ದೇವನಹಳ್ಳಿ: ನಗರದ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 1 ಕೆ.ಜಿ. 300 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ.
ವಿದೇಶಗಳಿಂದ ಬೆಂಗಳೂರಿಗೆ ಚಿನ್ನ ಸಾಗಣೆ ಮಾಡುತ್ತಿದ್ದ ವ್ಯಕ್ತಿಗಳ ಕುರಿತು ಖಚಿತ ಮಾಹಿತಿಯ ಮೇರೆಗೆ ತಪಾಸಣೆ ನಡೆಸಿದ ಅಧಿಕಾರಿಗಳು ಸುಮಾರು ₹67.59 ಲಕ್ಷ ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಚಿನ್ನವನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು, ಡಿಆರ್ ಅಧಿಕಾರಿಗಳ ಖಚಿತ ಮಾಹಿತಿಯ ಮೇರೆ ಕಾರ್ಯಾಚರಣೆ ನಡೆಸಿದರು.
ದುಬೈನಿಂದ ಬೆಂಗಳೂರಿಗೆ ಬರುತ್ತಿದ್ದ ಎರಡು ಪ್ರಕರಣದಲ್ಲಿ ಅಂತರ ರಾಷ್ಟ್ರೀಯ ಪ್ರಯಾಣಿಕರಿಂದ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.