• About us
  • Contact us
  • Disclaimer
Sunday, April 19, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ನಗರದ ಕಸ‌ವಿಲೇವಾರಿಗೆ ವಾರ್ ರೂಂ – ಶಾಸಕ ವೇದವ್ಯಾಸ್ ಕಾಮತ್

Coastal Times by Coastal Times
March 24, 2023
in ಕರಾವಳಿ
ಮಂಗಳೂರು: ನಗರದ ಕಸ‌ವಿಲೇವಾರಿಗೆ ವಾರ್ ರೂಂ – ಶಾಸಕ ವೇದವ್ಯಾಸ್ ಕಾಮತ್
32
VIEWS
WhatsappTelegramShare on FacebookShare on Twitter

ಮಂಗಳೂರು, ಮಾ 24 : ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮನೆ ಮನಗಳಿಂದ ಕಸ‌ ಸಂಗ್ರಹಿಸುವುದು ಹಾಗೂ ರಸ್ತೆ ಬದಿಗಳಲ್ಲಿ ಕಸದ ರಾಶಿಗಳು ಬಿದ್ದಿರುವುದನ್ನು ಬಗೆಹರಿಸುವ ದೃಷ್ಟಿಯಿಂದ ಶಾಸಕ ವೇದವ್ಯಾಸ್ ಕಾಮತ್ ಅವರು ತಮ್ಮ ಕಚೇರಿಯಲ್ಲಿ ವಾರ್ ರೂಂ ಪ್ರಾರಂಭಿಸಿದ್ದಾರೆ. ಸಾರ್ವಜನಿಕರು ತಮ್ಮ ಮನೆ, ಫ್ಲಾಟ್ ಅಥವ ರಸ್ತೆ ಬದಿಯಲ್ಲಿ ಕಸದ ರಾಶಿಗಳಿದ್ದರೆ ಶಾಸಕರ ವಾರ್ ರೂಂ ದೂರವಾಣಿ ಸಂಖ್ಯೆ :8904078297, 8197270222 , ಕರೆ ಮಾಡಿದರೆ ಕಸ ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ವೇದವ್ಯಾಸ್ ಕಾಮತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಳೆದ ಹಲವು ದಿನಗಳಿಂದ ಕಸ ಸಂಗ್ರಹಣೆಯ ಕಾರ್ಮಿಕರು ಮುಷ್ಕರ ಹೂಡಿರುವ ಕಾರಣ ಅವರ ಬೇಡಿಕೆಗಳನ್ನು ಈಡೇರಿಸುವ ದೃಷ್ಟಿಯಿಂದ ಶಾಸಕ ಕಾಮತ್ ಅವರು ಮಾತುಕತೆಯ ಮೂಲಕ ಮನವೊಲಿಸುವ ಪ್ರಯತ್ನ ಮಾಡಿದ್ದಾರೆ. ಹಲವು ಪ್ರಯತ್ನ ಮಾಡಿದರೂ ಅವರಿಂದ ಸಕಾರಾತ್ಮಕ ಸ್ಪಂದನೆ ದೊರೆತಿಲ್ಲ. ಇಡೀ ರಾಜ್ಯದಾದ್ಯಂತ ಕಾರ್ಮಿಕರು ಪ್ರತಿಭಟನೆ ಕೈಗೊಂಡಿರುವ ಕಾರಣ ರಾಜ್ಯದಲ್ಲಿ ಮುಷ್ಕರ ಕೈಬಿಟ್ಟ ನಂತರವೇ ಕೆಲಸಕ್ಕೆ ಹಾಜರಾತ್ತೇವೆ ಎಂದು ಕಾರ್ಮಿಕರು ತಿಳಿಸಿದ್ದಾರೆ. ಹಾಗಾಗಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಾರಂಭದಲ್ಲಿ ಕಸ ಸಾಗಾಟದ ವಾಹನ ಚಾಲಕರನ್ನು ತಾತ್ಕಾಲಿಕ ಆಧಾರದಲ್ಲಿ ನೇಮಿಸಿ ಕೆಲಸ‌ ಪ್ರಾರಂಭಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ತಕ್ಷಣವೇ ಸಾಕಷ್ಟು ವಾಹನ ಚಾಲಕರನ್ನು ಜೋಡಿಸಿಕೊಳ್ಳುವುದು ಕಷ್ಟ ಸಾಧ್ಯವಾಗಿತ್ತು. ಆದರೂ ಸರಿಸುಮಾರು 75 ರಿಂದ 80 ಚಾಲಕರನ್ನು ಜೋಡಿಸುವ ಕೆಲಸ ಮಾಡಲಾಗಿದೆ. ಇನ್ನೂ ಹೆಚ್ಚುವರಿ 30 ರಿಂದ 40 ವಾಹನ ಚಾಲಕರ ಅಗತ್ಯವಿದ್ದು, ಕೆಲಸ ಮಾಡಲು ಇಚ್ಛೆಯುಳ್ಳ ವಾಹನ ಚಾಲಕರು ನನ್ನ ಕಚೇರಿಯನ್ನು ಸಂಪರ್ಕಿಸುವಂತೆ ಶಾಸಕ ಕಾಮತ್ ಹೇಳಿದ್ದಾರೆ. ಈಗ ಕೆಲಸಕ್ಕೆ ಜೋಡಿಸಿಕೊಂಡಿರುವ ಕಾರ್ಮಿಕರು ಕೂಲಿ ಕೆಲಸ ಕಾರ್ಮಿಕರಾಗಿರುವ ಕಾರಣ ವಾರ್ಡ್ ಗಳ ಪರಿಚಯವಿಲ್ಲ. ಹಾಗಾಗಿ ಕೆಲವೆಡೆಗಳಲ್ಲಿ ಕಸ ಸಂಗ್ರಹಣೆಯಲ್ಲಿ ತೊಡಕಾಗಿದೆ. ಅದೆಲ್ಲವನ್ನೂ ನಿವಾರಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ವಾರ್ಡ್ ಗಳ ಸಂಖ್ಯೆ, ಸೂಪರ್ ವೈಸರ್, ಡ್ರೈವರ್ ಗಳು ಹಾಗೂ ಸ್ಥಳೀಯ ಅಧಿಕಾರಿಗಳ ಮೊಬೈಲ್ ಸಂಖ್ಯೆಯನ್ನು ನೀಡಲಾಗಿದೆ. ಕಸ ವಿಲೇವಾರಿಯ ಸಮಸ್ಯೆ ತಲೆದೂರಿದಲ್ಲಿ ನಮ್ಮ ವಾರ್ ರೂಂ ಸಂಪರ್ಕಿಸಿದರೆ ಅದನ್ನು ಸರಿಪಡಿಸುವ ಕೆಲಸ ಮಾಡಲಾಗುವುದು. ಜನತೆಗೆ ಆಗಿರುವ ಸಮಸ್ಯೆಗೆ ವಿಷಾದ ವ್ಯಕ್ತಪಡಿಸುತ್ತಾ, ಇನ್ನು 3-4 ದಿನಗಳಲ್ಲಿ ಸಮಸ್ಯೆ ಬಗೆಹರಿಸುವ ಮೂಲಕ ತ್ಯಾಜ್ಯ ವಿಲೇವಾರಿಯ ಸಮಸ್ಯೆ ಸರಿಪಡಿಸಲಾಗುವುದು ಎಂದು ಹೇಳಿದರು. ಹಾಗಾಗಿ ಯಾವುದೇ ರೀತಿಯ ಸಮಸ್ಯೆಗಳಾದರೆ ವಾರ್ ರೂಂ ಸಂಪರ್ಕಿಸಿ. ಜನತೆಗೆ ಆಗಿರುವ ಸಮಸ್ಯೆಗೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಶಾಸಕ ಕಾಮತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಾರ್ ರೂಂ ಸಂಖ್ಯೆ :8904078297, 8197270222 , ವಾರ್ ರೂಂ ಸಮಯ :ಬೆಳಗ್ಗೆ 09:00 ರಿಂದ ಸಂಜೆ 05:00

