ಅಸ್ಸಾಂ: ಭಾರತದ ಲೆಜೆಂಡರಿ ಬಾಕ್ಸರ್ ಮೇರಿ ಕೋಮ್ ಅವರು ಬುಧವಾರ, ಜನವರಿ 24ರಂದು ಬಾಕ್ಸಿಂಗ್‌ನಿಂದ ನಿವೃತ್ತಿಯಾಗುವ ನಿರ್ಧಾರವನ್ನು ಪ್ರಕಟಿಸಿದರು.
ಅರು ಬಾರಿ ವಿಶ್ವ ಚಾಂಪಿಯನ್ ಮತ್ತು 2012ರ ಒಲಿಂಪಿಕ್ ಪದಕ ವಿಜೇತೆ ಹಾಗೂ ಸ್ಟಾರ್ ಇಂಡಿಯಾ ಬಾಕ್ಸರ್ ಮಾಂಗ್ಟೆ ಚುಂಗ್ನೈಜಾಂಗ್ ಮೇರಿ ಕೋಮ್ ಬುಧವಾರ ಬಾಕ್ಸಿಂಗ್‌ಗೆ ನಿವೃತ್ತಿ ಘೋಷಿಸಿದ್ದಾರೆ. ತಮ್ಮ ಕೈಗವಸು ಕಳಚಿ ಗೋಡೆಗೆ ನೇತು ಹಾಕಿದ್ದಾರೆ. ಅಂತರರಾಷ್ಟ್ರೀಯ ಬಾಕ್ಸಿಂಗ್ ಅಸೋಸಿಯೇಷನ್ ನಿಯಮಗಳ ಪ್ರಕಾರ ಪುರುಷ ಮತ್ತು ಮಹಿಳಾ ಬಾಕ್ಸರ್ಗಳು 40 ವರ್ಷ ವಯಸ್ಸಿನವರೆಗೆ ಮಾತ್ರ ಸ್ಪರ್ಧಿಸಲು ಅವಕಾಶ ನೀಡಲಾಗುತ್ತದೆ. ತಮಗೆ ಆಡುವ ಹಂಬಲ ಇದ್ದರೂ 41 ವರ್ಷದ ಮೇರಿ ಕೋಮ್, ನಿಯಮಗಳ ಪ್ರಕಾರ ವಯಸ್ಸಿನ ಮಿತಿಯಿಂದ ತನ್ನ ವೃತ್ತಿಜೀವನಕ್ಕೆ ತೆರೆ ಎಳೆದಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ‘ನಾನು ನನ್ನ ಜೀವನದಲ್ಲಿ ಎಲ್ಲವನ್ನೂ ಸಾಧಿಸಿದ್ದೇನೆ. ನನಗೆ ಇನ್ನೂ ಸ್ಪರ್ಧಿಸುವ ಹಸಿವು ಇದೆ, ಆದರೆ ಅಂತರಾಷ್ಟ್ರೀಯ ಬಾಕ್ಸಿಂಗ್ ಫೆಡರೇಶನ್ ನಿಯಮಗಳು ನನಗೆ ಹಾಗೆ ಮಾಡಲು ಅನುಮತಿಸುವುದಿಲ್ಲ. ಪುರುಷ ಮತ್ತು ಮಹಿಳಾ ಬಾಕ್ಸರ್‌ಗಳಿಗೆ 40 ವರ್ಷ ವಯಸ್ಸಿನವರೆಗೆ ಮಾತ್ರ ಬಾಕ್ಸಿಂಗ್ ನಲ್ಲಿ ಸ್ಪರ್ಧಿಸಲು ಅವಕಾಶವಿದೆ, ಆದ್ದರಿಂದ ನಾನು ಈಗ ಯಾವುದೇ ದೊಡ್ಡ ಪಂದ್ಯಾವಳಿಯಲ್ಲಿ ಭಾಗವಹಿಸಲು ಸಾಧ್ಯವಿಲ್ಲ ಎಂದು ಹೇಳಿಕೊಂಡಿದ್ದಾರೆ.ಮೇರಿ ಕೋಮ್ ಅವರಿಗೆ 41 ವರ್ಷ ತುಂಬಿದೆ. ಅವರು 2012 ರ ಲಂಡನ್ ಒಲಿಂಪಿಕ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಕಂಚಿನ ಪದಕವನ್ನು ಗೆದ್ದರು. 6 ಬಾರಿ ವಿಶ್ವ ಚಾಂಪಿಯನ್ ಕೂಡ ಆಗಿದ್ದಾರೆ. ಈ ಸಾಧನೆ ಮಾಡಿದ ಏಕೈಕ ಮಹಿಳಾ ಬಾಕ್ಸರ್ ಮೇರಿ ಕೋಮ್. ಇದಲ್ಲದೆ 5 ಬಾರಿ ಏಷ್ಯನ್ ಚಾಂಪಿಯನ್‌ಶಿಪ್ ಗೆದ್ದ ಏಕೈಕ ಆಟಗಾರ್ತಿ ಕೂಡ ಆಗಿದ್ದಾರೆ.
ಎಐಬಿಎ (AIBA) ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್ ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಆಟಗಾರ್ತಿ ಎನಿಸಿದ್ದಾರೆ. 2005, 2006, 2008 ಮತ್ತು 2010ರ ಸೀಸನ್ಗಳಲ್ಲಿ ವಿಶ್ವ ಚಾಂಪಿಯನ್ ಶಿಪ್ ಪ್ರಶಸ್ತಿ ಗೆದ್ದಿದ್ದಾರೆ. 2008ರಲ್ಲಿ ಪ್ರಶಸ್ತಿ ಗೆದ್ದ ನಂತರ ಮೇರಿ ಅವಳಿ ಮಕ್ಕಳಿಗೆ ಜನ್ಮ ನೀಡಿದರು. ಇದರಿಂದ ಕೆಲ ಕಾಲ ಬಾಕ್ಸಿಂಗ್‌ನಿಂದ ವಿರಾಮ ತೆಗೆದುಕೊಂಡಿದ್ದರು.
Discover more from Coastal Times Kannada
Subscribe to get the latest posts sent to your email.
Discussion about this post