• About us
  • Contact us
  • Disclaimer
Thursday, May 7, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಜಾತ್ರೆ, ಉತ್ಸವಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ‘ಬಹಿಷ್ಕಾರ’ – ವಿಧಾನಸಭೆಯಲ್ಲಿ ಕೋಲಾಹಲ

Coastal Times by Coastal Times
March 24, 2022
in ರಾಜ್ಯ
ಜಾತ್ರೆ, ಉತ್ಸವಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ‘ಬಹಿಷ್ಕಾರ’ – ವಿಧಾನಸಭೆಯಲ್ಲಿ ಕೋಲಾಹಲ
44
VIEWS
WhatsappTelegramShare on FacebookShare on Twitter

ಬೆಂಗಳೂರು: ಸಾಮರಸ್ಯದ ಕೊಂಡಿ ಬೆಸೆಯುವ ಜಾತ್ರೆ, ಉತ್ಸವಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ‘ಬಹಿಷ್ಕಾರ’ ಹಾಕುವ ರೀತಿಯೊಳಗೆ ಉಡುಪಿಯಲ್ಲಿ ಆರಂಭವಾದ ಹೊಸ ಚಾಳಿ ರಾಜ್ಯದ ಹಲವು ಜಿಲ್ಲೆಗಳಿಗೆ ಬುಧವಾರ ಹರಡಿದೆ. ಎರಡು ಕೋಮುಗಳ ಮಧ್ಯೆ ಕಂದಕ ಸೃಷ್ಟಿಸುವ ಈ ಬೆಳವಣಿಗೆಯು ವಿಧಾನಸಭೆಯಲ್ಲಿ ಕೋಲಾಹಲಕ್ಕೆ ಕಾರಣವಾಯಿತು.

ಉಡುಪಿ ಜಿಲ್ಲೆಯ ಕಾಪು ಮಾರಿಗುಡಿ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ಹೇರಲಾಗಿತ್ತು. ನಂತರ ಉಡುಪಿಯ ವಿವಿಧ ದೇವಸ್ಥಾನಗಳು, ದಕ್ಷಿಣ ಕನ್ನಡ ಜಿಲ್ಲೆಯ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರೆ, ಶಿವಮೊಗ್ಗ ಮಾರಿ ಜಾತ್ರೆ, ಶಿರಸಿ ಮಾರಿಕಾಂಬಾ ಜಾತ್ರೆಯಲ್ಲೂ ಮುಸ್ಲಿಂ ವ್ಯಾಪಾರಿಗಳು ಪಾಲ್ಗೊಳ್ಳಬಾರದು ಎಂಬ ಬ್ಯಾನರ್‌ ಹಾಕಲಾಗಿತ್ತು. ಕೆಲವೆಡೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗಳಿಂದಲೇ ಆದೇಶ ಹೊರಡಿಸಲಾಗಿತ್ತು.

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲ್ಲೂಕಿನ ಕಿಗ್ಗಾದ ಋಷ್ಯಶೃಂಗ ದೇವಸ್ಥಾನ, ಅಡ್ಡಗದ್ದೆ ವನದುರ್ಗಾಪರಮೇಶ್ವರಿ ಜಾತ್ರೆಗಳಲ್ಲೂ ಇಂತಹ ಪ್ರಯತ್ನಗಳು ನಡೆದಿವೆ. ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ, ಮಂಗಳೂರಿನ ಮಂಗಳಾದೇವಿ ದೇವಸ್ಥಾನ, ಕಾಟಿಪಳ್ಳದ ಗಣೇಶ ದೇವಸ್ಥಾನಗಳಲ್ಲೂ ಬ್ಯಾನರ್‌ ಹಾಕಲಾಗಿದೆ. ಬಪ್ಪನಾಡು ಜಾತ್ರೆಯಲ್ಲಿ ವ್ಯಾಪಾರ ನಡೆಸಲು ನೋಂದಣಿ ಮಾಡಿಸಿದ್ದ 85 ಮುಸ್ಲಿಂ ವ್ಯಾಪಾರಿಗಳ ಪೈಕಿ 53 ಮಂದಿ ಬುಧವಾರ ಠೇವಣಿ ವಾಪಸ್‌ ಪಡೆದಿದ್ದಾರೆ.

ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಕಾಂಗ್ರೆಸ್‌ನ ಯು.ಟಿ. ಖಾದರ್‌ ಮತ್ತು ರಿಜ್ವಾನ್‌ ಅರ್ಷದ್‌, ‘ರಾಜ್ಯದಲ್ಲಿ ಕೆಲವರಿಂದ ಸಾಮರಸ್ಯಕ್ಕೆ ಧಕ್ಕೆಯಾಗುತ್ತಿದೆ. ಧರ್ಮದ ಹೆಸರಿನಲ್ಲಿ ದ್ವೇಷ ಬಿತ್ತುವ ಕೆಲಸ ಮಾಡುತ್ತಿದೆ. ಅಂತಹವರನ್ನು ಪತ್ತೆಹಚ್ಚುವ ಪ್ರಯತ್ನ ಪೊಲೀಸರಿಂದ ಆಗುತ್ತಿಲ್ಲ’ ಎಂದು ದೂರಿದರು.

‘ನಿರ್ದಿಷ್ಟ ಧರ್ಮದ ಜನರಿಗೆ ವ್ಯಾಪಾರ ನಡೆಸಲು ಅವಕಾಶ ನೀಡಬಾರದು ಎಂದು ಪೋಸ್ಟರ್‌, ಬ್ಯಾನರ್‌ ಹಾಕಲಾಗುತ್ತಿದೆ. ಯಾರೂ ತಮ್ಮ ಹೆಸರಿನಲ್ಲಿ ಈ ಕೆಲಸ ಮಾಡುತ್ತಿಲ್ಲ. ‘ಬಾಂಧವರು’, ‘ಬಂಧುಗಳು’ ಎಂದು ಹೇಳಿಕೊಂಡು ಇಂತಹ ಕೃತ್ಯ ಎಸಗುವವರು ಹೇಡಿಗಳು’ ಎಂದು ಖಾದರ್‌ ಟೀಕಿಸಿದ್ದು ಸದನದಲ್ಲಿ ಕೋಲಾಹಲಕ್ಕೆ ಕಾರಣವಾಯಿತು.

ಖಾದರ್‌ ಹೇಳಿಕೆಯನ್ನು ಬಿಜೆಪಿಯ ಕೆ.ಜಿ. ಬೋಪಯ್ಯ ಆಕ್ಷೇಪಿಸಿದರು. ಬಿಜೆಪಿಯ ಕೆ. ರಘುಪತಿ ಭಟ್‌, ಜಿ. ಸೋಮಶೇಖರ ರೆಡ್ಡಿ, ಸಂಜೀವ ಮಠಂದೂರು, ಹರೀಶ್ ಪೂಂಜ, ಎಂ.ಪಿ. ರೇಣುಕಾಚಾರ್ಯ ಸೇರಿದಂತೆ ಹಲವರು ಎದ್ದುನಿಂತು ಏರಿದ ದನಿಯಲ್ಲಿ ಖಾದರ್‌ ವಿರುದ್ಧ ವಾಗ್ದಾಳಿಗೆ ಇಳಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಕೋವಿಡ್‌: ಮಾರ್ಚ್ 31ರಿಂದ ನಿರ್ಬಂಧಗಳು ತೆರವು, ಮಾಸ್ಕ್ ಧಾರಣೆ ಹೊರತು ಪಡಿಸಿ ಉಳಿದೆಲ್ಲಾ ನಿಯಮಗಳಿಗೆ ಬ್ರೇಕ್!

Next Post

ರಿಯಲ್ ಸ್ಟಾರ್ ನಟನ ಹೊಸ ಅವತಾರಕ್ಕೆ ಅಭಿಮಾನಿಗಳು ಕ್ಲೀನ್ ಬೋಲ್ಡ್ !

