಹೊಸ ಹುರುಪು ನೀಡಲು ಬಿಜೆಪಿ ಮುಂದಾಗಿದೆ.
Discover more from Coastal Times Kannada
Subscribe to get the latest posts sent to your email.








Discussion about this post