• About us
  • Contact us
  • Disclaimer
Monday, April 13, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

200 ವರ್ಷ ಭಾರತ ಆಳಿದ್ದ ಆಂಗ್ಲರಿಗೆ ಪ್ರಧಾನಿಯಾಗಿ ಭಾರತ ಮೂಲದ ಬ್ರಿಟನ್ ಯುವ ರಾಜಕಾರಣಿ ರಿಷಿ ಸುನಕ್ ಆಯ್ಕೆ !.

Coastal Times by Coastal Times
October 24, 2022
in ವಿದೇಶಿ ಸುದ್ದಿ
200 ವರ್ಷ ಭಾರತ ಆಳಿದ್ದ ಆಂಗ್ಲರಿಗೆ  ಪ್ರಧಾನಿಯಾಗಿ ಭಾರತ ಮೂಲದ ಬ್ರಿಟನ್ ಯುವ ರಾಜಕಾರಣಿ ರಿಷಿ ಸುನಕ್ ಆಯ್ಕೆ !.
49
VIEWS
WhatsappTelegramShare on FacebookShare on Twitter

ಲಂಡನ್:ಭಾರತ ಮೂಲದ ಬ್ರಿಟನ್ ಯುವ ರಾಜಕಾರಣಿ ರಿಷಿ ಸುನಕ್ ಅವರು ಬ್ರಿಟನ್ ದೇಶದ ಮುಂದಿನ ಪ್ರಧಾನ ಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಒಂದು ಕಾಲದಲ್ಲಿ ಸುಮಾರು 200 ವರ್ಷಗಳಿಗೂ ಹೆಚ್ಚು ಕಾಲ ಭಾರತವನ್ನು ಆಳಿದ್ದ ಬ್ರಿಟನ್‌ಗೆ ಇದೀಗ ಭಾರತ ಮೂಲದ ವ್ಯಕ್ತಿಯೊಬ್ಬರೇ ಆಡಳಿತ ಚುಕ್ಕಾಣಿ ಹಿಡಿಯುವಂತಾಗಿದೆ.

ರಿಷಿ ಸುನಕ್ ಅವರ ತಂದೆ ತಾಯಿಯರಿಬ್ಬರೂ ಭಾರತೀಯ ಮೂಲದವರು. ಸುನಕ್ ಅವರ ಪೋಷಕರು 1960ರ ದಶಕದಲ್ಲಿ ಪೂರ್ವ ಆಫ್ರಿಕಾದಿಂದ ಬ್ರಿಟನ್‌ಗೆ ವಲಸೆ ಬಂದಿದ್ದರು. ಇನ್ಫೋಸಿಸ್ ಮುಖ್ಯಸ್ಥ ನಾರಾಯಣ ಮೂರ್ತಿ ಅವರ ಪುತ್ರಿ ಅಕ್ಷತಾ ಮೂರ್ತಿ ಅವರನ್ನು ವಿವಾಹವಾಗಿದ್ದ ಸುನಕ್ ಅವರಿಗೆ ಕೃಷ್ಣ ಮತ್ತು ಅನೌಷ್ಕಾ ಎಂಬ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.

ವಿಶೇಷ ಅಂದ್ರೆ, ಇದೇ ಸುನಕ್ ಗೂ ಕನ್ನಡಿಗರಿಗೂ ನೇರ ನಂಟಿದೆ. ರಿಷಿ ಸುನಕ್ ಅವರು ಇನ್ಫೋಸಿಸ್ ಕಂಪನಿ ಸ್ಥಾಪಕರಾದ ನಾರಾಯಣ ಮೂರ್ತಿ ಹಾಗೂ ಸುಧಾಮೂರ್ತಿ ಅವರ ಅಳಿಯರಾಗಿದ್ದಾರೆ. ಬ್ರಿಟನ್‌ನಲ್ಲಿ ಪ್ರಬಲ ಯುವ ರಾಜಕಾರಣಿಯಾಗಿ ಬೆಳದಿರುವ ರಿಷಿ ಸುನಕ್ ಅವರಿಗೆ ಬದಲಾದ ಬೆಳವಣಿಗೆಯಲ್ಲಿ ಉನ್ನತ ಹುದ್ದೆ ಪಡೆಯುವಂತಾಗಿದೆ.

