ಚಾಮರಾಜನಗರ: ಹಕ್ಕುಪತ್ರ ವಿತರಣೆ ಕಾರ್ಯಕ್ರಮದಲ್ಲಿ ಸಮಸ್ಯೆ ಹೇಳಲು ಬಂದಿದ್ದ ಮಹಿಳೆಯೊಬ್ಬರಿಗೆ ಕಪಾಳಮೋಕ್ಷ ಮಾಡಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ನಡೆದಿದೆ. ಶನಿವಾರ ಹಂಗಳ ಗ್ರಾಮದ 175 ಜನರಿಗೆ ನಿವೇಶನ ಹಕ್ಕುಪತ್ರ ವಿತರಣೆ ಕಾರ್ಯಕ್ರಮ ನಿಗದಿಯಾಗಿತ್ತು. ಮಧ್ಯಾಹ್ನ 3.30ಕ್ಕೆ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ ಸಚಿವರು ಸಂಜೆ 6.30ಕ್ಕೆ ಆಗಮಿಸಿದರು. ಈ ವೇಳೆ ನಿವೇಶನದ ಹಕ್ಕುಪತ್ರ ಪಡೆಯಲು ನೂಕುನುಗ್ಗಲು ಉಂಟಾಯಿತು. ‘ಫಲಾನುಭವಿಗಳನ್ನು ಸರಿಯಾಗಿ ಆಯ್ಕೆ ಮಾಡಿಲ್ಲ. ನಿವೇಶನ ಇದ್ದವರಿಗೇ ಮತ್ತೆ ಕೊಡಲಾಗಿದೆ. ನಮಗೆ ಅನ್ಯಾಯವಾಗಿದೆ. ಕಾಂಗ್ರೆಸ್ ಮುಖಂಡ ನಂಜಪ್ಪ ಅವರು ಹೇಳಿದವರಿಗೆ ನಿವೇಶನ ನೀಡಲಾಗಿದೆ’ ಎಂದು ಆರೋಪಿಸಿ ಕೆಲವು ಮಹಿಳೆಯರು ಸಚಿವರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಈ ಸಂದರ್ಭದಲ್ಲಿ ಕೆಂಪಮ್ಮ ಎಂಬ ಮಹಿಳೆ ಸಚಿವರ ಬಳಿಗೆ ಹೋಗಿ ಸಮಸ್ಯೆ ಹೇಳಲು ಹೊರಟಾಗ ಸೋಮಣ್ಣ ಕೆನ್ನೆಗೆ ಹೊಡೆದಿದ್ದಾರೆ. ಒರಟಾಗಿ ವರ್ತಿಸಿ ಬಳಿಕ ಸಚಿವರ ಕಾಲಿಗೆ ಬೀಳುವ ವಿಡಿಯೋ ಇದೆ.
ಸಮಸ್ಯೆ ಹೇಳಿಕೊಳ್ಳಲು ತೆರಳಿದ ಮಹಿಳೆಗೆ ಸೋಮಣ್ಣ ಅವರು ಕಪಾಳಮೋಕ್ಷ ಮಾಡಿದರು. ಘಟನೆಯಿಂದ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ನಂತರ ಪೊಲೀಸರು ಮಧ್ಯಪ್ರವೇಶ ಮಾಡಿ ಪರಿಸ್ಥಿತಿ ತಿಳಿಗೊಳಿಸಿದರು.
Karnataka minister seen slapping a woman. Housing minister & senior @BJP4Karnataka leader V Somanna caught on camera slapping, on stage, a woman who was trying to voice her grievance at an event the minister was participating in on Saturday at Gundlupet. pic.twitter.com/3OuMQYqgqB
— Anusha Ravi Sood (@anusharavi10) October 23, 2022
Discover more from Coastal Times Kannada
Subscribe to get the latest posts sent to your email.








Discussion about this post