Related Posts

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ
ರಾಜ್ಯ

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

April 30, 2026
22
ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,
ರಾಜ್ಯ

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,

February 14, 2026
72
Next Post
ರಿಯಲ್ ಸ್ಟಾರ್ ನಟನ ಹೊಸ ಅವತಾರಕ್ಕೆ ಅಭಿಮಾನಿಗಳು ಕ್ಲೀನ್ ಬೋಲ್ಡ್ !

ರಿಯಲ್ ಸ್ಟಾರ್ ನಟನ ಹೊಸ ಅವತಾರಕ್ಕೆ ಅಭಿಮಾನಿಗಳು ಕ್ಲೀನ್ ಬೋಲ್ಡ್ !

Discussion about this post

Recent News

ಪಶ್ಚಿಮ ಬಂಗಾಳ: ಮುಖ್ಯಮಂತ್ರಿ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಆಪ್ತ ಸಹಾಯಕ ಚಂದ್ರನಾಥ್ ರಥ್ ಹತ್ಯೆ

ಪಶ್ಚಿಮ ಬಂಗಾಳ: ಮುಖ್ಯಮಂತ್ರಿ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಆಪ್ತ ಸಹಾಯಕ ಚಂದ್ರನಾಥ್ ರಥ್ ಹತ್ಯೆ

May 7, 2026
40
ಖ್ಯಾತ ಸಾಹಿತಿ ವಲ್ಲಿ ವಗ್ಗ ಅವರ ನೂತನ ಕೃತಿ ‘ವಿಂಚ್ಣಾರ್ ಕಾಣಿಯೊ’ ಬಿಡುಗಡೆ

ಖ್ಯಾತ ಸಾಹಿತಿ ವಲ್ಲಿ ವಗ್ಗ ಅವರ ನೂತನ ಕೃತಿ ‘ವಿಂಚ್ಣಾರ್ ಕಾಣಿಯೊ’ ಬಿಡುಗಡೆ

May 6, 2026
3
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಪಶ್ಚಿಮ ಬಂಗಾಳ: ಮುಖ್ಯಮಂತ್ರಿ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಆಪ್ತ ಸಹಾಯಕ ಚಂದ್ರನಾಥ್ ರಥ್ ಹತ್ಯೆ

ಪಶ್ಚಿಮ ಬಂಗಾಳ: ಮುಖ್ಯಮಂತ್ರಿ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಆಪ್ತ ಸಹಾಯಕ ಚಂದ್ರನಾಥ್ ರಥ್ ಹತ್ಯೆ

May 7, 2026
ಖ್ಯಾತ ಸಾಹಿತಿ ವಲ್ಲಿ ವಗ್ಗ ಅವರ ನೂತನ ಕೃತಿ ‘ವಿಂಚ್ಣಾರ್ ಕಾಣಿಯೊ’ ಬಿಡುಗಡೆ

ಖ್ಯಾತ ಸಾಹಿತಿ ವಲ್ಲಿ ವಗ್ಗ ಅವರ ನೂತನ ಕೃತಿ ‘ವಿಂಚ್ಣಾರ್ ಕಾಣಿಯೊ’ ಬಿಡುಗಡೆ

May 6, 2026
ಸಚಿವ ಜಮೀರ್ ಮನೆಯಿಂದ 1 ಕೆ.ಜಿ 200 ಗ್ರಾಂ ಚಿನ್ನಾಭರಣ ಕಳ್ಳತನ; ಸಂಬಂಧಿ ಸೇರಿ ಇಬ್ಬರು ಸೆರೆ

ಸಚಿವ ಜಮೀರ್ ಮನೆಯಿಂದ 1 ಕೆ.ಜಿ 200 ಗ್ರಾಂ ಚಿನ್ನಾಭರಣ ಕಳ್ಳತನ; ಸಂಬಂಧಿ ಸೇರಿ ಇಬ್ಬರು ಸೆರೆ

May 6, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d