ಮಂಗಳೂರು: ಗುರುಪುರ ಕೈಕಂಬದ ಖಾಸಗಿ ಸಭಾಗೃಹದ ಮೈದಾನದಲ್ಲಿ ನಡೆಯುತ್ತಿರುವ ಸಿಪಿಎಂ ಪಕ್ಷದ ದ.ಕ. ಜಿಲ್ಲಾ 23ನೆ ಸಮ್ಮೇಳನದ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಂಗಳವಾರ ಅವರು ಮಾತನಾಡಿದರು.
ಕೇಂದ್ರದಲ್ಲಿ ಹೆಸರಿಗೆ ಮಾತ್ರ ಬಿಜೆಪಿ ನೇತೃತ್ವದ ಸರಕಾರವಿದೆ. ಆದರೆ ಆಡಳಿತ ನಡೆಸುವುದು ಸಂಘ ಪರಿವಾರವಾಗಿದೆ. ಈ ಸಂಘ ಪರಿವಾರ, ಬಿಜೆಪಿಯು ಭಕ್ತಿಯ ಹೆಸರಲ್ಲಿ ಜನರನ್ನು ಮೋಸಮಾಡುತ್ತದೆ. ದೇಶದ ಬಹುತೇಕ ಕಡೆ ಭಕ್ತಿಯ ಹೆಸರಿನಲ್ಲಿ ಜನರನ್ನು ವಂಚಿಸಿ ಅಧಿಕಾರಕ್ಕೇರಿದ ಬಿಜೆಪಿಯು ಕೇರಳದಲ್ಲೂ ತಳವೂರಲು ಯತ್ನಿಸುತ್ತಿದೆ. ಆದರೆ ಸಿಪಿಎಂ ಅದಕ್ಕೆ ಎಂದೂ ಅವಕಾಶ ಕೊಡುವುದಿಲ್ಲ ಎಂದು ಸಿಪಿಎಂ ಕೇಂದ್ರ ಸಮಿತಿ ಸದಸ್ಯೆ ಹಾಗೂ ಕೇರಳದ ಮಾಜಿ ಸಚಿವೆ, ಹಾಲಿ ಶಾಸಕಿ ಶೈಲಚಾ ಟೀಚರ್ ಹೇಳಿದರು.
ಎಲ್ಲಾ ಧರ್ಮವೂ ಅಹಿಂಸೆ, ಸಮಾನತೆ, ಮಾನವತೆಯನ್ನೇ ಪ್ರತಿಪಾದಿಸುತ್ತದೆ. ನಾರಾಯಣ ಗುರುಗಳೂ ಸಹ ಅದನ್ನೇ ಬೋಧಿಸಿದ್ದರು. ಆದರೆ ಸಂಘಪರಿವಾರ ಮಾತ್ರ ಧರ್ಮ, ಜಾತಿ ಹೆಸರಿನಲ್ಲಿ ವಿಭಜಿಸುತ್ತಿದೆ. ದೇಶಾದ್ಯಂತ ಸಂಘಪರಿವಾರ ಅದೆಷ್ಟು ಕೋಮು, ಮತಾಂಧತೆಯಿಂದ ಹಲವರ ಜೀವ ಬಲಿ ಪಡೆದಿದೆ. ಗುಜರಾತ್‌ನಲ್ಲಿ ಕರಸೇವೆ ಹೆಸರಿನಲ್ಲಿ ನಡೆದ ಜನಾಂಗೀಯ ಹತ್ಯಾಕಾಂಡ ಮರೆಯಲು ಸಾಧ್ಯವಿಲ್ಲ. ಅಲ್ಲಿನ ಮುಸ್ಲಿಮರನ್ನು ಪೆಟ್ರೋಲ್ ಸುರಿದು ಜೀವಂತವಾಗಿ ಸುಟ್ಟಿದ್ದರು ಎಂದು ಆಕ್ರೋಶ ವ್ಯಕ್ತಪಡಿಸಿದರು.
