ಮಂಗಳೂರು, ಡಿ. 24 : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಡಿಸೆಂಬರ್ 28 ರಂದು ನಡೆಯಲಿರುವ ಪತ್ರಕರ್ತರ ಜಿಲ್ಲಾ ಸಮ್ಮೇಳನ ಹಾಗೂ ಸಾಧನ ಸಂಭ್ರಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು.
ಆಮಂತ್ರಣ ಪತ್ರಿಕೆಯನ್ನು ಕನ್ನಡ ಚಲನಚಿತ್ರ ನಟಿ ರಚಿತಾರಾಮ್ ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಬಿಡುಗಡೆಗೊಳಿಸಿ ಸಮ್ಮೇಳನ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.
ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿ ಕುಮಾರ್, ಉಪ ಪೊಲೀಸ್ ಆಯುಕ್ತರಾದ ಹರಿರಾಮ್ ಶಂಕರ್, ದಿನೇಶ್, ಅನಘ ರಿಫೈನರೀಸ್ ಆಡಳಿತ ನಿರ್ದೇಶಕ ಸಾಂಬಶಿವ ರಾವ್, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಭಾಸ್ಕರ್ ರೈ ಕಟ್ಟ ಉಪಸ್ಥಿತರಿದ್ದರು.