ಮಂಗಳೂರು, ಜ 25 : ಕದ್ರಿ ಪೊಲೀಸ್ ಠಾಣೆಯ ಎಎಸ್‌ಐ ವಿಜಯ್ ಕಾಂಚನ್ ಅವರು ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ.
ಕದ್ರಿ ಪೊಲೀಸ್ ಠಾಣೆಯ ಎಎಸ್‌ಐ ವಿಜಯ್ ಕಾಂಚನ್ ಅವರು ತಮ್ಮ ಸೇವಾವಧಿಯಲ್ಲಿ ಸಲ್ಲಿಸಿರುವ ಸಾಧನೆಗಳನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.ಈ ಕುರಿತು ಮಂಗಳೂರು ಕಮಿಷನರ್ ಶಶಿಕುಮಾರ್ ಅವರು ಟ್ವೀಟ್ ಮಾಡಿ, ವಿಜಯ್ ಕಾಂಚನ್ ಅವರರನ್ನು ಅಭಿನಂದಿಸಿದ್ದಾರೆ.