• About us
  • Contact us
  • Disclaimer
Friday, June 26, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಸಮುದ್ರದಲ್ಲಿ ಜಲ ಸಮಾಧಿಯಾದ ವಿದೇಶಿ ಹಡಗು ಎಂವಿ ಪ್ರಿನ್ಸಸ್ ಮಿರಾಲ್

Coastal Times by Coastal Times
June 24, 2022
in ಕರಾವಳಿ
ಮಂಗಳೂರು: ಸಮುದ್ರದಲ್ಲಿ ಜಲ ಸಮಾಧಿಯಾದ ವಿದೇಶಿ ಹಡಗು ಎಂವಿ ಪ್ರಿನ್ಸಸ್ ಮಿರಾಲ್
127
VIEWS
WhatsappTelegramShare on FacebookShare on Twitter

ಮಂಗಳೂರು, ಜೂ23: ಅರಬ್ಬಿ ಸಮುದ್ರದಲ್ಲಿ ಅವಘಡಕ್ಕೆ ಈಡಾಗಿದ್ದ ಸಿರಿಯಾದ ಪ್ರಿನ್ಸೆಸ್ ಮಿರಾಲ್ ಸರಕು ಸಾಗಾಟದ ಹಡಗು ಜಲ ಸಮಾಧಿಯಾಗಿದೆ. ಸಿರಿಯಾದ 15 ಸಿಬ್ಬಂದಿ ಪ್ರಯಾಣಿಸುತ್ತಿದ್ದ ವಿದೇಶಿ ಹಡಗು ಎಂ ವಿ ಪ್ರಿನ್ಸಸ್ ಮಿರಾಲ್ ಮಂಗಳೂರಿನ ಬಟ್ಟಪಾಡಿ ಸಮೀಪದ ಸಮುದ್ರದಲ್ಲಿ ಮುಳುಗಡೆಯಾಗಿದೆ. ಎರಡು ದಿನಗಳ ಹಿಂದೆ ಈ ವಿದೇಶಿ ಹಡಗು ಮಂಗಳೂರಿನ ಸಮುದ್ರ ತೀರದಲ್ಲಿ ಪ್ರಯಾಣ ಬೆಳೆಸುತ್ತಿದ್ದ ವೇಳೆ ಸಣ್ಣ ರಂಧ್ರದ ಮೂಲಕ ನೀರು ಒಳನುಗ್ಗಿ ಅಪಾಯಕ್ಕೆ ಸಿಲುಕಿತ್ತು. ಇದರಲ್ಲಿದ್ದ 15 ಸಿರಿಯಾ ದೇಶದ ಪ್ರಜೆಗಳನ್ನು ಮಂಗಳೂರಿನ ಕೋಸ್ಟ್ ಗಾರ್ಡ್ ಸಿಬ್ಬಂದಿಗಳು ರಕ್ಷಿಸಿದ್ದರು. 8000 ಟನ್ ಉಕ್ಕಿನ ಕಾಯಿಲ್ ಗಳನ್ನು ತುಂಬಿಸಿಕೊಂಡು ಚೀನಾದ ಟಿಯಾಂಜಿನ್ ನಿಂದ ಮಲೇಷ್ಯಾದ ಲೆಬನಾನ್ ಗೆ ಸಾಗಿಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿತ್ತು. ಈ ಹಡಗು ಬಟ್ಟಪ್ಪಾಡಿ ಸಮೀಪದ ಸಮುದ್ರದಲ್ಲಿ ಮುಳುಗಡೆಯಾಗಿದೆ.

ಹಡಗು ಮುಳುಗಡೆಗೊಂಡ ಸಂಬಂಧ ದಕ್ಷಿಣ ಕನ್ನಡ ಜಿಲ್ಲಾಡಳಿತವು ಕೋಸ್ಟ್ ಗಾರ್ಡ್ ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳೊಂದಿಗೆ ಇಂದು ಸಭೆ ನಡೆಸಿದ್ದಾರೆ. ಸಭೆಯ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಎಂ ವಿ ಪ್ರಿನ್ಸಸ್ ಮಿರಾಲ್ ಹಡಗಿನಿಂದ ಸ್ಟೀಲ್ ಕಾಯಿಲ್ ಅಗದಂತೆ ತಡೆಗಟ್ಟಲು ಹಾಗೂ ಹಡಗಿನಲ್ಲಿರುವ ಫರ್ನಸ್ ಅಯಿಲ್ ಮತ್ತು ಇಂಜಿನ್ ಆಯಿಲ್ ಅನ್ನು ಹೊರತೆಗೆಯಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕೋಸ್ಟ್ ಗಾರ್ಡ್ ಡಿಐಜಿ ಅವರಿಗೆ ತಿಳಿಸಲಾಗಿದೆ. ಈ ಹಡಗಿನ ಸುತ್ತಲೂ ಮೀನುಗಾರಿಕೆ ನಡೆಸದ ಹಾಗೆ ನೋಡಿಕೊಳ್ಳುವಂತೆ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ಸೂಚಿಸಿದ್ದಾರೆ.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯವರಿಗೆ ಕಾಲ ಕಾಲಕ್ಕೆ ಸಮುದ್ರದ ನೀರಿನ ಗುಣಮಾಪನವನ್ನು ಮಾಡಲು ನಿರ್ದೇಶಿಸಲಾಗಿದೆ. ಇದರ ಕಾರ್ಯಾಚರಣೆಗೆ ಎಂ.ಆರ್.ಪಿ.ಎಲ್ ಹಾಗೂ ಎನ್.ಎಂ.ಪಿ.ಟಿ ಸಂಸ್ಥೆಯವರು ತಮ್ಮಲ್ಲಿರುವ ರಕ್ಷಣಾ ಸಾಮಾಗ್ರಿಗಳನ್ನು ಒದಗಿಸುವಂತೆ ಸೂಚಿಸಲಾಗಿದೆ .ಇದಕ್ಕೆ ಸಂಬಂಧಿಸಿದ ಇತರ ಎಲ್ಲಾ ಇಲಾಖೆಯವರಿಗೆ ಸ್ಟೀಲ್ ಕಾಯಿಲ್ ಸಮುದ್ರದ ದಡಕ್ಕೆ ಬಂದಲ್ಲಿ ತೆಗೆದುಕೊಳ್ಳಬೇಕಾದ ಎಲ್ಲಾ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸನ್ನದ್ಧರಾಗಿರಬೇಕೆಂದು ನಿರ್ದೇಶನ ನೀಡಲಾಗಿದೆ. ಯಾವುದೇ ರೀತಿಯಲ್ಲಿ ಸ್ಟೀಲ್ ಕಾಯಿಲ್ ನೀರಿಗೆ ಸೇರಿದ ಸಂದರ್ಭದಲ್ಲಿ ನದಿಗೆ ಸೇರದಂತೆ ಸೂಕ್ತ ವ್ಯವಸ್ಥೆ ಮಾಡುವಂತೆ ಕೋಸ್ಟ್ ಗಾರ್ಡ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಐ.ಜಿ ಕೋಸ್ಟ್ ಗಾರ್ಡ್ ರವರನ್ನು ಚೀಫ್ ಇನ್ಸಿಡೆಂಟ್ ಕಮಾಂಡರ್ ಆಗಿ ನೇಮಿಸಲಾಗಿದೆ ಅಂತಾ ಹೇಳಿದ್ದಾರೆ.

