• About us
  • Contact us
  • Disclaimer
Wednesday, October 14, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪುತ್ತೂರು: ಅಕ್ರಮ ಜಾನುವಾರು ಸಾಗಾಟ ಪತ್ತೆ, ಪಿಕ್‌ಅಪ್ ವಾಹನ ಚಾಲಕನ ಬಂಧನ

Coastal Times by Coastal Times
August 24, 2026
in ಕ್ರೈಮ್ ನ್ಯೂಸ್
ಪುತ್ತೂರು: ಅಕ್ರಮ ಜಾನುವಾರು ಸಾಗಾಟ ಪತ್ತೆ, ಪಿಕ್‌ಅಪ್ ವಾಹನ ಚಾಲಕನ ಬಂಧನ
36
VIEWS
WhatsappTelegramShare on FacebookShare on Twitter

ಪುತ್ತೂರು: ಯಾವುದೇ ಅಧಿಕೃತ ಪರವಾನಗಿ ಇಲ್ಲದೆ ವಧೆ ಮಾಡುವ ಉದ್ದೇಶದಿಂದ ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಪಿಕ್‌ಅಪ್ ವಾಹನವನ್ನು ಪುತ್ತೂರು ನಗರ ಠಾಣಾ ಪೊಲೀಸರು ಪತ್ತೆ ಹಚ್ಚಿ, ವಾಹನಸಮೇತ 3 ಜಾನುವಾರುಗಳನ್ನು ವಶಪಡಿಸಿಕೊಂಡು ಚಾಲಕನನ್ನು ಬಂಧಿಸಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಪ್ರಕಟಣೆ ತಿಳಿಸಿದೆ. ಬಂಧಿತ ಆರೋಪಿಯನ್ನು ಪಿಕ್‌ಅಪ್ ವಾಹನ ಚಾಲಕ ಮಹಮ್ಮದ್ ಜಬ್ಬಾರ್ ಎಂದು ಗುರುತಿಸಲಾಗಿದೆ.

ಭಾನುವಾರ ಬೆಳಗ್ಗೆ ವೇಳೆ ಆನಡ್ಕ ಕಡೆಯಿಂದ ಪಡೀಲ್ ಕಡೆಗೆ ವಾಹನವೊಂದರಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಪುತ್ತೂರು ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕ (PSI) ಸುರೇಶ್ ಸಿ.ಟಿ. ಅವರಿಗೆ ಬಂದಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಪಿಎಸ್‌ಐ ಮತ್ತು ಸಿಬ್ಬಂದಿ ಚಿಕ್ಕಮುಡ್ನೂರು ಗ್ರಾಮದ ಜಿಡೆಕಲ್ಲು ಎಂಬಲ್ಲಿ ಕಾವಲು ಕಾದಿದ್ದು, ಸಂಶಯಾಸ್ಪದವಾಗಿ ಬಂದ KA 19 D 0948 ನೋಂದಣಿ ಸಂಖ್ಯೆಯ ವಾಹನವನ್ನು ತಡೆದು ತಪಾಸಣೆ ನಡೆಸಿದ್ದಾರೆ. ಈ ವೇಳೆ ವಾಹನದೊಳಗೆ ಮೂರು ಜಾನುವಾರುಗಳನ್ನು ಯಾವುದೇ ಸುರಕ್ಷತೆ ಇಲ್ಲದೆ, ಹಿಂಸಾತ್ಮಕವಾಗಿ ಕಟ್ಟಿ ಹಾಕಿರುವುದು ಕಂಡುಬಂದಿದೆ.

ವಾಹನ ಚಾಲಕ ಮಹಮ್ಮದ್ ಜಬ್ಬಾರ್‌ನನ್ನು ವಿಚಾರಣೆಗೊಳಪಡಿಸಿದಾಗ, ಜಾನುವಾರುಗಳನ್ನು ಶಾಂತಿಗೋಡು ಗ್ರಾಮದ ನಿವಾಸಿ ಅಶೋಕ್ ಎಂಬವರಿಂದ ಖರೀದಿಸಿದ್ದು, ಯಾವುದೇ ಪರವಾನಗಿ ಇಲ್ಲದೆ ವಧೆ ಮಾಡುವ ಉದ್ದೇಶದಿಂದ ಸಾಗಿಸುತ್ತಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ.

