• About us
  • Contact us
  • Disclaimer
Friday, July 31, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಚೈತ್ರಾ ಹೆಬ್ಬಾರ್ ನಾಪತ್ತೆ ಕೇಸ್ ಗೆ ಬಿಗ್ ಟ್ವಿಸ್ಟ್: ಗಾಂಜಾ ನಂಟು,ಮುಸ್ಲಿಂ ಯುವಕನ ಸ್ನೇಹ, ಸುರತ್ಕಲ್ ನಲ್ಲಿ ಯುವತಿ ಸ್ಕೂಟರ್ ಪತ್ತೆ

Coastal Times by Coastal Times
February 25, 2024
in ಕ್ರೈಮ್ ನ್ಯೂಸ್
ಚೈತ್ರಾ ಹೆಬ್ಬಾರ್ ನಾಪತ್ತೆ ಕೇಸ್ ಗೆ ಬಿಗ್ ಟ್ವಿಸ್ಟ್: ಗಾಂಜಾ ನಂಟು,ಮುಸ್ಲಿಂ ಯುವಕನ ಸ್ನೇಹ, ಸುರತ್ಕಲ್ ನಲ್ಲಿ ಯುವತಿ ಸ್ಕೂಟರ್ ಪತ್ತೆ
996
VIEWS
WhatsappTelegramShare on FacebookShare on Twitter

ಮಂಗಳೂರು, ಫೆ.24: ಪಿಎಚ್ ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್(27) ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪುತ್ತೂರು ಮೂಲದ ಮುಸ್ಲಿಂ ಯುವಕ ಶಾರೂಕ್ ಶೇಕ್ ಎಂಬಾತನ ಜೊತೆಗೆ ತೆರಳಿರುವ ಅನುಮಾನ ದಟ್ಟವಾಗಿದೆ. ಎಂಎಸ್ಸಿ ಪೂರೈಸಿದ್ದ ಚೈತ್ರಾ ಹೆಬ್ಬಾರ್ ದೇರಳಕಟ್ಟೆಯ ಖಾಸಗಿ ಯುನಿವರ್ಸಿಟಿಯಲ್ಲಿ ಪಿಎಚ್ ಡಿ ಮಾಡುತ್ತಿದ್ದಳು. ಕೋಟೆಕಾರು ಬಳಿಯ ಮಾಡೂರಿನಲ್ಲಿ ಪಿಜಿ ಒಂದರಲ್ಲಿದ್ದ ಯುವತಿಗೆ ಮುಸ್ಲಿಂ ಯುವಕನ ಜೊತೆಗೆ ಸ್ನೇಹ ಇತ್ತು ಎನ್ನಲಾಗಿದೆ. ಫೆ.17ರಂದು ತನ್ನ ಸ್ಕೂಟರಿನಲ್ಲಿ ಹೋದಾಕೆ ಮರಳಿ ಬಂದಿರಲಿಲ್ಲ. ಈಕೆಯ ತಂದೆ ತೀರಿಕೊಂಡಿದ್ದರಿಂದ ಮಂಗಳೂರಿನಲ್ಲಿ ನೆಲೆಸಿದ್ದ ದೊಡ್ಡಪ್ಪನೇ ಶಿಕ್ಷಣ ಮಾಡಿಸುತ್ತಿದ್ದರು. ಯುವತಿ ನಾಪತ್ತೆ ವಿಷಯ ತಿಳಿದು ಮರುದಿನ ಉಳ್ಳಾಲ ಠಾಣೆಗೆ ದೂರು ನೀಡಿದ್ದರು.

ಶಾರೂಕ್ ಶೇಖ್ ಬಂಟ್ವಾಳದ ನೇರಳಕಟ್ಟೆ ನಿವಾಸಿಯಾಗಿದ್ದು, ಈ ಹಿಂದೆ ಸೌದಿ ಅರೇಬಿಯಾ, ಕತಾರಿನಲ್ಲಿ ಕೆಲಸಕ್ಕಿದ್ದು ಆನಂತರ ಊರಿನಲ್ಲಿಯೇ ನೆಲೆಸಿದ್ದ. ಕತಾರಿನಲ್ಲಿದ್ದಾಗ ಪ್ರಕರಣ ಒಂದರಲ್ಲಿ ಸಿಕ್ಕಿಬಿದ್ದು ಜೈಲು ಪಾಲಾಗಿದ್ದ ಎನ್ನುವ ಮಾಹಿತಿಯೂ ಇದೆ. ಆನಂತರ ಊರಿಗೆ ಬಂದು ಗಾಂಜಾ ವಹಿವಾಟಿನಲ್ಲಿ ತೊಡಗಿಸಿಕೊಂಡಿದ್ದ ಎನ್ನಲಾಗುತ್ತಿದ್ದು, ಚೈತ್ರಾಗೂ ಗಾಂಜಾ. ಡ್ರಗ್ಸ್ ಅಮಲು ಹತ್ತಿಸಿದ್ದ ಎನ್ನುವ ಮಾತು ಕೇಳಿಬರುತ್ತಿದೆ.

