• About us
  • Contact us
  • Disclaimer
Thursday, July 16, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಡಿ.27 ಗೋಲ್ಡ್ ಫಿಂಚ್ ಸಿಟಿಯಲ್ಲಿ 9ನೇ ವರ್ಷದ ‘ ಮಂಗಳೂರು ಕಂಬಳ ’ – ಕ್ಯಾ. ಬ್ರಿಜೇಶ್ ಚೌಟ

Coastal Times by Coastal Times
December 24, 2025
in ಕರಾವಳಿ
ಮಂಗಳೂರು: ಡಿ.27 ಗೋಲ್ಡ್ ಫಿಂಚ್ ಸಿಟಿಯಲ್ಲಿ 9ನೇ ವರ್ಷದ ‘ ಮಂಗಳೂರು ಕಂಬಳ ’ – ಕ್ಯಾ. ಬ್ರಿಜೇಶ್ ಚೌಟ
31
VIEWS
WhatsappTelegramShare on FacebookShare on Twitter

ಮಂಗಳೂರು:“9ನೇ ವರ್ಷದ ಮಂಗಳೂರು ಕಂಬಳವು ಶನಿವಾರ(ಡಿ. 27) ಬಂಗ್ರ ಕೂಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆಯಲಿದೆ” ಎಂದು ಕಂಬಳ ಸಮಿತಿಯ ಅಧ್ಯಕ್ಷ ಸಂಸದ ಕ್ಯಾ.ಬ್ರಿಜೇಶ್ ಚೌಟ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.

ಡಿ. 27 ಬೆಳಗ್ಗೆ 8.30 ಗಂಟೆಗೆ ಕಂಬಳದ ಉದ್ಘಾಟನೆ ನಡೆಯಲಿದ್ದು ಉದ್ಘಾಟನೆಯನ್ನು ಗರೋಡಿ ಬ್ರಹ್ಮ ಬೈದರ್ಕಳ ಕ್ಷೇತ್ರದ ಮೊಕ್ತೇಸರ ಚಿತ್ತರಂಜನ್ ಅವರು ದೀಪ ಬೆಳಗಿಸುವ ಮೂಲಕ ನೆರವೇರಿಸಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ರಾಘವೇಂದ್ರ ಸಹಿತ ಶಾಸಕರು, ರಾಜಕೀಯ ಸಾಮಾಜಿಕ ನೇತಾರರು ಭಾಗವಹಿಸಲಿದ್ದಾರೆ. ಕಂಬಳವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ದೇಶ ವಿದೇಶದ ಮಕ್ಕಳಿಗೆ ತುಳುನಾಡಿನ ಸಂಸ್ಕೃತಿಯ ಪರಿಚಯವಾಗಬೇಕು ಎಂಬ ನಿಟ್ಟಿನಲ್ಲಿ ಪ್ರಾರಂಭಗೊಂಡ ಕಂಬಳ 9ನೇ ವರ್ಷಕ್ಕೆ ಕಾಲಿಟ್ಟಿದ್ದು ಸಂತಸದ ವಿಚಾರ” ಎಂದರು.

