• About us
  • Contact us
  • Disclaimer
Friday, June 26, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ನ್ಯೂ ಶೈನ್ ಎಂಟರ್ಪ್ರೈಸಸ್ ಹೆಸರಿನಲ್ಲಿ ಮೋಸದ ಲಕ್ಕಿ ಸ್ಕೀಮ್ 15 ಕೋಟಿ ರೂ. ಅಧಿಕ ವಂಚನೆ ಪ್ರಕರಣ, ನಾಲ್ವರು ಆರೋಪಿಗಳ ಬಂಧನ, ಕೂಡಿಟ್ಟ ಆಸ್ತಿಯೂ ಮುಟ್ಟುಗೋಲು !

Coastal Times by Coastal Times
August 23, 2025
in ಕ್ರೈಮ್ ನ್ಯೂಸ್
ನ್ಯೂ ಶೈನ್ ಎಂಟರ್ಪ್ರೈಸಸ್ ಹೆಸರಿನಲ್ಲಿ ಮೋಸದ ಲಕ್ಕಿ ಸ್ಕೀಮ್ 15 ಕೋಟಿ ರೂ. ಅಧಿಕ ವಂಚನೆ ಪ್ರಕರಣ, ನಾಲ್ವರು ಆರೋಪಿಗಳ ಬಂಧನ, ಕೂಡಿಟ್ಟ ಆಸ್ತಿಯೂ ಮುಟ್ಟುಗೋಲು !
139
VIEWS
WhatsappTelegramShare on FacebookShare on Twitter

ಮಂಗಳೂರು: ಸುರತ್ಕಲ್ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಲಕ್ಕಿ ಸ್ಕೀಂ ಹೆಸರಲ್ಲಿ ಸಾವಿರಾರು ಗ್ರಾಹಕರಿಗೆ 15 ಕೋ.ರೂ. ಅಧಿಕ ವಂಚನೆ ಮಾಡಿದ ಆರೋಪದಲ್ಲಿ ಸುರತ್ಕಲ್‌ ಮತ್ತು ಬಜ್ಪೆಯ ನಾಲ್ವರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.

ನ್ಯೂ ಶೈನ್ ಎಂಟರ್ ಪ್ರೈಸಸ್ ಎಂಬ ಲಕ್ಕಿ ಸ್ಕೀಮ್ ಮಾಡಿ ವಂಚಿಸಿದ್ದ ಕಾಟಿಪಳ್ಳ ಒಂದನೇ ಬ್ಲಾಕ್‌ನ ಮಹಾಕಾಳಿ ದೈವಸ್ಥಾನ ಬಳಿಯ ನಿವಾಸಿ ಅಹ್ಮದ್ ಖುರೇಶಿ (34), ಕಾಟಿಪಳ್ಳ ಎರಡನೇ ಬ್ಲಾಕ್‌ನ ಕೋರ್ದಬ್ಬು ದ್ವಾರದ ಬಳಿಯ ನಿವಾಸಿ ನಝೀರ್ ಯಾನೆ ನಾಸಿರ್ (39) ಹಾಗೂ ನ್ಯೂ ಇಂಡಿಯಾ ರಾಯಲ್ ಸ್ಕೀಮ್ ಗ್ರೀನ್ ಲೈಟ್ ಲಕ್ಕಿ ಸ್ಕೀಮ್‌ನಲ್ಲಿ ವಂಚನೆ ಮಾಡಿದ್ದ ಬಜ್ಪೆ ನಿವಾಸಿ ಮುಹಮ್ಮದ್ ಅಶ್ರಫ್ (43), ಕೃಷ್ಣಾಪುರ 7ನೇ ಬ್ಲಾಕ್ ನಿವಾಸಿ ಮುಹಮ್ಮದ್ ಹನೀಫ್ (50) ಬಂಧಿತರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕಾಟಿಪಳ್ಳ 2ನೇ ಬ್ಲಾಕ್ ಸಂಶುದ್ದೀನ್ ಸರ್ಕಲ್ ಬಳಿ ಇರುವ ಆಯಿಷಾ ಕಟ್ಟಡದಲ್ಲಿರುವ ನ್ಯೂ ಶೈನ್ ಎಂಟರ್ ಪ್ರೈಸಸ್ ಕಚೇರಿಯನ್ನು ಏಕಾಏಕಿ ಬಂದ್ ಮಾಡಿ ಸಾರ್ವಜನಿಕರಿಗೆ ಆಸೆ ಹುಟ್ಟಿಸಿ ವಂಚಿಸಿದ್ದರು. ಇವರ ವಿರುದ್ಧ ಆ.16ರಂದು ಸೂರಿಂಜೆ ನಿವಾಸಿ ಶಿವಪ್ರಸಾದ್ ಎಂಬವರು ದೂರು ನೀಡಿದ್ದರು. ಇದೊಂದು ಅನಿಯಂತ್ರಿತ ಠೇವಣಿ ಯೋಜನೆ ಆಗಿದ್ದು ಸಂಬಂಧಪಟ್ಟ ಪ್ರಾಧಿಕಾರದಿಂದ ಯಾವುದೇ ಪೂರ್ವಾನುಮತಿ ಇಲ್ಲದೇ ಸಾರ್ವಜನಿಕರಿಂದ ನ್ಯೂ ಶೈನ್ ಎಂಟರ್ ಪ್ರೈಸಸ್ ಹೆಸರಿನಲ್ಲಿ ಸುಮಾರು 4 ಕೋಟಿ 20 ಲಕ್ಷಕ್ಕಿಂತ ಅಧಿಕ ಹಣ ಸಂಗ್ರಹಣೆ ಮಾಡಿ ವಂಚನೆಗೈದಿದ್ದಾರೆ.

ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಅ.ಕ್ರ 107/2025 ಕಲಂ 316(2), 318(4) ಬಿ.ಎನ್.ಎಸ್ ಮತ್ತು ಕಲಂ 21 ಅನಿಯಂತ್ರಿತ ಠೇವಣಿ ನಿಷೇಧ ಕಾಯ್ದೆ (BUDS Act) ಪ್ರಕಾರ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ಅಹಮ್ಮದ್ ಖುರೇಶಿ ಹಾಗೂ ನಜೀರ್ @ ನಾಸೀರ್ ಎಂಬವರನ್ನು ಆ.19ರಂದು ಬಂಧಿಸಿದ್ದು ಪ್ರಕರಣದ ತನಿಖೆಯ ಸಂಬಂಧ ಆ.25 ರ ವರೆಗೆ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.

ಆರೋಪಿಗಳು ಕಾಟಿಪಳ್ಳದ ಆಯಿಷಾ ಕಾಂಪ್ಲೆಕ್ಸ್ ನ ಕಚೇರಿ, ಬಿ.ಎಂ.ಆರ್ ಕಾಂಪ್ಲೆಕ್ಸ್ ನ ಕಚೇರಿ ಹಾಗೂ ಶೈನ್ ಮಾರ್ಟ್ ಕಚೇರಿಯಲ್ಲಿ ಲಕ್ಕಿ ಸ್ಕೀಮ್ ಕೃತ್ಯಕ್ಕಾಗಿ ಉಪಯೋಗಿಸಿದ್ದ ಕಂಪ್ಯೂಟರ್ ಉಪಕರಣಗಳು, ಡ್ರಾ ಕಾಯಿನ್, ಲಕ್ಕಿ ಡ್ರಾ ಪೆಟ್ಟಿಗೆ, ರಿಜಿಸ್ಟರ್ ಗಳು, ಡಿವಿಆರ್ ಗಳನ್ನು ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿತರ ಹೆಸರಿನಲ್ಲಿರುವ ಬ್ಯಾಂಕ್ ಖಾತೆಗಳು, ಚಿನ್ನಾಭರಣಗಳ ಖರೀದಿ, ನಿವೇಶನ, ವಾಹನ ಖರೀದಿ, ಮನೆ, ಕಚೇರಿಯಲ್ಲಿದ್ದ ಕಂಪ್ಯೂಟರ್ ಉಪಕರಣಗಳನ್ನು ಹಾಗೂ ಇನ್ನಿತರ ದಾಖಲಾತಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಡ್ಸ್ ಕಾಯ್ದೆಯಂತೆ ಆರೋಪಿತರು ಲಕ್ಕಿ ಸ್ಕೀಮ್ ಹಣದಲ್ಲಿ ಖರೀದಿಸಿದ ಮನೆ, ನಿವೇಶನ, ಫ್ಲಾಟ್, ವಾಹನಗಳು, ಚಿನ್ನಾಭರಣಗಳು ಹಾಗೂ ಇನ್ನಿತರ ವಸ್ತುಗಳ ಜಪ್ತಿ ಮಾಡಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರಿಗೆ, ಉಪ ವಿಭಾಗ ದಂಡಾಧಿಕಾರಿಯವರಿಗೆ, ಕಂದಾಯ ಇಲಾಖೆಯವರಿಗೆ ಪತ್ರ ಬರೆಯಲಾಗಿದೆ. ಸದ್ರಿ ಲಕ್ಕಿ ಸ್ಕೀಮ್ ಗಳಿಗೆ ಸೇರಿದ ಸದಸ್ಯರು ಹಾಗೂ ಸದಸ್ಯರಿಂದ ಹಣ ಸಂಗ್ರಹಣೆ ಮಾಡಿದ ಏಜೆಂಟರು, ಸಂಬಂಧಿಸಿದ ದಾಖಲಾತಿಯೊಂದಿಗೆ ಠಾಣೆಗೆ ಬಂದು ಹೇಳಿಕೆಯನ್ನು ನೀಡುವಂತೆ ಸೂಚಿಸಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಬೋಂದೆಲ್ ಜಂಕ್ಷನ್ ಬಳಿ ಬೀದಿಬದಿ ಹೂವಿನ ವ್ಯಾಪಾರಿ ಮಹಿಳೆಗೆ ಕಿರುಕುಳ, ಆತ್ಮಹತ್ಯೆಗೆ ಯತ್ನ , ಕಿರುಕುಳ ನೀಡಿದವರ ವಿರುದ್ಧ ಪ್ರಕರಣ ದಾಖಲಿಸಲು ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯ

