ಮಂಗಳೂರು : ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಿಂದೂ ಮುಖಂಡ ಅವಿನಾಶ್ ಪುರುಷರಕಟ್ಟೆ ಗಡಿಪಾರಿಗೆ ಉಪ್ಪಿನಂಗಡಿ ಗ್ರಾಮಾಂತರ ಪೊಲೀಸ್ ಠಾಣೆಯಿಂದ ನೋಟಿಸ್ ನೀಡಲಾಗಿದೆ. ಅವಿನಾಶ್ ಪುರುಷರಕಟ್ಟೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಪುರುಷರಕಟ್ಟೆ ನಿವಾಸಿಯಾಗಿದ್ದು, ನಾಳೆ ಪುತ್ತೂರು ಸಹಾಯಕ ಆಯುಕ್ತರ ನ್ಯಾಯಾಲಯಕ್ಕೆ ಹಾಜರಾಗುವಂತೆ ತಿಳಿಸಲಾಗಿದೆ. ಒಂದು ವೇಳೆ ನಾಳೆ ಅವಿನಾಶ್ ಪುರುಷರಕಟ್ಟೆ ವಿಚಾರಣೆಗೆ ಹಾಜರಾಗದಿದ್ದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಿಂದ ಬೀದರ್ಗೆ ಗಡಿಪಾರು ಮಾಡುವುದಾಗಿ ನೋಟಿಸ್ನಲ್ಲಿ ತಿಳಿಸಲಾಗಿದ್ದು, ಪುತ್ತೂರು ಸಹಾಯಕ ಆಯುಕ್ತರ ಕಚೇರಿ ಹಾಜರಾಗುವಂತೆ ತಿಳಿಸಲಾಗಿದೆ.
ಪೊಲೀಸ್ ನೋಟಿಸ್ನಲ್ಲಿರುವುದೇನು? : ಅವಿನಾಶ್ ಎಂ ಪುರುಷರಕಟ್ಟೆ ಮನೆ, ಇಂದಿರನಗರ, ನರಿಮೊಗರು ಅಂಚೆ ಮತ್ತು ಗ್ರಾಮ ಪುತ್ತೂರು ತಾಲೂಕು ಎಂಬಾತನನ್ನು ಕಾನೂನು ಸುವ್ಯಸ್ಥೆ ಕಾಪಾಡುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಿಂದ ಬೀದರ್ ಜಿಲ್ಲಾ ವ್ಯಾಪ್ತಿಯ ಸಾಂತಪುರ ಪೊಲೀಸ್ ಠಾಣಾ ಸರಹದ್ದಿಗೆ ಕರ್ನಾಟಕ ಪೊಲೀಸ್ ಅಧಿನಿಯಮ ಕರ್ನಾಟಕ ಪೊಲೀಸ್ ಕಾಯ್ದೆ- 1963 ಕಲಂ 55(ಎ) ಮತ್ತು (ಬಿ) ರಂತೆ ಗಡಿಪಾರುಗೆ ಆದೇಶ ಮಾಡುವ ಕುರಿತು ಪುತ್ತೂರು ಸಹಾಯಕ ಆಯುಕ್ತರ ಕಚೇರಿಯ ನ್ಯಾಯಾಲಯದಲ್ಲಿ ದಿನಾಂಕ: 24/01/2024 ಪೂರ್ವಾಹ್ನ :11.00 ಘಂಟೆಗೆ ವಿಚಾರಣೆಗೆ ನಿಗದಿಪಡಿಸಲಾಗಿದೆ.
Discover more from Coastal Times Kannada
Subscribe to get the latest posts sent to your email.
Discussion about this post