ಬೆಳ್ತಂಗಡಿ: ತುಮಕೂರಿನಲ್ಲಿ ಭೀಕರ ಹತ್ಯೆಗೊಳಗಾದ ಬೆಳ್ತಂಗಡಿ ತಾಲೂಕಿನ ಇಸಾಕ್, ಶಾಹುಲ್ ಹಮೀದ್ ಹಾಗೂ ಇಮ್ತಿಯಾಝ್ ಸಿದ್ದೀಕ್ ಅವರ ನಿವಾಸಕ್ಕೆ ಮಾಜಿ ಶಾಸಕ ಮೊಹಿಯುದ್ದೀನ್ ಬಾವ ಅವರು ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ತಿಳಿಸಿದರು.
ಬಳಿಕ ದೂರವಾಣಿ ಕರೆ ಮೂಲಕ ಮುಖ್ಯಮಂತ್ರಿ ಜೋತೆಗೆ ಮಾತನಾಡಿದ ಅವರು ಜಿಲ್ಲೆಯಲ್ಲಿ ಮೋಸದ ಜಾಲಕ್ಕೆ ಜನರು ಬಲಿಪಶು ಮಾಡಲಾಗುತ್ತಿದೆ ಆರೋಪಿಗಳನ್ನು ಶೀಘ್ರವೇ ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕು, ಕುಟುಂಬಕ್ಕೆ ಆಸರೆಯಾಗಿದ್ದವರನ್ನು ಕಳೆದುಕೊಂಡು ತೀವ್ರ ಆಘಾತಕ್ಕೊಳಗಾಗಿರುವ ಮೃತರ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರವನ್ನು ಒದಗಿಸುವಂತೆ ಮುಖ್ಯಮಂತ್ರಿ ವಿಶೇಷ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
Discussion about this post