• About us
  • Contact us
  • Disclaimer
Wednesday, March 11, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಲೇಡಿಗೋಶನ್ ಆಸ್ಪತ್ರೆಯಲ್ಲಿ ‘ಎದೆಹಾಲು ಬ್ಯಾಂಕ್’

Coastal Times by Coastal Times
December 24, 2021
in ಕರಾವಳಿ
ಮಂಗಳೂರು: ಲೇಡಿಗೋಶನ್ ಆಸ್ಪತ್ರೆಯಲ್ಲಿ  ‘ಎದೆಹಾಲು ಬ್ಯಾಂಕ್’
54
VIEWS
WhatsappTelegramShare on FacebookShare on Twitter

ಮಂಗಳೂರು: ತಾಯಿಯನ್ನು ಕಳೆದುಕೊಂಡು ಅನಾಥವಾಗುವ ನವಜಾತ ಶಿಶುಗಳು, ಅವಧಿಪೂರ್ವ ಜನಿಸುವ ಮಗುವಿಗೆ ಹಾಲು ನೀಡಲು, ನಗರದ ಸರ್ಕಾರಿ ಲೇಡಿಗೋಶನ್ ಆಸ್ಪತ್ರೆಯಲ್ಲಿ ಎದೆಹಾಲು ಸಂಗ್ರಹ ಬ್ಯಾಂಕ್ ಪ್ರಾರಂಭಕ್ಕೆ ಸಿದ್ಧತೆ ನಡೆಯುತ್ತಿದೆ.

ಬಡವರ ಪಾಲಿಗೆ ಆಶಾಕಿರಣವಾಗಿರುವ ಈ ಸರ್ಕಾರಿ ಆಸ್ಪತ್ರೆಯು ಸಕಲ ಸೌಲಭ್ಯಗಳನ್ನು ಹೊಂದಿದೆ. ಇಲ್ಲಿ ತಿಂಗಳಿಗೆ 700ಕ್ಕೂ ಅಧಿಕ ಹೆರಿಗೆಗಳಾಗುತ್ತವೆ. ಈ ಆಸ್ಪತ್ರೆಯಲ್ಲಿ ರೋಟರಿ ಕ್ಲಬ್ ಸಹಯೋಗದಲ್ಲಿ ಅಂದಾಜು ₹ 45 ಲಕ್ಷ ವೆಚ್ಚದಲ್ಲಿ ಯಂತ್ರೋಪಕರಣಗಳನ್ನು ಅಳವಡಿಸಿ, ಎದೆಹಾಲು ಸಂಗ್ರಹ ಬ್ಯಾಂಕ್ ತೆರೆಯುವ ತಯಾರಿ ನಡೆದಿದೆ. ಅವಧಿ ಪೂರ್ವ ಜನಿಸಿದ, ತಾಯಿಯನ್ನು ಕಳೆದುಕೊಂಡ ಹಸುಳೆಗಳಿಗೆ ಈ ಬ್ಯಾಂಕ್ ವರದಾನವಾಗಲಿದೆ.

‘ಜಿಲ್ಲೆಯ ವಿವಿಧೆಡೆಗಳಿಂದ ಲೇಡಿಗೋಶನ್ ಆಸ್ಪತ್ರೆಗೆ ಗರ್ಭಿಣಿಯರು ಹೆರಿಗೆಗೆ ಬರುತ್ತಾರೆ. ಆರ್ಥಿಕ ಮುಗ್ಗಟ್ಟಿನ ಕುಟುಂಬದ ಕೆಲವರು ಪೌಷ್ಟಿಕತೆ ಕೊರತೆಯಿಂದ ಬಳಲುತ್ತಿರುತ್ತಾರೆ. ಅಂತಹ ತಾಯಂದಿರಲ್ಲಿ ಎದೆಹಾಲಿನ ಕೊರತೆ ಕಾಡುತ್ತದೆ. ಅಂತಹ ಮಹಿಳೆಗೆ ಹುಟ್ಟುವ ಮಗುವಿಗೆ ಈ ಬ್ಯಾಂಕ್ ಮೂಲಕ ಎದೆಹಾಲು ನೀಡಬಹುದು. ತಾಯಂದಿರು ಎದೆಹಾಲನ್ನು ದಾನವಾಗಿ ನೀಡಿದರೆ, ಅದನ್ನು ಸರಿಯಾಗಿ ಸಂಗ್ರಹಿಸಿ, ಅಗತ್ಯವಿರುವ ಎಳೆಯ ಮಗುವಿಗೆ ನೀಡಲಾಗುತ್ತದೆ’ ಎನ್ನುತ್ತಾರೆ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಎಂ.ಆರ್. ದುರ್ಗಾಪ್ರಸಾದ್.

