ಮಂಗಳೂರು, ನ.24: ಅಜ್ಜನ ಮರಣ ಪತ್ರ ಮಾಡಿಕೊಡಲು ವ್ಯಕ್ತಿಯೊಬ್ಬರಲ್ಲಿ ಲಂಚ ಕೇಳಿದ ಚೇಳ್ಯಾರು ಗ್ರಾಮದ ಗ್ರಾಮ ಲೆಕ್ಕಿಗನನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.
ದೂರುದಾರ ವ್ಯಕ್ತಿ ತನ್ನ ತಾಯಿಯ ಹೆಸರಿನಲ್ಲಿ ಮಂಗಳೂರಿನ ಚೇಳ್ಯಾರು ಗ್ರಾಮದಲ್ಲಿ 42 ಸೆಂಟ್ಸ್ ಜಾವವಿದ್ದು ಅದರಲ್ಲಿ ಐದು ಸೆಂಟ್ಸ್ ಜಾಗವನ್ನು ನೆರೆಮನೆವರಿಗೆ ಮಾರಾಟ ಮಾಡಲು ನಿರ್ಧರಿಸಿದ್ದರು ಇದಕ್ಕೆ ಸಂಬಂಧಿಸಿ ಅಗತ್ಯ ದಾಖಲೆಗಳನ್ನು ಹಿಡಿದುಕೊಂಡು ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿಚಾರಿಸಿದ ವೇಳೆ ಅಜ್ಜನ ಮರಣ ಪ್ರಮಾಣ ಪತ್ರ ಜೊತೆಗೆ ಸಂತತಿ ನಕ್ಷೆ ತರುವಂತೆ ಹೇಳಿದ್ದಾರೆ.
ಅದರಂತೆ ವ್ಯಕ್ತಿ ಕಳೆದ ಸಪ್ಟೆಂಬರ್ ತಿಂಗಳಲ್ಲಿ ಅಜ್ಜನ ಮರಣ ಪ್ರಮಾಣ ಪಾತ್ರ ಹಾಗೂ ಸಂತತಿ ನಕ್ಷೆ ಮಾಡಲು ಚೇಳ್ಯಾರು ಗ್ರಾಮ ಕರಣಿಕರ ಕಛೇರಿಯುಗೆ ತೆರಳಿ ಅರ್ಜಿ ಸಲ್ಲಿಸಿದ್ದಾರೆ. ಆ ಬಳಿಕ ಎರಡು ಮೂರೂ ಬಾರಿ ಕಚೇರಿಗೆ ತೆರಳಿ ಅರ್ಜಿಯ ವಿಚಾರವಾಗಿ ಗ್ರಾಮ ಆಡಳಿತ ಅಧಿಕಾರಿ ಶ್ರೀ ವಿಜಿತ್ ಅವರನ್ನು ವಿಚಾರಿಸಿದಾಗ ಯಾವುದೇ ಉತ್ತರ ಸಿಗಲಿಲ್ಲ ಆ ಬಳಿಕ ನವೆಂಬರ್ 20 ರಂದು ಗ್ರಾಮ ಆಡಳಿತ ಅಧಿಕಾರಿ ವಿಜಿತ್ ಅವರ ಮೊಬೈಲ್ ನಂಬರ್ ಗೆ ಕರೆ ಮಾಡಿದಾಗ ನಿಮ್ಮ ಅಜ್ಜನ ಮರಣ ದೃಡೀಕರಣ ಪತ್ರ ರೆಡಿ ಇದೆ ಚೇಳ್ಯಾರು ಗ್ರಾಮಕರಣಿಕರ ಕಚೇರಿಗೆ ಬಂದು ತೆಗೆದುಕೊಳ್ಳಿ ಹಾಗೆಯೇ ಬರುವಾಗ ಹದಿನೈದು ಸಾವಿರ ರೂಪಾಯಿಗಳನ್ನು ತರುವಂತೆ ವಿಜಿತ್ ಹೇಳಿದ್ದಾರೆ ಇದಕ್ಕೆ ಪ್ರತಿಯಾಗಿ ಅರ್ಜಿದಾರ ವ್ಯಕ್ತಿ ತನ್ನ ಬಳಿ ಅಷ್ಟೊಂದು ದುಡ್ಡು ಇಲ್ಲ ಎಂದು ಹೇಳಿದ್ದಾರೆ ಆದರೆ ಅದಕ್ಕೆ ಪ್ರತಿಕ್ರಿಯಿಸಿದ ವಿಜಿತ್ ಇವತ್ತು ಆಗದಿದ್ದರೂ ಪರವಾಗಿಲ್ಲ ನಾಳೆಯಾದರೂ ತಗೊಂಡು ಬನ್ನಿ ಎಂದು ಹೇಳಿದ್ದಾರೆ.