ಚೈತ್ರಾ ಪುತ್ತೂರು ಮೂಲದ ಯುವತಿಯಾಗಿದ್ದು, ಮಂಗಳೂರಿನಲ್ಲಿಯೇ ಶಿಕ್ಷಣ ಪೂರೈಸಿದ್ದಳು. ಇದೀಗ ಶಾರೂಕ್ ಶೇಖ್ ತೆಕ್ಕೆಗೆ ಬಿದ್ದು ಆತನ ಜೊತೆಗೆ ಪರಾರಿಯಾಗಿದ್ದಾಳೆ ಎನ್ನಲಾಗುತ್ತಿದೆ. ಚೈತ್ರಾಳ ಸ್ಕೂಟರ್ ಎರಡು ದಿನಗಳ ಹಿಂದೆ ಸುರತ್ಕಲ್ ಬಳಿ ಪತ್ತೆಯಾಗಿದ್ದು, ಅದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆಕೆಯ ಬ್ಯಾಂಕ್ ಖಾತೆಯಿಂದ ಸುರತ್ಕಲ್ ನಲ್ಲಿ ಎಟಿಎಂ ಒಂದರಿಂದ ಎರಡು ಲಕ್ಷ ರೂಪಾಯಿ ಹಣ ಡ್ರಾ ಮಾಡಲಾಗಿದೆ ಎನ್ನುವ ಮಾಹಿತಿಯನ್ನು ಪೊಲೀಸರು ಕಲೆ ಹಾಕಿದ್ದಾರೆ. ಸದ್ಯ ಆಕೆಯ ಬ್ಯಾಂಕ್ ಖಾತೆಯನ್ನು ಬ್ಲಾಕ್ ಮಾಡಿದ್ದಾರೆ. ಇವರು ಬೆಂಗಳೂರಿಗೆ ಪರಾರಿಯಾಗಿದ್ದಾರೆ ಎನ್ನಲಾಗುತ್ತಿದ್ದು, ಪೊಲೀಸರು ಬೆನ್ನು ಹತ್ತಿದ್ದಾರೆ.

ಚೈತ್ರಾಗೆ ಪಿಎಚ್ ಡಿ ಫೆಲೋಶಿಪ್ ಹೆಸರಲ್ಲಿ ತಿಂಗಳಿಗೆ 40 ಸಾವಿರ ರೂ.ನಷ್ಟು ಸ್ಟೈಪಂಡ್ ಬರುತ್ತಿತ್ತು. ಹೀಗಾಗಿ ಬೇಕಾಬಿಟ್ಟಿ ಖರ್ಚು ಮಾಡುತ್ತಿದ್ದಳು. ಅತ್ತ ಶಾರೂಕ್ ಶೇಖ್ ಕೈಯಲ್ಲಿ ಏನೂ ಇಲ್ಲದಿದ್ದರೂ, ಆಕೆಯ ದುಡ್ಡನ್ನೇ ಪಡೆದು ಖರ್ಚು ಮಾಡುತ್ತಿದ್ದಾರೆ ಎನ್ನುವ ಶಂಕೆಯಿದೆ. ಇತ್ತ ಸುಶಿಕ್ಷಿತ ಬ್ರಾಹ್ಮಣ ಯುವತಿ ಮುಸ್ಲಿಂ ಯುವಕನ ಜೊತೆ ಹೋಗಿದ್ದಾಳೆ ಎನ್ನುವುದು ಕುಟುಂಬಸ್ಥರನ್ನು ಕಂಗಾಲಾಗಿಸಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಹಿಳೆಯ ಚಿನ್ನದ ಸರ ಎಗರಿಸಿದ್ದ ಕಾಸರಗೋಡು ಮೂಲದ ಕುಖ್ಯಾತ ಕಳ್ಳರಿಬ್ಬರ ಸೆರೆ

Next Post

“ಎಲ್ಲಾ ಮಕ್ಕಳು ಒಂದೇ ಎನ್ನುತ್ತೇವೆ. ಆದರೆ ಶಿಕ್ಷಣದಲ್ಲಿ ತಾರತಮ್ಯ ಯಾಕೆ? : ಜಸ್ಟೀಸ್ ಎಚ್.ಎನ್. ನಾಗಮೋಹನದಾಸ್

Related Posts

ಮಂಗಳೂರು ಪೊಲೀಸರಿಂದ 82 ಕೋಟಿ ರೂ ಮೌಲ್ಯದ ಮಾದಕ ವಸ್ತುಗಳ ನಾಶ!
ಕ್ರೈಮ್ ನ್ಯೂಸ್

ಮಂಗಳೂರು ಪೊಲೀಸರಿಂದ 82 ಕೋಟಿ ರೂ ಮೌಲ್ಯದ ಮಾದಕ ವಸ್ತುಗಳ ನಾಶ!

