• About us
  • Contact us
  • Disclaimer
Saturday, February 28, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕಾಸರಗೋಡು ಸಂಗೀತ ರಸಮಂಜರಿ ಕಾರ್ಯಕ್ರಮದಲ್ಲಿ ನೂಕುನುಗ್ಗಲು, ಪೊಲೀಸರಿಂದ ಲಾಠಿ ಪ್ರಹಾರ, 15 ಮಂದಿಗೆ ಗಾಯ

Coastal Times by Coastal Times
November 24, 2025
in ಕರಾವಳಿ
ಕಾಸರಗೋಡು ಸಂಗೀತ ರಸಮಂಜರಿ ಕಾರ್ಯಕ್ರಮದಲ್ಲಿ ನೂಕುನುಗ್ಗಲು, ಪೊಲೀಸರಿಂದ ಲಾಠಿ ಪ್ರಹಾರ, 15 ಮಂದಿಗೆ ಗಾಯ
61
VIEWS
WhatsappTelegramShare on FacebookShare on Twitter

ಕಾಸರಗೋಡು: ನಗರ ಹೊರವಲಯದಲ್ಲಿ ನಡೆದ ರಸಮಂಜರಿ ಕಾರ್ಯಕ್ರಮದ ವೇಳೆ ನಿರೀಕ್ಷೆಗೂ ಮೀರಿ ಸೇರಿದ್ದ ಜನಸಂದಣಿಯಿಂದ ಉಸಿರಾಟದ ತೊಂದರೆಯಿಂದ ಹಲವಾರು ಜನರು ಕುಸಿದು ಬಿದ್ದು ನೂಕುನುಗ್ಗಲು ಸಂಭವಿಸಿ, ಕನಿಷ್ಠ 15 ಮಂದಿ ಗಾಯಗೊಂಡಿರುವ ಘಟನೆ ರವಿವಾರ ರಾತ್ರಿ ನಡೆದಿದೆ. ಗಾಯಗೊಂಡವರಲ್ಲಿ ಮಹಿಳೆಯರು, ಮಕ್ಕಳು ಸೇರಿದ್ದಾರೆ ಎಂದು ತಿಳಿದು ಬಂದಿದೆ. ರವಿವಾರ ರಾತ್ರಿ 8.30ರ ಸುಮಾರಿಗೆ ಈ ಘಟನೆ ನಡೆದಿದೆ. ಕುಸಿದು ಬಿದ್ದವರನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೊಸ ಬಸ್ ನಿಲ್ದಾಣದ ಸಮೀಪದ ನಡೆಯುತ್ತಿದ್ದ ಎಕ್ಸ್‌ಪೊ ಒಂದರ ಭಾಗವಾಗಿ ಹನಾನ್ ಅವರ ಕಾರ್ಯಕ್ರಮ ಇತ್ತು. ಘಟನೆ ಸಂಬಂಧ ಐವರು ಸಂಘಟಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಣ್ಣ ಮೈದಾನದಲ್ಲಿ ಕಾರ್ಯಕ್ರಮ ಆಯೋಜನೆ ಬಗ್ಗೆ ಎಚ್ಚರಿಕೆ ನೀಡಲಾಗಿದ್ದರೂ, ಸಂಘಟಕರು ಅದನ್ನು ನಿರ್ಲಕ್ಷಿಸಿದ್ದರು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಟಿಕೆಟ್ ದರ ರೂ. 100 ಇದ್ದರೂ, ಹೆಚ್ಚಿನ ದರಕ್ಕೆ ಮಾರಾಟ ಮಾಡಲಾಗಿದೆ ಎಂದೂ ಆರೋ‍ಪಿಸಲಾಗಿದೆ.

ಕಾಸರಗೋಡು ಫ್ಲೀ ಯುವಜನ ಸಂಘಟನೆ ವತಿಯಿಂದ ನುಳ್ಳಿಪ್ಪಾಡಿ ಪ್ರದೇಶದಲ್ಲಿ ಆಯೋಜಿಸಿದ್ದ ಸಾಮಾಜಿಕ ಮಾಧ್ಯಮ ಪ್ರಭಾವಿ, ಗಾಯಕ ಹನಾನ್ ಷಾ ಅವರ ಕಾರ್ಯಕ್ರಮಕ್ಕೆ ನಿರೀಕ್ಷೆಗೂ ಮೀರಿ ಸಾವಿರಾರು ಮಂದಿ ಸೇರಿದ್ದರು. ಕಾರ್ಯಕ್ರಮಕ್ಕೆ ಟಿಕೆಟ್ ವ್ಯವಸ್ಥೆ ಮಾಡಲಾಗಿತ್ತು. ಟಿಕೆಟ್ ಪಡೆದವರ ಜೊತೆ ಟಿಕೆಟ್ ಇಲ್ಲದವರೂ ಪ್ರಮುಖ ಗಾಯಕರನ್ನು ನೋಡುವ ಉತ್ಸಾಹದಲ್ಲಿ ಮೈದಾನಕ್ಕೆ ಒಳನುಗ್ಗಲು ಯತ್ನಿಸಿದಾಗ ಗೊಂದಲ ಸೃಷ್ಟಿಯಾಗಿ, ಹಲವರಿಗೆ ಉಸಿರಾಟದ ತೊಂದರೆ ಉಂಟಾಗಿ ಕುಸಿದು ಬಿದ್ದರು ಎನ್ನಲಾಗಿದೆ. ಪೊಲೀಸರು ನೀಡಿದ್ದ ಎಚ್ಚರಿಕೆಯನ್ನೂ ನಿರ್ಲಕ್ಷಿಸಿದ್ದರು ಎಂದು ಆರೋಪಿಸಲಾಗಿದೆ.