ಪೊಲೀಸರು ಜಾನುವಾರುಗಳು ಹಾಗೂ ಕೃತ್ಯಕ್ಕೆ ಬಳಸಿದ ವಾಹನವನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಾಣಿಹಿಂಸೆ ತಡೆ ಕಾಯ್ದೆ ಕಲಂ 11(D), ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020 ರ ಕಲಂ 4, 5, 12, ಮೋಟಾರು ವಾಹನ ಕಾಯ್ದೆ (IMV Act) ಕಲಂ 66 ಜೊತೆಗೆ 192 (A) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ- ಆಟೋ ರಿಕ್ಷಾ ಚಾಲಕನ ಬಂಧನ

Next Post

ಬಂಟ್ವಾಳ: ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಸ್ಕೂಟರ್ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ; ಸವಾರನಿಗೆ ಗಾಯ

Related Posts

ಪೆಹಲ್ಗಾಮ್ ಹತ್ಯಾಕಾಂಡದ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ ಮುಂಬೈ ಪೊಲೀಸ್ ಸೋಗಿನಲ್ಲಿ ಪುತ್ತೂರಿನ ವ್ಯಕ್ತಿಯೊಬ್ಬರಿಗೆ 1.3 ಕೋಟಿ ರೂ. ವಂಚನೆ!
ಕ್ರೈಮ್ ನ್ಯೂಸ್

ಪೆಹಲ್ಗಾಮ್ ಹತ್ಯಾಕಾಂಡದ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ ಮುಂಬೈ ಪೊಲೀಸ್ ಸೋಗಿನಲ್ಲಿ ಪುತ್ತೂರಿನ ವ್ಯಕ್ತಿಯೊಬ್ಬರಿಗೆ 1.3 ಕೋಟಿ ರೂ. ವಂಚನೆ!

October 13, 2026
29
ಮಂಗಳೂರು ಪಂಜಿಮೊಗರು ಅನೈತಿಕ ಸಂಬಂಧ ಶಂಕೆ; ಪತ್ನಿಯ ಭೀಕರ ಕೊಲೆ, ಪತಿಯ ಬಂಧನ
ಕ್ರೈಮ್ ನ್ಯೂಸ್

ಮಂಗಳೂರು ಪಂಜಿಮೊಗರು ಅನೈತಿಕ ಸಂಬಂಧ ಶಂಕೆ; ಪತ್ನಿಯ ಭೀಕರ ಕೊಲೆ, ಪತಿಯ ಬಂಧನ

October 13, 2026
48
Next Post
ಬಂಟ್ವಾಳ: ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಸ್ಕೂಟರ್ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ; ಸವಾರನಿಗೆ ಗಾಯ

ಬಂಟ್ವಾಳ: ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಸ್ಕೂಟರ್ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ; ಸವಾರನಿಗೆ ಗಾಯ

Discussion about this post

Recent News

ಮಂಗಳೂರು ಏರ್ ಪೋರ್ಟ್ ನಲ್ಲಿ ಟೂರಿಸ್ಟ್ ವಾಹನಗಳಿಂದ ದುಬಾರಿ ಶುಲ್ಕ ವಸೂಲಿ: ಟ್ಯಾಕ್ಸಿ ಚಾಲಕರಿಂದ 10 ದಿನಗಳ ಗಡುವು, ಅನಿರ್ದಿಷ್ಟಾವಧಿ ಧರಣಿ ಎಚ್ಚರಿಕೆ

ಮಂಗಳೂರು ಏರ್ ಪೋರ್ಟ್ ನಲ್ಲಿ ಟೂರಿಸ್ಟ್ ವಾಹನಗಳಿಂದ ದುಬಾರಿ ಶುಲ್ಕ ವಸೂಲಿ: ಟ್ಯಾಕ್ಸಿ ಚಾಲಕರಿಂದ 10 ದಿನಗಳ ಗಡುವು, ಅನಿರ್ದಿಷ್ಟಾವಧಿ ಧರಣಿ ಎಚ್ಚರಿಕೆ

