ಪುತ್ತೂರು, ಆಗಸ್ಟ್ 24: ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ಯುವತಿಯ ಕತ್ತು ಸೀಳಿ ಪರಾರಿಯಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ದ್ವಾರದ ಎದುರಲ್ಲಿ ಮತ್ತು ಮಹಿಳಾ ಪೊಲೀಸ್ ಠಾಣೆಯ ಪಕ್ಕದಲ್ಲೇ ಕೃತ್ಯ ನಡೆದಿದೆ. ಇರಿತಕ್ಕೀಡಾದ ಯುವತಿಯನ್ನು ವಿಟ್ಲ ಮೂಲದ ಗೌರಿ (25) ಎಂದು ಗುರುತಿಸಲಾಗಿದೆ. ಮೂರರಿಂದ ನಾಲ್ಕು ಬಾರಿ ಯುವತಿಯ ಕುತ್ತಿಗೆಯ ಭಾಗಕ್ಕೆ ಇರಿಯಲಾಗಿದ್ದು ರಸ್ತೆಗೆ ಬಿದ್ದ ಯುವತಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇರಿತಕ್ಕೊಳಗಾದ ಯುವತಿ ಸ್ಥಿತಿ ಚಿಂತಾಜನಕ ಎನ್ನಲಾಗುತ್ತಿದೆ.
ಆರೋಪಿಯೂ ಮಣಿನಾಲ್ಕೂರು ಗ್ರಾಮದ ನೈಬೇಳು ನಿವಾಸಿ ಪದ್ಮರಾಜ್ ಎಂದು ತಿಳಿದು ಬಂದಿದೆ. ಈತ ಜೆಸಿಬಿ ಆಪರೇಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ.
ಘಟನೆಯ ವಿವರ: ವ್ಯಕ್ತಿಯೊಬ್ಬ ಯುವತಿಗೆ ಚೂರಿಯಿಂದ ಇರಿದು ಪರಾರಿಯಾದ ಘಟನೆ ಇಲ್ಲಿನ ಮಹಿಳಾ ಪೊಲೀಸ್ ಸ್ಟೇಷನ್ ಬಳಿ ಆ.24ರ ಗುರುವಾರ ಮಧ್ಯಾಹ್ನ ಸಂಭವಿಸಿತ್ತು. ಗಂಭೀರ ಗಾಯಗೊಂಡ ಯುವತಿಯನ್ನು ವಿಟ್ಲದ ಅಳಿಕಯ ಗೌರಿ (20) ಎಂದು ತಿಳಿದು ಬಂದಿದೆ. ಪುತ್ತೂರು ಪೇಟೆಗೆ ಬಂದಿದ್ದ ಯುವತಿ ಪುತ್ತೂರಿನ ಮಹಿಳಾ ಪೊಲೀಸ್ ಸ್ಟೇಷನ್ ಬಳಿ ನಡೆದುಕೊಂಡು ಹೋಗುತ್ತಿದ್ದಾಗ, ಏಕಾಏಕಿ ಬಂದ ಪದ್ಮರಾಜ್ ಚೂರಿಯಿಂದ ಇರಿದು ಪರಾರಿಯಾಗಿದ್ದ. ಜೀವನ್ಮರಣ ಸ್ಥಿತಿಯಲ್ಲಿರುವ ಯುವತಿಯನ್ನು ಪೊಲೀಸರು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕೆರದೊಯ್ಯುವಾಗ ದಾರಿ ಮಧ್ಯೆ ಕೊನೆಯುಸಿರೆಳೆದಿದ್ಧಾರೆನ್ನಲಾಗಿದೆ, ಯುವತಿ ಸರಕಾರಿ ಬಸ್ ನಿಲ್ದಾಣದ ಬಳಿಯ ಅಂಗಡಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು.
Discussion about this post