ಆ ಬಳಿಕ ಗುಂಪನ್ನು ನಿಯಂತ್ರಿಸಲು ಸ್ಥಳಕ್ಕೆ ಧಾವಿಸಿದ ಪೊಲೀಸರು ಲಾಠಿ ಪ್ರಹಾರ ನಡೆಸಿ ಜನರನ್ನು ಚದುರಿಸಿದರು. ಕಾರ್ಯಕ್ರಮದ ಆರಂಭಕ್ಕೂ ಮೊದಲೇ ಜಮಾಯಿಸಿದ್ದ ಜನಸಂದಣಿಯಿಂದ ಸಂಚಾರವೂ ಕೆಲಕಾಲ ಅಸ್ತವ್ಯಸ್ತಗೊಂಡಿತ್ತು ಎಂದು ತಿಳಿದು ಬಂದಿದೆ.

ಹನಾನ್ ಷಾ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಮಾಹಿತಿ ಹರಡುತ್ತಿದ್ದಂತೆ ಜನರ ಸಂಖ್ಯೆ ಹೆಚ್ಚಾಯಿತು ಎಂದು ಮೂಲಗಳು ತಿಳಿಸಿವೆ. ನಿರೀಕ್ಷೆಗೂ ಅಧಿಕ ಜನರು ಆಗಮಿಸಿದ್ದ ಕಾರಣ ಆಯೋಜಕರು ಕಾರ್ಯಕ್ರಮವನ್ನು ಸ್ಥಗಿತಗೊಳಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಜಯ್ ಭರತ್ ರೆಡ್ಡಿ ವೇದಿಕೆಯೇರಿ ಕಾರ್ಯಕ್ರಮ ಸ್ಥಗಿತವಾಗಿರುವ ಮಾಹಿತಿ ನೀಡಿದರು. ಕಾರ್ಯಕ್ರಮದ ನಿರ್ವಾಹಕರು ತುರ್ತು ನಿರ್ಗಮನಗಳನ್ನು ತೆರೆದು ಜನರನ್ನು ಹೊರಗೆ ಕಳುಹಿಸುವಂತೆ ಮೈಕ್ ಮೂಲಕ ಮನವಿ ಮಾಡಿಕೊಂಡರು. ಆ ಬಳಿಕ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಬೆಳ್ತಂಗಡಿ: ದ್ವಿಚಕ್ರ ವಾಹನ ಕಳ್ಳತನ – ಇಬ್ಬರು ಆರೋಪಿಗಳ ಬಂಧನ

Next Post

ಧರ್ಮಸ್ಥಳ ಬುರುಡೆ ಕೇಸ್​: ಮಾಸ್ಕ್​​ ಮ್ಯಾನ್​​ ಚಿನ್ನಯ್ಯಗೆ ಷರತ್ತಿನ ಜಾಮೀನು

Related Posts

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ
ಕರಾವಳಿ

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ

February 25, 2026
32
‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ
ಕರಾವಳಿ

‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

February 24, 2026
29
Next Post
ಧರ್ಮಸ್ಥಳ ಬುರುಡೆ ಕೇಸ್​: ಮಾಸ್ಕ್​​ ಮ್ಯಾನ್​​ ಚಿನ್ನಯ್ಯಗೆ ಷರತ್ತಿನ ಜಾಮೀನು

ಧರ್ಮಸ್ಥಳ ಬುರುಡೆ ಕೇಸ್​: ಮಾಸ್ಕ್​​ ಮ್ಯಾನ್​​ ಚಿನ್ನಯ್ಯಗೆ ಷರತ್ತಿನ ಜಾಮೀನು

Discussion about this post

Recent News

ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ

ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ

February 27, 2026
39
ಅಮೆರಿಕನ್ ಕಮೊಡಿಟೀಸ್‌ ಹೆಸರಿನಲ್ಲಿ ಹೂಡಿಕೆ ; ಮಂಗಳೂರಿನ ಹಿರಿಯ ವ್ಯಕ್ತಿಗೆ 1.77 ಕೋಟಿ ರೂ. ಆನ್‌ಲೈನ್ ವಂಚನೆ

ಅಮೆರಿಕನ್ ಕಮೊಡಿಟೀಸ್‌ ಹೆಸರಿನಲ್ಲಿ ಹೂಡಿಕೆ ; ಮಂಗಳೂರಿನ ಹಿರಿಯ ವ್ಯಕ್ತಿಗೆ 1.77 ಕೋಟಿ ರೂ. ಆನ್‌ಲೈನ್ ವಂಚನೆ

February 27, 2026
9
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ

ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ

February 27, 2026
ಅಮೆರಿಕನ್ ಕಮೊಡಿಟೀಸ್‌ ಹೆಸರಿನಲ್ಲಿ ಹೂಡಿಕೆ ; ಮಂಗಳೂರಿನ ಹಿರಿಯ ವ್ಯಕ್ತಿಗೆ 1.77 ಕೋಟಿ ರೂ. ಆನ್‌ಲೈನ್ ವಂಚನೆ

ಅಮೆರಿಕನ್ ಕಮೊಡಿಟೀಸ್‌ ಹೆಸರಿನಲ್ಲಿ ಹೂಡಿಕೆ ; ಮಂಗಳೂರಿನ ಹಿರಿಯ ವ್ಯಕ್ತಿಗೆ 1.77 ಕೋಟಿ ರೂ. ಆನ್‌ಲೈನ್ ವಂಚನೆ

February 27, 2026
ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

February 26, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d