July 29, 2026
68
ಬಂಟ್ವಾಳ: ಚಿನ್ನದಾಸೆಗೆ ವೃದ್ಧ ಮಹಿಳೆಗೆ ವಿಷವುಣಿಸಿ, ಉಸಿರುಗಟ್ಟಿಸಿ ಕೊಲೆ ಪ್ರಕರಣ; ಮೂವರಿಗೆ ಜೀವಾವಧಿ ಶಿಕ್ಷೆ
ಕ್ರೈಮ್ ನ್ಯೂಸ್

ಬಂಟ್ವಾಳ: ಚಿನ್ನದಾಸೆಗೆ ವೃದ್ಧ ಮಹಿಳೆಗೆ ವಿಷವುಣಿಸಿ, ಉಸಿರುಗಟ್ಟಿಸಿ ಕೊಲೆ ಪ್ರಕರಣ; ಮೂವರಿಗೆ ಜೀವಾವಧಿ ಶಿಕ್ಷೆ

July 29, 2026
30
Next Post
“ಎಲ್ಲಾ ಮಕ್ಕಳು ಒಂದೇ ಎನ್ನುತ್ತೇವೆ. ಆದರೆ ಶಿಕ್ಷಣದಲ್ಲಿ ತಾರತಮ್ಯ ಯಾಕೆ? : ಜಸ್ಟೀಸ್ ಎಚ್.ಎನ್. ನಾಗಮೋಹನದಾಸ್

"ಎಲ್ಲಾ ಮಕ್ಕಳು ಒಂದೇ ಎನ್ನುತ್ತೇವೆ. ಆದರೆ ಶಿಕ್ಷಣದಲ್ಲಿ ತಾರತಮ್ಯ ಯಾಕೆ? : ಜಸ್ಟೀಸ್ ಎಚ್.ಎನ್. ನಾಗಮೋಹನದಾಸ್

Discussion about this post

Recent News

ಧರ್ಮಸ್ಥಳದ ಬಂಗ್ಲೆ ಗುಡ್ಡದಲ್ಲಿ ಅಸ್ಥಿಪಂಜರ ಸಿಕ್ಕಿರುವ ಪ್ರಕರಣ; DNA ಪರೀಕ್ಷೆಯಲ್ಲಿ ಬಯಲಾಯ್ತು 3 ಅಸ್ಥಿಪಂಜರಗಳ ರಹಸ್ಯ!

ಧರ್ಮಸ್ಥಳದ ಬಂಗ್ಲೆ ಗುಡ್ಡದಲ್ಲಿ ಅಸ್ಥಿಪಂಜರ ಸಿಕ್ಕಿರುವ ಪ್ರಕರಣ; DNA ಪರೀಕ್ಷೆಯಲ್ಲಿ ಬಯಲಾಯ್ತು 3 ಅಸ್ಥಿಪಂಜರಗಳ ರಹಸ್ಯ!

July 30, 2026
58
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ, ಅವೈಜ್ಞಾನಿಕ ಕಾಮಗಾರಿ, ಅಡಿಕೆ ತೋಟಕ್ಕೆ ನುಗ್ಗಿದ ಮಳೆನೀರು

ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ, ಅವೈಜ್ಞಾನಿಕ ಕಾಮಗಾರಿ, ಅಡಿಕೆ ತೋಟಕ್ಕೆ ನುಗ್ಗಿದ ಮಳೆನೀರು

July 30, 2026
26
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಧರ್ಮಸ್ಥಳದ ಬಂಗ್ಲೆ ಗುಡ್ಡದಲ್ಲಿ ಅಸ್ಥಿಪಂಜರ ಸಿಕ್ಕಿರುವ ಪ್ರಕರಣ; DNA ಪರೀಕ್ಷೆಯಲ್ಲಿ ಬಯಲಾಯ್ತು 3 ಅಸ್ಥಿಪಂಜರಗಳ ರಹಸ್ಯ!

ಧರ್ಮಸ್ಥಳದ ಬಂಗ್ಲೆ ಗುಡ್ಡದಲ್ಲಿ ಅಸ್ಥಿಪಂಜರ ಸಿಕ್ಕಿರುವ ಪ್ರಕರಣ; DNA ಪರೀಕ್ಷೆಯಲ್ಲಿ ಬಯಲಾಯ್ತು 3 ಅಸ್ಥಿಪಂಜರಗಳ ರಹಸ್ಯ!

July 30, 2026
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ, ಅವೈಜ್ಞಾನಿಕ ಕಾಮಗಾರಿ, ಅಡಿಕೆ ತೋಟಕ್ಕೆ ನುಗ್ಗಿದ ಮಳೆನೀರು

ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ, ಅವೈಜ್ಞಾನಿಕ ಕಾಮಗಾರಿ, ಅಡಿಕೆ ತೋಟಕ್ಕೆ ನುಗ್ಗಿದ ಮಳೆನೀರು

July 30, 2026
ಮಂಗಳೂರು ಪೊಲೀಸರಿಂದ 82 ಕೋಟಿ ರೂ ಮೌಲ್ಯದ ಮಾದಕ ವಸ್ತುಗಳ ನಾಶ!

ಮಂಗಳೂರು ಪೊಲೀಸರಿಂದ 82 ಕೋಟಿ ರೂ ಮೌಲ್ಯದ ಮಾದಕ ವಸ್ತುಗಳ ನಾಶ!

July 29, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d