ವಿಜಯಪುರ: ಕ್ಷುಲ್ಲಕ ಕಾರಣಕ್ಕೆ ಅಪ್ರಾಪ್ತ ಬಾಲಕನೊಬ್ಬನನ್ನು ಬೆತ್ತಲೆ ಗೊಳಿಸಿ, ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿ ಥಳಿಸಿದ ಅಮಾನವೀಯ ಘಟನೆ ಬಸವಜನ್ಮಭೂಮಿ ಪರಿಸರದಲ್ಲಿ ಜರುಗಿದೆ. ಈ ಅಮಾನವೀಯ ಘಟನೆಯನ್ನು ಸ್ಥಳೀಯರು ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದು, ಇದೀಗ ವೈರಲ್ ಆಗಿದೆ.
ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ವಡವಡಗಿ ಗ್ರಾಮದಲ್ಲಿ ಈ ಅಮಾನವೀಯ ಘಟನೆ ಜರುಗಿದೆ. ಅಮಾನವೀಯ ಶಿಕ್ಷೆಗೆ ಗುರಿಯಾದ ಬಾಲಕ ಗ್ರಾಮಸ್ಥರಲ್ಲಿ ಕೆಲವರನ್ನು ನಿಂದಿಸುತ್ತಿದ್ದ ಎನ್ನಲಾಗಿದೆ. ಎರಡು ದಿನಗಳ ಹಿಂದೆಯೂ ಈ ಬಾಲಕ ಗ್ರಾಮದ ಕೆಲವರನ್ನು ಅಶ್ಲೀಲವಾಗಿ ನಿಂದಿಸಿದ್ದ ಎನ್ನಲಾಗಿದೆ.
ಇದರಿಂದ ಕುಪಿತಗೊಂಡ ಗ್ರಾಮದ ಸ್ಥಳೀಯ ವ್ಯಕ್ತಿಯೊಬ್ಬ ಬಾಲಕನನ್ನು ಬೆತ್ತಲೆಗೊಳಿಸಿ, ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿ ಥಳಿಸಿ ವಿಕೃತಿ ಮೆರೆದಿದ್ದಾನೆ. ಅವನ ಮರ್ಮಾಂಗಕ್ಕೆ ಕಟಿಂಗ್ ಪ್ಲೇಯರ್ ನಿಂದ ಕತ್ತರಿಸುವ ಬೆದರಿಕೆ ಹಾಕಲಾಗಿದೆ. ಇಷ್ಟಕ್ಕೆ ಸುಮ್ಮನಾಗದೇ ಬಾಲಕನ ಮೈಮೇಲೆ ಕಪ್ಪು ಬಣ್ಣ ಎರಚಿ ವಿಕೃತಿ ಮೆರೆಯುವ ಮೂಲಕ ಅಮಾನವೀಯ ಕೃತ್ಯ ಎಸಗಿದ್ದಾನೆ.
Discover more from Coastal Times Kannada
Subscribe to get the latest posts sent to your email.
Discussion about this post