ತುಳುನಾಡಿನ ಶ್ರೀಮಂತ ಸಂಸ್ಕೃತಿಯ ಭಾಗವಾಗಿರುವ ಕಂಬಳ ನೂರಾರು ವರ್ಷಗಳ ಘನ ಪರಂಪರೆಯನ್ನು ಹೊಂದಿದ್ದು, ಈ ಮಣ್ಣಿನ ಧಾರ್ಮಿಕ ಕಟ್ಟುಕಟ್ಟಳೆಗಳೊಂದಿಗೆ ಗ್ರಾಮೀಣ ಸೊಗಡನ್ನು ಸಾರುವ ಇಲ್ಲಿನ ಜನಜೀವನವನ್ನು ಪ್ರತಿಬಿಂಬಿಸುವ ಕೃಷಿಕ ಮತ್ತು ಜಾನುವಾರುಗಳ ಬದುಕಿನ ನಂಟಿನೊಂದಿಗೆ ಆರಂಭವಾದ ಸಾಂಪ್ರದಾಯಿಕ ಕ್ರೀಡೆಯು ಕಾಲಕ್ರಮೇಣ ಆಧುನಿಕತೆಗೆ ತೆರೆದುಕೊಳ್ಳುವ ಮೂಲಕ ವಿಶ್ವವ್ಯಾಪಿಯಾಗಿ ಇನ್ನಷ್ಟು ಜನಪ್ರಿಯವಾಗುತ್ತ ಬಂದಿದೆ. ಕಂಬಳವನ್ನು ನಿಷೇಧಿಸುವ ಮೂಲಕ ಇಲ್ಲಿನ ಮಣ್ಣಿನ ಮೂಲ ಸತ್ವಕ್ಕೆ ಕೊಡಲಿ ಏಟು ಕೊಟ್ಟು ನಮ್ಮ ಸಂಸ್ಕೃತಿಗೆ ಧಕ್ಕೆ ತರಲು ಯತ್ನಿಸಿದವರ ವಿರುದ್ಧ ನಡೆದ ಪ್ರಬಲ ಹೋರಾಟದಲ್ಲಿ ಹುಟ್ಟಿಕೊಂಡ ಕಿಚ್ಚು ‘ಮಂಗಳೂರು ಕಂಬಳ’ವು ಇಂದು ನವೋತ್ಸಾಹದ 9ನೇ ವರ್ಷಕ್ಕೆ ಹೆಜ್ಜೆಯನ್ನಿರಿಸಿದೆ. ಕಂಬಳ ಕ್ಷೇತ್ರವು ಇಂದು ಅನೇಕ ದಾಖಲೆಗಳ ಮೂಲಕ ಜನಾಕರ್ಷಣೆ ಪಡೆಯುತ್ತಿರುವ ಈ ಕಾಲಘಟ್ಟದಲ್ಲಿ ‘ಅಲೇ ಬುಡಿಯೆರ್’ ಎಂಬ ಝೇಂಕಾರವು ಮಾರ್ದನಿಸುವುದರ ಜೊತೆಗೆ ಕೋಣಗಳು ಓಡುವಾಗ ಕರೆಯ ನೀರು ಬಾನೆತ್ತರಕ್ಕೆ ಚಿಮ್ಮುವಂತೆ ಈ ಜನಪದ ಕ್ರೀಡೆಯ ಪರಿಮಳವು ಜಗದಗಲ ಪಸರಿಸಲಿ ಎಂಬ ಆಶಾವಾದದೊಂದಿಗೆ ಮಂಗಳೂರು ಕಂಬಳಕ್ಕೆ ತಮ್ಮನ್ನು ಪ್ರೀತಿಯಿಂದ ಆಹ್ವಾನಿಸುತ್ತಿದ್ದೇವೆ.

ಉದ್ಘಾಟನೆ : ಶನಿವಾರ, 27-12-2025 ಬೆಳಿಗ್ಗೆ ಘಂಟೆ 8.30, ಸಭಾ ಕಾರ್ಯಕ್ರಮ : ಶನಿವಾರ, 27-12-2025 ಸಂಜೆ ಘಂಟೆ 6.00, ಬಹುಮಾನ ವಿತರಣೆ : ರವಿವಾರ, 28-12-2025 ಬೆಳಿಗ್ಗೆ ಘಂಟೆ 8.00ಗೆ