ಕೇವಲ 45 ದಿನ ಆಡಳಿತ ನಡೆಸಿ ನಿರ್ಗಮಿಸಿದ ಲಿಜ್ ಟ್ರಸ್ ಅವರಿಂದ ರಾಜಕೀಯ ಬಿಕ್ಕಟ್ಟು ಏರ್ಪಟ್ಟಿತ್ತು. ಬ್ರಿಟನ್‌ನ ಟೋರಿ ನಾಯಕತ್ವಕ್ಕಾಗಿ ಒಟ್ಟು ಬಲದ ಅರ್ಧಕ್ಕೂ ಹೆಚ್ಚು ಸಂಸದರು ರಿಷಿ ಸುನಕ್ ಅವರು ಪ್ರಧಾನಿಯಾಗಲು ಹಸಿರು ನಿಶಾನೆ ತೋರಿಸಿದರು.

ಪ್ರತಿಸ್ಫರ್ಧಿಯಾಗಬಹುದಾಗಿದ್ದ ಸಂಸದೆ ಪೆನ್ನಿ ಮೊರ್ಡಾಂಟ್ ಅವರಿಗೆ ಕೇವಲ 28 ಸಂಸದರು ಆಸಕ್ತಿ ತೋರಿದರು. ಇದರಿಂದ ಸುನಕ್ ಹಾದಿ ಸುಗಮವಾಯಿತು. 198 ಸಂಸದರು ರಿಷಿ ಪರವಾಗಿದ್ದಾರೆ. ಬೋರಿಸ್ ಜಾನ್ಸನ್ ತಾವು ಪ್ರಧಾನಿ ಅಭ್ಯರ್ಥಿ ಸ್ಥಾನಕ್ಕೆ ಪುನರಾಯ್ಕೆ ಬಯಸುವುದಿಲ್ಲ ಎಂದು ಸ್ಪಷ್ಟಪಡಿಸಿದ ನಂತರ ರಿಷಿ ಸುನಕ್ ಅವರ ದಾರಿ ಸುಗಮವಾಗಿತ್ತು. ಸೋಮವಾರ ಸಂಜೆ ರಿಷಿ ಸುನಕ್ ಅವರ ಅಧಿಕೃತ ಆಯ್ಕೆಬಗ್ಗೆ ಪ್ರಕಟಣೆ ಹೊರಬೀದ್ದಿತು. ರಿಷಿ ಸುನಕ್ ಅವರು ಅ.28 ರಂದು ಪ್ರಮಾಣವಚನ ಸ್ವೀಕರಿಸಬಹುದು ಎಂದು ವರದಿಗಳು ಹೇಳಿವೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಶ್ರೀ ಕ್ಷೇತ್ರ ಕುದ್ರೊಳಿಯಲ್ಲಿ ನಮ್ಮ ಕುಡ್ಲ ಗೂಡುದೀಪ ಸ್ಪರ್ಧೆ -2022

Next Post

ಮಂಗಳೂರು: ಸಂತ ಮದರ್ ತೆರೇಸಾ ವಿಚಾರ ವೇದಿಕೆಯಿಂದ ​ದೀಪಾವಳಿಯ ಸಂಭ್ರಮ

Related Posts

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ
ವಿದೇಶಿ ಸುದ್ದಿ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
77
ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!
ವಿದೇಶಿ ಸುದ್ದಿ

ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

February 28, 2026
103
Next Post
ಮಂಗಳೂರು: ಸಂತ ಮದರ್ ತೆರೇಸಾ ವಿಚಾರ ವೇದಿಕೆಯಿಂದ ​ದೀಪಾವಳಿಯ ಸಂಭ್ರಮ

ಮಂಗಳೂರು: ಸಂತ ಮದರ್ ತೆರೇಸಾ ವಿಚಾರ ವೇದಿಕೆಯಿಂದ ​ದೀಪಾವಳಿಯ ಸಂಭ್ರಮ

Discussion about this post

Recent News

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

April 13, 2026
0
ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

April 13, 2026
3
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

April 13, 2026
ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

April 13, 2026
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,

ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,

April 12, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d