Next Post

ಧರ್ಮಸ್ಥಳ ಪ್ರಕರಣ: ಬಂಧಿತ ಮಾಸ್ಕ್​​ಮ್ಯಾನ್ ಸಿಎನ್​ ಚಿನ್ನಯ್ಯ ಅಲಿಯಾಸ್ ಚೆನ್ನ 10 ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ

Related Posts

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್
ಕ್ರೈಮ್ ನ್ಯೂಸ್

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

June 26, 2026
29
ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!
ಕ್ರೈಮ್ ನ್ಯೂಸ್

ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!

June 25, 2026
78
Next Post
ಧರ್ಮಸ್ಥಳ ಪ್ರಕರಣ: ಬಂಧಿತ ಮಾಸ್ಕ್​​ಮ್ಯಾನ್ ಸಿಎನ್​ ಚಿನ್ನಯ್ಯ ಅಲಿಯಾಸ್ ಚೆನ್ನ 10 ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ

ಧರ್ಮಸ್ಥಳ ಪ್ರಕರಣ: ಬಂಧಿತ ಮಾಸ್ಕ್​​ಮ್ಯಾನ್ ಸಿಎನ್​ ಚಿನ್ನಯ್ಯ ಅಲಿಯಾಸ್ ಚೆನ್ನ 10 ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ

Discussion about this post

Recent News

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

June 26, 2026
29
ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

June 26, 2026
58
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

June 26, 2026
ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

June 26, 2026
ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!

ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!

June 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d