ಮಂಗಳೂರು ಕಂಬಳಕ್ಕೆ 9 ವರ್ಷ ಪೂರೈಸಿದ ಹಿನ್ನಲೆಯಲ್ಲಿ ನವ ವರುಷ ನವ ವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
1. ರಾಣಿ ಅಬ್ಬಕ್ಕ – ಚಾರಿತ್ರಿಕ ಚಿತ್ರಕಲಾ ಪ್ರದರ್ಶನ – ಪೋರ್ಚುಗೀಸರ ವಿರುದ್ಧ ದಿಟ್ಟತನದಿಂದ ಹೋರಾಟ ಮಾಡಿದ ತೌಳವ ಮಣ್ಣಿನ ಹೆಮ್ಮೆಯ ರಾಣಿ “ರಾಣಿ ಅಬ್ಬಕ್ಕ” ರವರ ಚಾರಿತ್ರಿಕ ಚಿತ್ರಕಲಾ ಪ್ರದರ್ಶನ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಪ್ರೊ. ತುಕರಾಮ ಪೂಜಾರಿಯವರ ಸಹಯೋಗದಿಂದ ನಡೆಯಲಿದೆ.
2. ವಂದೇ ಮಾತರಂ 150 – ಸಾಮೂಹಿಕ ಗೀತ ಗಾಯನ – ಭಾರತ ಸ್ವಾತಂತ್ರದ ಧ್ಯೇಯ ಮಂತ್ರ ವಂದೇ ಮಾತರಂ ಗೀತೆಗೆ 150 ವರ್ಷ ಪೂರೈಸಿದ ಹಿನ್ನಲೆಯಲ್ಲಿ 150 ವಿದ್ಯಾರ್ಥಿನಿಯರಿಂದ ವಂದೇ ಮಾತರಂ ಸಾಮೂಹಿಕ ಗೀತ ಗಾಯನ – ಬೆಳಿಗ್ಗೆ 8.30ಕ್ಕೆ ನಡೆಯಲಿದೆ.
3. ಮಂಗಳೂರು ಕಂಬಳ ಪ್ರಶಸ್ತಿ 2025- ಉದ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಹಾಗೂ ‘ಬ್ಯಾಕ್ ಟು ಊರು’ ಪರಿಕಲ್ಪನೆಗೆ ಶಕ್ತಿ ತುಂಬುತ್ತಿರುವ 9 ಮಂದಿಗೆ ಮಂಗಳೂರು ಕಂಬಳ ಪ್ರಶಸ್ತಿ ೨೦೨೫ ನೀಡಿ ಗೌರವಿಸಲಾಗುವುದು.
4. ಏಕ್ ಪೇಡ್ ಮಾ ಕೆ ನಾಮ್ – ತಾಯಿಯ ಹೆಸರಿನಲ್ಲಿ ಒಂದು ಗಿಡ – ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ನವ ಸಂಕಲ್ಪಗಳಲ್ಲಿ ಒಂದಾಗಿರುವ ‘ಏಕ್ ಪೇಡ್ ಮಾ ಕೆ ನಾಮ್ – ತಾಯಿಯ ಹೆಸರಿನಲ್ಲಿ ಒಂದು ಗಿಡ’ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು.
5. ವಿಶೇಷ ಸಾಮರ್ಥ್ಯ ಹಾಗೂ ಓಲ್ಡ್ ಏಜ್ಡ್ ಹೋಮ್‌ನಲ್ಲಿ ನೆಲೆಸಿರುವ ಮಂಗಳೂರು ನಗರ ಪರಿಸರದ ನಿವಾಸಿಗಳನ್ನು ಕರೆತಂದು ಕಂಬಳ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗುವುದು.
6. ರಂಗ್‌ದ ಕೂಟ – ಹೆಸರಿನಲ್ಲಿ ಚಿತ್ರಕಲಾ ಸ್ಪರ್ಧೆಯು ರಂಗ್‌ದ ಕಿನ್ಯ, ರಂಗ್‌ದ ಎಲ್ಯ, ರಂಗ್‌ದ ಮಲ್ಲ ಹಾಗೂ ರಂಗ್‌ದ ಕೂಟ ವಿಭಾಗಗಳಲ್ಲಿ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12.30ರ ತನಕ ನಡೆಯಲಿರುತ್ತದೆ.
7. ಮಂಗಳೂರು ಕಂಬಳ 2025 ರೀಲ್ಸ್ – ಮಂಗಳೂರು ಕಂಬಳದ ಕ್ಷಣಗಳನ್ನು ರೀಲ್ಸ್ ಮಾಡುವ ಮೂಲಕ ಅತೀ ಹೆಚ್ಚು ವೀಕ್ಷಣೆ ಪಡೆಯುವ ರೀಲ್ಸ್ಗೆ ಬಹುಮಾನವನ್ನು ನೀಡಲಾಗುವುದು.
8. ಮಂಗಳೂರು ಕಂಬಳ ಫೋಟೊಗ್ರಾಫಿ – ಫೋಟೋಗ್ರಾಫಿ ಸ್ಪರ್ಧೆ ಆಯೋಜನೆ ಮಾಡಲಾಗಿದ್ದು, ನುರಿತ ತೀರ್ಪುಗಾರರ ಮೂಲಕ ಆಯ್ಕೆಯಾದ ಚಿತ್ರಕ್ಕೆ ನಗದು ಬಹುಮಾನ ನೀಡಲಾಗುವುದು.
9. ಎಐ ಕ್ರಿಯೇಟಿವ್ ಎಡಿಷನ್ – ಕೃತಕ ಬುದ್ಧಿಮತ್ತೆ (ಎಐ) ಉಪಯೋಗಿಸಿ ಮಂಗಳೂರು ಕಂಬಳ ಕಲಾಕೃತಿಯ ರಚಿಸುವ ಸ್ಪರ್ಧೆ ನಡೆಯಲಿದ್ದು ಉತ್ತಮ ಕಲಾಕೃತಿಗೆ ಬಹುಮಾನ ನೀಡಲಾಗುವುದು.

ಪತ್ರಿಕಾಗೋಷ್ಟಿಯಲ್ಲಿ ಪ್ರಸಾದ್ ಕುಮಾರ್ ಶೆಟ್ಟಿ, ವಿಜಯ ಕುಮಾರ್ ಕೆಂಗಿನ ಮನೆಗೆ, ಕಿರಣ್ ಕೋಡಿಕಲ್, ಸಂಜಯ್ ಪ್ರಭು, ವಸಂತ ಪೂಜಾರಿ, ನಂದನ್ ಮಲ್ಯ, ಸಚಿನ್ ಶೆಟ್ಟಿ, ಈಶ್ವರ್, ಸುಜಿತ್ ಕುಮಾರ್ ಮಂಗಲ್ಪಾಡಿ ಮತ್ತಿತರರು ಉಪಸ್ಥಿತರಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಷೇರು ಮಾರುಕಟ್ಟೆಯ ಲಾಭದ ಆಮಿಷ; 85.68 ಲಕ್ಷ ರೂ. ವಂಚನೆ