‘ತಾಯಿಯ ಎದೆಹಾಲಿನಲ್ಲಿ ಲವಣಾಂಶ, ಪ್ರೊಟೀನ್, ಶರ್ಕರಪಿಷ್ಠ, ಪ್ರತಿರೋಧಕ ಶಕ್ತಿ ಹೆಚ್ಚಿಸುವ ಜೀವಕಣ ಇರುತ್ತದೆ. ಇದು ಅವಧಿಪೂರ್ವ ಜನಿಸುವ ಮಗು, ತಾಯಿಯನ್ನು ಕಳೆದುಕೊಂಡ ಮಗುವನ್ನು ಉಳಿಸಿಕೊಳ್ಳಲು ಅನುಕೂಲವಾಗುತ್ತದೆ. ಎದೆಹಾಲು ದಾನ ನೀಡುವ ತಾಯಂದಿರಿಂದ ಹಾಲು ಸಂಗ್ರಹಿಸಿ, ಶಿತಲೀಕರಣ ಪ್ರಕ್ರಿಯೆ ಮಾಡಿ, ಕಾಯ್ದಿಡಲಾಗುತ್ತದೆ’ ಎಂದು ಉದ್ದೇಶಿತ ಬ್ಯಾಂಕ್‌ನ ನೋಡಲ್ ಅಧಿಕಾರಿ ಡಾ. ಬಾಲಕೃಷ್ಣ ರಾವ್ ಹೇಳಿದರು.

‘ಎದೆಹಾಲು ಹೆಚ್ಚು ಇರುವ ಬಾಣಂತಿಯರು, ದಾನಿಗಳು ಎದೆಹಾಲು ಸಂಗ್ರಹ ಬ್ಯಾಂಕ್‌ಗೆ ಎದೆಹಾಲು ನೀಡಿದರೆ, ಅವಧಿಪೂರ್ವ ಜನಿಸಿದ ಮಗುವಿಗೆ ಇದನ್ನು ನೀಡಬಹುದು. ಇದರಿಂದ ಮಗುವನ್ನು ಬದುಕಿಸಿಕೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ’ ಎನ್ನುತ್ತಾರೆ ವೈದ್ಯರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಜಿಲ್ಲಾ ಪತ್ರಕರ್ತರ ಸಮ್ಮೇಳನ ಹಾಗೂ ಸಾಧನ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Next Post

ಕರಾವಳಿಯಾದ್ಯಂತ, ಕ್ರಿಸ್ಮಸ್ ಹಬ್ಬದ ಸಂಭ್ರಮ, ಚರ್ಚ್ ಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ

Related Posts

ಮಂಗಳೂರು ರಿಫೈನರಿಯ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ವದಂತಿ ತಳ್ಳಿಹಾಕಿದ ಎಂಆರ್‌ಪಿಎಲ್
ಕರಾವಳಿ

ಮಂಗಳೂರು ರಿಫೈನರಿಯ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ವದಂತಿ ತಳ್ಳಿಹಾಕಿದ ಎಂಆರ್‌ಪಿಎಲ್

March 8, 2026
10
2028ಕ್ಕೆ ರಮಾನಾಥ ರೈ ಅವರೇ ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ; ಬಂಟ್ವಾಳ ಕಂಬಳದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ
ಕರಾವಳಿ

2028ಕ್ಕೆ ರಮಾನಾಥ ರೈ ಅವರೇ ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ; ಬಂಟ್ವಾಳ ಕಂಬಳದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

March 8, 2026
34
Next Post
ಕರಾವಳಿಯಾದ್ಯಂತ, ಕ್ರಿಸ್ಮಸ್ ಹಬ್ಬದ ಸಂಭ್ರಮ, ಚರ್ಚ್ ಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ

ಕರಾವಳಿಯಾದ್ಯಂತ, ಕ್ರಿಸ್ಮಸ್ ಹಬ್ಬದ ಸಂಭ್ರಮ, ಚರ್ಚ್ ಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ

Discussion about this post

Recent News

ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ ಚಿನ್ನಾಭರಣ ಕಳವು ; ಆರೋಪಿ ಸೆರೆ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ

ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ ಚಿನ್ನಾಭರಣ ಕಳವು ; ಆರೋಪಿ ಸೆರೆ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ

March 10, 2026
47
ನ್ಯೂಜಿಲೆಂಡ್​ ಮಣಿಸಿ ಮೂರನೇ ಬಾರಿಗೆ ಟಿ20 ವಿಶ್ವ ಚಾಂಪಿಯನ್​ ಆದ ಭಾರತ!

ನ್ಯೂಜಿಲೆಂಡ್​ ಮಣಿಸಿ ಮೂರನೇ ಬಾರಿಗೆ ಟಿ20 ವಿಶ್ವ ಚಾಂಪಿಯನ್​ ಆದ ಭಾರತ!

March 9, 2026
24
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ ಚಿನ್ನಾಭರಣ ಕಳವು ; ಆರೋಪಿ ಸೆರೆ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ

ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ ಚಿನ್ನಾಭರಣ ಕಳವು ; ಆರೋಪಿ ಸೆರೆ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ

March 10, 2026
ನ್ಯೂಜಿಲೆಂಡ್​ ಮಣಿಸಿ ಮೂರನೇ ಬಾರಿಗೆ ಟಿ20 ವಿಶ್ವ ಚಾಂಪಿಯನ್​ ಆದ ಭಾರತ!

ನ್ಯೂಜಿಲೆಂಡ್​ ಮಣಿಸಿ ಮೂರನೇ ಬಾರಿಗೆ ಟಿ20 ವಿಶ್ವ ಚಾಂಪಿಯನ್​ ಆದ ಭಾರತ!

March 9, 2026
ಮಂಗಳೂರು ರಿಫೈನರಿಯ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ವದಂತಿ ತಳ್ಳಿಹಾಕಿದ ಎಂಆರ್‌ಪಿಎಲ್

ಮಂಗಳೂರು ರಿಫೈನರಿಯ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ವದಂತಿ ತಳ್ಳಿಹಾಕಿದ ಎಂಆರ್‌ಪಿಎಲ್

March 8, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d