ಮಂಗಳೂರು, ಜು.24: ಮೊಬೈಲ್ ಫೋನ್ ನೋಡುತ್ತಲೇ ಬಸ್ ಚಲಾಯಿಸಿದ ಖಾಸಗಿ ಸಿಟಿ ಬಸ್ಸೊಂದರ ಚಾಲಕನ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ.
ನಗರದ ಸ್ಟೇಟ್ಬ್ಯಾಂಕ್ನಿಂದ ತಲಪಾಡಿ ನಡುವೆ ಓಡಾಟ ನಡೆಸುವ ರೂಟ್ ನಂಬ್ರ 42ರ ಖಾಸಗಿ ಸಿಟಿ ಬಸ್ಸೊಂದರ ಚಾಲಕನೊಬ್ಬ ಒಂದು ಕೈಯಲ್ಲಿ ಮೊಬೈಲ್ ಹಿಡಿದುಕೊಂಡು ಅದನ್ನು ನೋಡುತ್ತಲೇ ಬಸ್ ಚಲಾಯಿಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಬಸ್ಸನ್ನು ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಜಪ್ತಿ ಮಾಡಿದ್ದು, ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ, ಬಸ್ ಚಾಲಕನ ಚಾಲನಾ ಪರವಾನಗಿಯನ್ನು ರದ್ದುಪಡಿಸುವಂತೆ ಆರ್ಟಿಓ ಅಧಿಕಾರಿಗಳಿಗೆ ಶಿಫಾರಸು ಮಾಡಿದ್ದಾರೆ. ಬಸ್ ಚಾಲಕ ತನ್ನ ಆಂಡ್ರಾಯ್ಡ್ ಮೊಬೈಲನ್ನು ನೋಡುತ್ತ ಸ್ಟೇರಿಂಗ್ ತಿರುಗಿಸುತ್ತಾ, ಬಸ್ಸಿನಲ್ಲಿದ್ದ ಪ್ರಯಾಣಿಕರ ಜೀವದ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು.
Discover more from Coastal Times Kannada
Subscribe to get the latest posts sent to your email.
Discussion about this post