ದೇಶದಲ್ಲಿರುವುದು ಕಾರ್ಪೊರೇಟ್ ಕಂಪೆನಿಗಳ ಸರಕಾರವಾಗಿದೆ. ಅದರ ವಿರುದ್ಧವೂ ಹೋರಾಟ ಆರಂಭವಾಗಿದೆ. ರೈತರ ಹೋರಾಟವು ಕೇವಲ ನರೇಂದ್ರ ಮೋದಿಯ ವಿರುದ್ದವಲ್ಲ. ಕಾರ್ಪೊರೇಟ್ ಕಂಪೆನಿಗಳ ವಿರುದ್ದವೂ ಆಗಿದೆ ಎಂದ ಶೈಲಜಾ ಟೀಚರ್ ಪ್ರಧಾನಿ ನರೇಂದ್ರ ಮೋದಿ ರೈತರ ಅಭಿವೃದ್ಧಿ ಹೆಸರಲ್ಲಿ ಕೃಷಿ ಕಾಯ್ದೆಯನ್ನು ಜಾರಿಗೆಗೊಳಿಸಿದರು. ಈ ಕಾಯ್ದೆಯನ್ನು ಸಮರ್ಥಿಸಿದ್ದ ಬಿಜೆಪಿ ಕಾರ್ಯಕರ್ತರು ಇದೀಗ ವೌನಕ್ಕೆ ಶರಣಾಗಿದ್ದಾರೆ ಎಂದರು.
ಕಮ್ಯುನಿಸ್ಟ್ ಪಕ್ಷವು ಈ ದೇಶದ ದುಡಿಯುವ ವರ್ಗದ ಜೀವಾಳವಾಗಿದೆ. ದುಡಿಯುವ ವರ್ಗದ ಮೇಲಿನ ದೌರ್ಜನ್ಯ ವಿರೋಧಿಸಿ ನಿರಂತರ ಹೋರಾಟ ಮಾಡುತ್ತ ಬಂದಿರುವ ಪಕ್ಷ ಸಿಪಿಎಂ ಆಗಿದೆ. ರಷ್ಯಾದಲ್ಲಿ ಹೋರಾಟದ ಕಿಚ್ಚು ಹಚ್ಚಿದ ಕಮ್ಯುನಿಸ್ಟರು ಅಮೆರಿಕ, ಭಾರತ ಮತ್ತಿತರ ರಾಷ್ಟ್ರಗಳಲ್ಲಿ ಸಾಮ್ರಾಜ್ಯಶಾಹಿಗಳು ಮತ್ತು ಬಂಡವಾಳಶಾಹಿಗಳ ವಿರುದ್ಧ ಧ್ವನಿ ಎತ್ತಿದ್ದಾರೆ ಎಂದು ಶೈಲಜಾ ಟೀಚರ್ ಹೇಳಿದರು.
ಪಕ್ಷದ ಜಿಲ್ಲಾ ಮುಖಂಡ ವಸಂತ ಆಚಾರಿ ಅಧ್ಯಕ್ಷತೆ ವಹಿಸಿದ್ದರು. ಸಮ್ಮೇಳದ ಸ್ವಾಗತ ಸಮಿತಿಯ ಅಧ್ಯಕ್ಷ ಮುನೀರ್ ಕಾಟಿಪಳ್ಳ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ವಸಂತ ಆಚಾರಿ ವಹಿಸಿದ್ದರು. ಕೆಆರ್ ಶ್ರೀಯಾನ್, ಕೆ. ಯಾದವ ಶೆಟ್ಟಿ, ಕೃಷ್ಣಪ್ಪ ಸಾಲ್ಯಾನ್, ಯುಬಿ ಲೋಕಯ್ಯ, ಮುನೀರ್‌ಕಾಟಿಪಳ್ಳ, ಸುನೀಲ್ ಕುಮಾರ್ ಬಜಾಲ್, ಸದಾಶಿವ ದಾಸ್, ಮನೋಜ್ ವಾಮಂಜೂರು ಮತ್ತಿತರರು ಉಪಸ್ಥಿತರಿದ್ದರು.
Discussion about this post