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ತಾಯಿಯ ಕಾಲಿನಿಂದ ಹಾವಿನ ವಿಷ ಹೀರಿದ ಮಗಳು ಘಟನೆಗೆ ದೊಡ್ಡ ತಿರುವು; ಕಾಲಿಗೆ ಕಚ್ಚಿದ್ದು ನಾಗರಹಾವು ಅಲ್ಲ!

Next Post

ರಾಹುಲ್ ಗಾಂಧಿ ಸಂಸದ ಸ್ಥಾನ ಅನರ್ಹ-ಮಂಗಳೂರಿನಲ್ಲಿ ಕಾಂಗ್ರೆಸ್ ನಿಂದ ಪ್ರತಿಭಟನೆ

Related Posts

ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.
ಕರಾವಳಿ

ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.

April 16, 2026
16
ಮಂಗಳೂರು :ಮಹಾಕಾಳಿಪಡ್ಪು ಬಳಿ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದ 15 ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತ್ಯು
ಕರಾವಳಿ

ಮಂಗಳೂರು :ಮಹಾಕಾಳಿಪಡ್ಪು ಬಳಿ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದ 15 ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತ್ಯು

April 15, 2026
75
Next Post
ರಾಹುಲ್ ಗಾಂಧಿ ಸಂಸದ ಸ್ಥಾನ ಅನರ್ಹ-ಮಂಗಳೂರಿನಲ್ಲಿ ಕಾಂಗ್ರೆಸ್ ನಿಂದ ಪ್ರತಿಭಟನೆ

ರಾಹುಲ್ ಗಾಂಧಿ ಸಂಸದ ಸ್ಥಾನ ಅನರ್ಹ-ಮಂಗಳೂರಿನಲ್ಲಿ ಕಾಂಗ್ರೆಸ್ ನಿಂದ ಪ್ರತಿಭಟನೆ

Discussion about this post

Recent News

ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!

ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!

April 18, 2026
17
ಕೊಣಾಜೆ : ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲಕಿ ನಾಪತ್ತೆ , ಲುಕ್ ಔಟ್ ನೋಟಿಸ್ ಜಾರಿ

ಕೊಣಾಜೆ : ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲಕಿ ನಾಪತ್ತೆ , ಲುಕ್ ಔಟ್ ನೋಟಿಸ್ ಜಾರಿ

April 18, 2026
64
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!

ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!

April 18, 2026
ಕೊಣಾಜೆ : ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲಕಿ ನಾಪತ್ತೆ , ಲುಕ್ ಔಟ್ ನೋಟಿಸ್ ಜಾರಿ

ಕೊಣಾಜೆ : ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲಕಿ ನಾಪತ್ತೆ , ಲುಕ್ ಔಟ್ ನೋಟಿಸ್ ಜಾರಿ

April 18, 2026
ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.

ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.

April 16, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d