ಇದಾದ ಬಳಿಕ ನವೆಂಬರ್ 22 ರಂದು ಮತ್ತೆ ಗ್ರಾಮ ಕರಣಿಕರ ಕಚೇರಿಗೆ ತೆರಳಿ ಮರಣ ಪ್ರಮಾಣ ಪತ್ರ ಪಡೆಯಲು ಹೋದಾಗ ಗ್ರಾಮ ಆಡಳಿತ ಅಧಿಕಾರಿ ವಿಜಿತ್ ಮರಣ ಪ್ರಮಾಣ ಪತ್ರ ನೀಡಿ ಹಣ ಕೊಡುವಂತೆ ಕೇಳಿಕೊಂಡಿದ್ದಾರೆ ಈ ವೇಳೆ ಇಷ್ಟೊಂದು ದುಡ್ಡು ನನ್ನ ಬಳಿ ಇಲ್ಲ ಸ್ವಲ್ಪ ಕಡಿಮೆ ಮಾಡಿ ಎಂದಿದ್ದಕ್ಕೆ ಎರಡು ಸಾವಿರ ಕಡಿಮೆ ಮಾಡಿ ಹದಿಮೂರು ಸಾವಿರ ನೀಡುವಂತೆ ಕೇಳಿಕೊಂಡಿದ್ದಾರೆ.
ಈ ವಿಚಾರವನ್ನು ಲೋಕಾಯುಕ್ತ ಪೊಲೀಸರಿಗೆ ದೂರಿನ ಮೂಲಕ ನೀಡಿದ್ದು ಕಾರ್ಯಪ್ರವೃತ್ತರಾದ ಲೋಕಾಯುಕ್ತ ಪೊಲೀಸರು ಇಂದು ಚೇಳ್ಯಾರು ಗ್ರಾಮಕರಣಿಕರ ಕಚೇರಿಗೆ ತೆರಳಿದ್ದಾರೆ ಅದರಂತೆ ದೂರುದಾರ ವ್ಯಕ್ತಿ ಬೆಳಿಗ್ಗೆ ಕಚೇರಿಗೆ ತೆರಳಿ ಅಧಿಕಾರಿಗೆ ದುಡ್ಡು ನೀಡುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಅಧಿಕಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೆ ಲಂಚದ ನೀಡಿದ ಹಣವನ್ನು ವಶಪಡಿಸಿಕೊಂಡಿದ್ದಾರೆ.
ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಸಿ.ಎ. ಸೈಮನ್ ಅವರ ಮಾರ್ಗದರ್ಶನದಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರಾದ ಚಲುವರಾಜು ಬಿ. ಪೊಲೀಸ್ ನಿರೀಕ್ಷಕರಾದ ಅಮಾನುಲ್ಲಾ ಎ. ಸುರೇಶ ಕುಮಾರ್ ಪಿ. ಕಾರ್ಯಾಚರಣೆಯಲ್ಲಿ ಇದ್ದರು.
Discover more from Coastal Times Kannada
Subscribe to get the latest posts sent to your email.
Discussion about this post