• About us
  • Contact us
  • Disclaimer
Saturday, September 12, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಬಾಲಕಿ, ಮಹಿಳೆಯ ಸ್ನಾನದ ವಿಡಿಯೋ ರೆಕಾರ್ಡ್; ಅಪರಾಧಿಗೆ 5 ವರ್ಷ ಶಿಕ್ಷೆ

Coastal Times by Coastal Times
December 23, 2024
in ಕ್ರೈಮ್ ನ್ಯೂಸ್
ಮಂಗಳೂರು: ಬಾಲಕಿ, ಮಹಿಳೆಯ ಸ್ನಾನದ ವಿಡಿಯೋ ರೆಕಾರ್ಡ್; ಅಪರಾಧಿಗೆ 5 ವರ್ಷ ಶಿಕ್ಷೆ
136
VIEWS
WhatsappTelegramShare on FacebookShare on Twitter

ಮಂಗಳೂರು: ಬಾಲಕಿ ಮತ್ತು ವಿವಾಹಿತ ಮಹಿಳೆ ಬಚ್ಚಲು ಮನೆಯಲ್ಲಿ ಸ್ನಾನ ಮಾಡುತ್ತಿದ್ದುದನ್ನು ತನ್ನ ಮೊಬೈಲ್‌ನಲ್ಲಿ ವೀಡಿಯೋ ಮಾಡಿದ ತೋಟ ಬೆಂಗ್ರೆ ನಿವಾಸಿ ರಂಶೀದ್‌ನಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಸ್‌ಸಿ -1 (ಪೋಕ್ಸೋ) ಐದು ವರ್ಷಗಳ ಕಾರಾಗೃಹ ಶಿಕ್ಷೆ ಮತ್ತು 15 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.

ಪ್ರಕರಣ ವಿವರ: 2024ರ ಜು.5 ಮತ್ತು 7ರಂದು ರಾತ್ರಿ ಆರೋಪಿ ರಂಶೀದ್ ಬಾಲಕಿ ಮತ್ತು ವಿವಾಹಿತ ಮಹಿಳೆ ಮನೆಯಲ್ಲಿ ಬಾತ್ ರೂಂನಲ್ಲಿ ಸ್ನಾನ ಮಾಡುತ್ತಿರುವುದನ್ನು ವಿಡಿಯೋ ಮಾಡಿದ್ದನು. ಜು.16ರಂದು ಇನ್ನೊಂದು ಮನೆಯ ಟೆರೇಸ್ ಮೇಲೆ ವಿಡಿಯೋ ಮಾಡುವ ಉದ್ದೇಶದಿಂದ ಹೋಗಿದ್ದು, ಇದನ್ನು ಮನೆಯವರು ಗಮನಿಸಿ, ಆತನನ್ನು ಯಾರೆಂದು ಕೂಗಿದಾಗ ಆತ ಅಲ್ಲಿಂದ ಹಾರಿ ಪರಾರಿಯಾಗಿದ್ದನು.

ಆರೋಪಿ ಓಡುವ ಸಂದರ್ಭದಲ್ಲಿ ಮೊಬೈಲ್ ಕೆಳಗೆ ಬಿದ್ದಿತ್ತು. ಮೊಬೈಲ್ ವಶಪಡಿಸಿಕೊಂಡ ಮನೆಯವರು ಆತನನ್ನು ಪತ್ತೆ ಹಚ್ಚಿ ಆತನ ಮೂಲಕವೇ ಮೊಬೈಲ್‌ನ ಲಾಕ್ ತೆಗೆಸಿ ನೋಡಿದಾಗ ಬಾತ್‌ ರೂಂನಲ್ಲಿ ಸ್ನಾನ ಮಾಡುತ್ತಿದ್ದ ಮಹಿಳೆ ಮತ್ತು ಬಾಲಕಿಯ ವಿಡಿಯೋ ಕಂಡು ಬಂದಿತ್ತು. ಈ ಹಿನ್ನೆಲೆ ಮಹಿಳೆ ನೀಡಿದ ದೂರಿನಂತೆ ಆತನ ವಿರುದ್ಧ ಜು.17ರಂದು ಪಣಂಬೂರು ಠಾಣೆಯಲ್ಲಿ ದೂರು ದಾಖಲಾಗಿತ್ತು.

ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಸ್‌ಸಿ-1 (ಪೋಕ್ಸೋ)ಯ ನ್ಯಾಯಾಧೀಶ ವಿನಯ್ ದೇವರಾಜ್ ಅವರು, ರಂಶೀದ್ ವಿರುದ್ಧದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬಿಎನ್‌ಎಸ್ ಸೆಕ್ಷನ್ 329 (3) ರಡಿ 3 ತಿಂಗಳ ಸಾಮಾನ್ಯ ಕಾರಾಗೃಹ ಶಿಕ್ಷೆ, ಸೆಕ್ಷನ್ 329(4)ರಡಿ ಒಂದು ವರ್ಷದ ಸಾಮಾನ್ಯ ಕಾರಾಗೃಹ ಶಿಕ್ಷೆ ಮತ್ತು 5 ಸಾವಿರ ರೂ. ದಂಡ, ದಂಡ ತೆರಲು ತಪ್ಪಿದಲ್ಲಿ 2 ತಿಂಗಳು ಹೆಚ್ಚುವರಿ ಕಾರಾಗೃಹ ಶಿಕ್ಷೆ, ಪೋಕ್ಸೋ ಕಾಯ್ದೆ ಕಲಂ 14 ರಡಿ 5 ವರ್ಷಗಳ ಸಾಮಾನ್ಯ ಕಾರಾಗೃಹ ಶಿಕ್ಷೆ ಮತ್ತು 10 ಸಾವಿರ ರೂ. ದಂಡ. ದಂಡ ಕಟ್ಟಲು ತಪ್ಪಿದಲ್ಲಿ 1 ವರ್ಷ ಹೆಚ್ಚುವರಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ಪ್ರಕರಣದ ಸಂತ್ರಸ್ತರಿಗೆ 1 ಲಕ್ಷ ರೂ. ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ನ್ಯಾಯಾಧೀಶರು ನಿರ್ದೇಶನ ನೀಡಿದ್ದಾರೆ. ಪ್ರಕರಣದ ಭಾಗಶಃ ತನಿಖೆಯನ್ನು ಪಣಂಬೂರು ಠಾಣೆಯ ಪಿಎಸ್‌ಐ ರಾಘವೇಂದ್ರ ಅವರು ಮಾಡಿದ್ದು, ಪಿಎಸ್‌ಐ ಶ್ರೀಕಲಾ ಅವರು ತನಿಖೆ ಪೂರೈಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಸಹನಾದೇವಿ ಬೋಳೂರು ವಾದಿಸಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಷೇರು ಮಾರುಕಟ್ಟೆ ಹೆಸರಿನಲ್ಲಿ 40 ಲಕ್ಷ ರೂ. ವಂಚನೆ, ಕೇರಳ ಮೂಲದ ವ್ಯಕ್ತಿ ಸೆರೆ

Next Post

ಲೋಕಾಯುಕ್ತ ಅಧಿಕಾರಿಯೆಂದು ಸೋಮೇಶ್ವರ ಪುರಸಭೆಯ ಕಂದಾಯ ಅಧಿಕಾರಿ, ಸಿಬ್ಬಂದಿಗೆ ಬ್ಲ್ಯಾಕ್‌ಮೇಲ್ : ಆರೋಪಿ ಧನಂಜಯ ರೆಡ್ಡಿ ಸೆರೆ

Related Posts

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ
ಕ್ರೈಮ್ ನ್ಯೂಸ್

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
36
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ
ಕ್ರೈಮ್ ನ್ಯೂಸ್

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
57
Next Post
ಲೋಕಾಯುಕ್ತ ಅಧಿಕಾರಿಯೆಂದು ಸೋಮೇಶ್ವರ ಪುರಸಭೆಯ ಕಂದಾಯ ಅಧಿಕಾರಿ, ಸಿಬ್ಬಂದಿಗೆ ಬ್ಲ್ಯಾಕ್‌ಮೇಲ್ : ಆರೋಪಿ ಧನಂಜಯ ರೆಡ್ಡಿ ಸೆರೆ

ಲೋಕಾಯುಕ್ತ ಅಧಿಕಾರಿಯೆಂದು ಸೋಮೇಶ್ವರ ಪುರಸಭೆಯ ಕಂದಾಯ ಅಧಿಕಾರಿ, ಸಿಬ್ಬಂದಿಗೆ ಬ್ಲ್ಯಾಕ್‌ಮೇಲ್ : ಆರೋಪಿ ಧನಂಜಯ ರೆಡ್ಡಿ ಸೆರೆ

Discussion about this post

Recent News

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
36
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
57
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
ಸೆ.19: ಕಾಞಂಗಾಡ್‌ನ  ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

ಸೆ.19: ಕಾಞಂಗಾಡ್‌ನ ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

September 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d