ಬೆಂಗಳೂರು, ಸೆ 24: ಪದ್ಮಭೂಷಣ, ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ನಿಧನರಾಗಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿನಗರದ ಆಸ್ಪತ್ರೆಯಲ್ಲಿ ಇಂದು(ಸೆಪ್ಟೆಂಬರ್ 24) ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಕಾಯಿಲೆ ಬಳಲುತ್ತಿದ್ದ ಬೈರಪ್ಪ ಅವರು ಮರುವಿನ ಕಾಯಿಲೆ ಸಹ ಇತ್ತು. ಹೀಗಾಗಿ ಅವರು 3 ತಿಂಗಳಿನಿಂದ ಮೈಸೂರು ಬಿಟ್ಟು ಬೆಂಗಳೂರಿನಲ್ಲಿ ವಾಸವಾಗಿದ್ದರು. 94 ವರ್ಷದ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಅವರು ಒಬ್ಬ ಪ್ರಸಿದ್ಧ ಕನ್ನಡ ಕಾದಂಬರಿಕಾರ, ತತ್ವಜ್ಞಾನಿ ಮತ್ತು ಲೇಖಕರಾಗಿದ್ದು, 2023ರಲ್ಲಿ ಇವರಿಗೆ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು,
ಭೈರಪ್ಪ ಅವರು ಪರ್ವ, ಆವರಣ, ಗೃಹಭಂಗ ಸೇರಿದಂತೆ ಅನೇಕ ಕಾದಂಬರಿಗಳನ್ನು ಬರೆದಿದ್ದಾರೆ. ಭೈರಪ್ಪ ಅವರು ಹಾಸನ ಜಿಲ್ಲೆಯ ಸಂತೇಶಿವಾರ ಗ್ರಾಮದವರು. ತಮ್ಮ ಸ್ವಗ್ರಾಮದ ಕೆರೆಗಳಿಗೆ ನೀರು ತುಂಬಿಸಲು ಕೂಡ ಶ್ರಮಿಸಿದ್ದರು. ಬಾಲ್ಯದಲ್ಲಿ ಕಷ್ಟದಲ್ಲೇ ಬೆಳೆದು ವಿದ್ಯಾಭ್ಯಾಸ ಮಾಡಿದ್ದರು. . ಭೈರಪ್ಪ ಅವರಿಗೆ ಜ್ಞಾನಪೀಠ ಪ್ರಶಸ್ತಿ ನೀಡಬೇಕೆಂದು ಅವರ ಓದುಗ ಅಭಿಮಾನಿಗಳು ಒತ್ತಾಯಿಸುತ್ತಿದ್ದರು. ಆದ್ರೆ, ಜ್ಞಾನಪೀಠ ಪ್ರಶಸ್ತಿಗೆ ಪರ್ಯಾಯವಾದ ಸರಸ್ವತಿ ಸಮ್ಮಾನ್ ಪ್ರಶಸ್ತಿ ಭೈರಪ್ಪ ಅವರಿಗೆ ಬಂದಿತ್ತು.
ಭೈರಪ್ಪ ಅವರು ತಮ್ಮ ಜನಪ್ರಿಯ ಕಾದಂಬರಿಗಳಾದ ‘ವಂಶವೃಕ್ಷ’, ‘ದಾಟು’, ‘ಪರ್ವ’, ‘ಮಂದಾರ’ ಸೇರಿದಂತೆ ಇನ್ನಿತರ ಸಾಹಿತ್ಯದ ಕೃಷಿಯಿಂದ ಹೆಸರುವಾಸಿಯಾಗಿದ್ದಾರೆ. ಅವರ ಹೆಚ್ಚಿನ ಕೃತಿಗಳನ್ನು ಇಂಗ್ಲಿಷ್ ಮತ್ತು ಇತರ ಭಾಷೆಗಳಿಗೆ ಅನುವಾದಿಸಲಾಗಿದೆ. ಭೈರಪ್ಪ ಅವರು ಪದ್ಮಭೂಷಣ, ಪದ್ಮಶ್ರೀ, ಸರಸ್ವತಿ ಸಮ್ಮಾನ್, ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದರು. ಅವರ ‘ನಾಯಿ-ನೆರಳು’, ‘ವಂಶವೃಕ್ಷ’, ‘ತಬ್ಬಲಿಯು ನೀನಾದೆ ಮಗನೆ’ ಮುಂತಾದ ಕೃತಿಗಳು ಚಲನಚಿತ್ರಗಳಾಗಿ ಮತ್ತು ‘ಗೃಹಭಂಗ’ ಮತ್ತು ‘ದಾಟು’ ಟಿವಿ ಧಾರಾವಾಹಿಗಳಾಗಿ ಪ್ರಸಾರವಾಗಿದ್ದವು.
ಭೈರಪ್ಪ ಅವರಿಗೆ 2010ರಲ್ಲಿ ಸರಸ್ವತಿ ಸಮ್ಮಾನ್, 2015ರಲ್ಲಿ ಸಾಹಿತ್ಯ ಅಕಾಡೆಮಿ ಫೆಲೋಶಿಪ್, 2016ರಲ್ಲಿ ಪದ್ಮಶ್ರೀ, ಮತ್ತು 2023ರಲ್ಲಿ ಪದ್ಮಭೂಷಣ ಪ್ರಶಸ್ತಿಗಳು ಲಭಿಸಿವೆ. ವಿಶೇಷತೆ ಅಂದರೆ, ಭೈರಪ್ಪನವರ ಕಾದಂಬರಿಗಳು ವೈವಿಧ್ಯಮಯ ವಿಷಯಗಳನ್ನು ಒಳಗೊಂಡಿದ್ದು, ಅನೇಕ ಸಾರ್ವಜನಿಕ ಚರ್ಚೆಗಳಿಗೆ ಕಾರಣವಾಗಿವೆ.
Discover more from Coastal Times Kannada
Subscribe to get the latest posts sent to your email.
Discussion about this post