Next Post

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಸುಧಾಕರ ಸುವರ್ಣ ಅವಿರೋಧ ಆಯ್ಕೆ

Related Posts

ಬಂಟ್ವಾಳ ರೈಲ್ವೆ ನಿಲ್ದಾಣಕ್ಕೆ ಹೊಸ ರೂಪ! ಜುಲೈ 17 ಕ್ಕೆ ಪ್ರಧಾನಿ ಮೋದಿಯಿಂದ ಲೋಕಾರ್ಪಣೆ
ಕರಾವಳಿ

ಬಂಟ್ವಾಳ ರೈಲ್ವೆ ನಿಲ್ದಾಣಕ್ಕೆ ಹೊಸ ರೂಪ! ಜುಲೈ 17 ಕ್ಕೆ ಪ್ರಧಾನಿ ಮೋದಿಯಿಂದ ಲೋಕಾರ್ಪಣೆ

July 13, 2026
30
“Mangalore IAS – A School for Civil Services” ಸಂಸ್ಥೆ ಉದ್ಘಾಟನೆ
ಕರಾವಳಿ

“Mangalore IAS – A School for Civil Services” ಸಂಸ್ಥೆ ಉದ್ಘಾಟನೆ

July 12, 2026
47
Next Post
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಸುಧಾಕರ ಸುವರ್ಣ ಅವಿರೋಧ ಆಯ್ಕೆ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಸುಧಾಕರ ಸುವರ್ಣ ಅವಿರೋಧ ಆಯ್ಕೆ

Discussion about this post

Recent News

FIFA World Cup 2026: ಫ್ರಾನ್ಸ್ ವಿರುದ್ಧ 2-0 ಅಂತರದ ಗೆದ್ದು ವಿಶ್ವಕಪ್ ಫೈನಲ್‌ ಪ್ರವೇಶಿಸಿದ ಸ್ಪೇನ್​

FIFA World Cup 2026: ಫ್ರಾನ್ಸ್ ವಿರುದ್ಧ 2-0 ಅಂತರದ ಗೆದ್ದು ವಿಶ್ವಕಪ್ ಫೈನಲ್‌ ಪ್ರವೇಶಿಸಿದ ಸ್ಪೇನ್​

July 15, 2026
30
ಹಾರ್ಮುಜ್ ಜಲಸಂಧಿಯಲ್ಲಿ ದಾಳಿಗೆ ಒಬ್ಬ ಭಾರತೀಯ ಸಿಬ್ಬಂದಿ ಸಾವು, ಆರು ಜನರಿಗೆ ಗಾಯ

ಹಾರ್ಮುಜ್ ಜಲಸಂಧಿಯಲ್ಲಿ ದಾಳಿಗೆ ಒಬ್ಬ ಭಾರತೀಯ ಸಿಬ್ಬಂದಿ ಸಾವು, ಆರು ಜನರಿಗೆ ಗಾಯ

July 15, 2026
14
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

FIFA World Cup 2026: ಫ್ರಾನ್ಸ್ ವಿರುದ್ಧ 2-0 ಅಂತರದ ಗೆದ್ದು ವಿಶ್ವಕಪ್ ಫೈನಲ್‌ ಪ್ರವೇಶಿಸಿದ ಸ್ಪೇನ್​

FIFA World Cup 2026: ಫ್ರಾನ್ಸ್ ವಿರುದ್ಧ 2-0 ಅಂತರದ ಗೆದ್ದು ವಿಶ್ವಕಪ್ ಫೈನಲ್‌ ಪ್ರವೇಶಿಸಿದ ಸ್ಪೇನ್​

July 15, 2026
ಹಾರ್ಮುಜ್ ಜಲಸಂಧಿಯಲ್ಲಿ ದಾಳಿಗೆ ಒಬ್ಬ ಭಾರತೀಯ ಸಿಬ್ಬಂದಿ ಸಾವು, ಆರು ಜನರಿಗೆ ಗಾಯ

ಹಾರ್ಮುಜ್ ಜಲಸಂಧಿಯಲ್ಲಿ ದಾಳಿಗೆ ಒಬ್ಬ ಭಾರತೀಯ ಸಿಬ್ಬಂದಿ ಸಾವು, ಆರು ಜನರಿಗೆ ಗಾಯ

July 15, 2026
ಸುರತ್ಕಲ್​ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆ

ಸುರತ್ಕಲ್​ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆ

July 15, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d