ಕೋಟ್ಯಂತರ ರೂಪಾಯಿ ಮೌಲ್ಯದ ಸ್ಟೀಲ್ ಕಾಯಿಲ್ ಸಮುದ್ರ ಪಾಲು ; ಹಡಗಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಸ್ಟೀಲ್ ಕಾಯಿಲ್ ಈಗ ಸಮುದ್ರ ಪಾಲಾಗಿದೆ. ಇನ್ನು ಹಡಗಿನಿಂದ ರಕ್ಷಣೆಗೆ ಒಳಗಾದ 15 ಮಂದಿ ಸಿರಿಯಾ ಪ್ರಜೆಗಳನ್ನು ಪಣಂಬೂರು ಪೊಲೀಸ್ ಠಾಣೆಗೆ ಹಾಜರು ಪಡಿಸಲಾಗಿದೆ. ಆ ಬಳಿಕ ಅವರನ್ನು ಜಿಲ್ಲಾಡಳಿತಕ್ಕೆ ಹಸ್ತಾಂತರ ಮಾಡಲಾಗಿದ್ದು ಅವರನ್ನು ಬೆಂಗಳೂರಿನಲ್ಲಿರುವ ವಿದೇಶಿ ಪ್ರಜೆಗಳ ತಾತ್ಕಾಲಿಕ ಆಶ್ರಿತ ಕೇಂದ್ರಕ್ಕೆ ಕಳುಹಿಸಲಾಗುವುದು. ದೆಹಲಿಯ ವಿದೇಶಾಂಗ ವಿಭಾಗದ ಒಪ್ಪಿಗೆ ಬಳಿಕ ಸಿರಿಯಾ ದೇಶಕ್ಕೆ ಕಳುಹಿಸಲಾಗುವುದು ಅಂತ ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: 3 ಮಕ್ಕಳನ್ನು ಬಾವಿಗೆ ತಳ್ಳಿ ಕೊಂದು ಪತ್ನಿಯೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

Next Post

ಮಂಗಳೂರು: ಎಲೆಕ್ಟ್ರಿಕ್ ಸ್ಕೂಟರ್‌ನ ‘ಒಕಿನಾವ’ ಶೋರೂಂನಲ್ಲಿ ಅಗ್ನಿ ಅವಘಡ

Related Posts

ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್
ಕರಾವಳಿ

ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

June 26, 2026
54
ಜೂ.28: ಎಂಸಿಸಿ ಬ್ಯಾಂಕಿನ 22 ನೇ ಶಾಖೆ ದೇರಳಕಟ್ಟೆ ಮತ್ತು ಆಗಸ್ಟ್ 2 ರಂದು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ
ಕರಾವಳಿ

ಜೂ.28: ಎಂಸಿಸಿ ಬ್ಯಾಂಕಿನ 22 ನೇ ಶಾಖೆ ದೇರಳಕಟ್ಟೆ ಮತ್ತು ಆಗಸ್ಟ್ 2 ರಂದು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

June 25, 2026
32
Next Post
ಮಂಗಳೂರು: ಎಲೆಕ್ಟ್ರಿಕ್ ಸ್ಕೂಟರ್‌ನ ‘ಒಕಿನಾವ’ ಶೋರೂಂನಲ್ಲಿ ಅಗ್ನಿ ಅವಘಡ

ಮಂಗಳೂರು: ಎಲೆಕ್ಟ್ರಿಕ್ ಸ್ಕೂಟರ್‌ನ 'ಒಕಿನಾವ' ಶೋರೂಂನಲ್ಲಿ ಅಗ್ನಿ ಅವಘಡ

Discussion about this post

Recent News

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

June 26, 2026
1
ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

June 26, 2026
54
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

June 26, 2026
ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

June 26, 2026
ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!

ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!

June 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d