October 14, 2026
30
ಸುಳ್ಯ: ತಡರಾತ್ರಿ ಮೀನು ಹಿಡಿಯಲು ಹೋಗಿದ್ದ ವೇಳೆ ಹಂದಿಗೆ ಇಟ್ಟಿದ್ದ ವಿದ್ಯುತ್ ತಂತಿಯನ್ನು ತುಳಿದು ಇಬ್ಬರು ಯುವಕರು ಸಾವು

ಸುಳ್ಯ: ತಡರಾತ್ರಿ ಮೀನು ಹಿಡಿಯಲು ಹೋಗಿದ್ದ ವೇಳೆ ಹಂದಿಗೆ ಇಟ್ಟಿದ್ದ ವಿದ್ಯುತ್ ತಂತಿಯನ್ನು ತುಳಿದು ಇಬ್ಬರು ಯುವಕರು ಸಾವು

October 13, 2026
60
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಏರ್ ಪೋರ್ಟ್ ನಲ್ಲಿ ಟೂರಿಸ್ಟ್ ವಾಹನಗಳಿಂದ ದುಬಾರಿ ಶುಲ್ಕ ವಸೂಲಿ: ಟ್ಯಾಕ್ಸಿ ಚಾಲಕರಿಂದ 10 ದಿನಗಳ ಗಡುವು, ಅನಿರ್ದಿಷ್ಟಾವಧಿ ಧರಣಿ ಎಚ್ಚರಿಕೆ

ಮಂಗಳೂರು ಏರ್ ಪೋರ್ಟ್ ನಲ್ಲಿ ಟೂರಿಸ್ಟ್ ವಾಹನಗಳಿಂದ ದುಬಾರಿ ಶುಲ್ಕ ವಸೂಲಿ: ಟ್ಯಾಕ್ಸಿ ಚಾಲಕರಿಂದ 10 ದಿನಗಳ ಗಡುವು, ಅನಿರ್ದಿಷ್ಟಾವಧಿ ಧರಣಿ ಎಚ್ಚರಿಕೆ

October 14, 2026
ಸುಳ್ಯ: ತಡರಾತ್ರಿ ಮೀನು ಹಿಡಿಯಲು ಹೋಗಿದ್ದ ವೇಳೆ ಹಂದಿಗೆ ಇಟ್ಟಿದ್ದ ವಿದ್ಯುತ್ ತಂತಿಯನ್ನು ತುಳಿದು ಇಬ್ಬರು ಯುವಕರು ಸಾವು

ಸುಳ್ಯ: ತಡರಾತ್ರಿ ಮೀನು ಹಿಡಿಯಲು ಹೋಗಿದ್ದ ವೇಳೆ ಹಂದಿಗೆ ಇಟ್ಟಿದ್ದ ವಿದ್ಯುತ್ ತಂತಿಯನ್ನು ತುಳಿದು ಇಬ್ಬರು ಯುವಕರು ಸಾವು

October 13, 2026
ಪೆಹಲ್ಗಾಮ್ ಹತ್ಯಾಕಾಂಡದ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ ಮುಂಬೈ ಪೊಲೀಸ್ ಸೋಗಿನಲ್ಲಿ ಪುತ್ತೂರಿನ ವ್ಯಕ್ತಿಯೊಬ್ಬರಿಗೆ 1.3 ಕೋಟಿ ರೂ. ವಂಚನೆ!

ಪೆಹಲ್ಗಾಮ್ ಹತ್ಯಾಕಾಂಡದ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ ಮುಂಬೈ ಪೊಲೀಸ್ ಸೋಗಿನಲ್ಲಿ ಪುತ್ತೂರಿನ ವ್ಯಕ್ತಿಯೊಬ್ಬರಿಗೆ 1.3 ಕೋಟಿ ರೂ. ವಂಚನೆ!

October 13, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d