ಮುಂಬೈ: ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್(ಸಿಎಸ್ ಕೆ) ತಂಡದ ನಾಯಕ ಸ್ಥಾನಕ್ಕೆ ಗುರುವಾರ ರಾಜೀನಾಮೆ ನೀಡಿದ್ದು, ಚೆನ್ನೈ ತಂಡದ ನೂತನ ನಾಯಕರಾಗಿ ರವೀಂದ್ರ ಜಡೇಜಾ ಅವರು ನೇಮಕಗೊಂಡಿದ್ದಾರೆ.
ಈ ಬಗ್ಗೆ ಚೆನ್ನೈ ಸೂಪರ್ ಕಿಂಗ್ಸ್ ಟ್ವೀಟ್ ಮಾಡಿದ್ದು, ಎಂಎಸ್ ಧೋನಿ ಅವರು ತಂಡದ ನಾಯಕತ್ವವನ್ನು ರವೀಂದ್ರ ಜಡೇಜಾ ಅವರಿಗೆ ವರ್ಗಾಯಿಸಿದ್ದಾರೆ ಎಂದು ಹೇಳಿದೆ.
ಇದಕ್ಕು ಮುನ್ನ ಮುಂಬರುವ ಐಪಿಎಲ್‌ನಲ್ಲಿ ಹಿರಿಯ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಅವರು ಒಂದೋ ಅಥವಾ ಎರಡೋ ಪಂದ್ಯಗಳಿಂದ ಬ್ರೇಕ್ ತೆಗೆದುಕೊಳ್ಳಲು ನಿರ್ಧರಿಸಿದರೆ ರವೀಂದ್ರ ಜಡೇಜಾ ಅವರು ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕತ್ವ ವಹಿಸಿಕೊಳ್ಳಲು ಸಿದ್ಧರಾಗಿದ್ದಾರೆ ಎಂದು ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಅವರು ಹೇಳಿದ್ದರು.
2008ರಲ್ಲಿ ಆರಂಭವಾದ ಐಪಿಎಲ್ ಲೀಗ್‌ನ ಆರಂಭದಿಂದಲೂ ಸಿಎಸ್‌ಕೆ ನಾಯಕರಾಗಿರುವ ಧೋನಿ ಅವರಿಗೆ ಇದು ಐಪಿಎಲ್ ಕೊನೆಯ ಆವೃತ್ತಿ ಆಗಬಹುದು. ಅವರು ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗಿದ್ದಾರೆ.
“ಕಳೆದ ಕೆಲವು ವರ್ಷಗಳಿಂದ ರವೀಂದ್ರ ಜಡೇಜಾ ಅವರು ಪ್ರಬುದ್ಧ ಆಟಗಾರನಾಗಿ ಹೊರಹೊಮ್ಮಿದ್ದು, ಅವರ ಆಟಕ್ಕೆ ಸಂಬಂಧಿಸಿದಂತೆ ಹೊಂದಾಣಿಕೆ ಮಾಡಿಕೊಳ್ಳುವ ರೀತಿ ಮತ್ತು ಪಂದ್ಯದ ಸಂದರ್ಭಗಳನ್ನು ಅರ್ಥ ಮಾಡಿಕೊಳ್ಳುವ ರೀತಿ ಅದ್ಭುತವಾಗಿದೆ. ಧೋನಿ ಬ್ರೇಕ್ ತೆಗೆದುಕೊಳ್ಳಲು ನಿರ್ಧರಿಸಿದರೆ ನಾಯಕತ್ವವನ್ನು ಜಡೇಜಾಗೆ ಹಸ್ತಾಂತರಿಸಿದರೆ ನಾನು ಆಶ್ಚರ್ಯಪಡುವುದಿಲ್ಲ” ಎಂದು ಗವಾಸ್ಕರ್ ಅವರು ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಪ್ರಸಾರವಾದ ಗೇಮ್‌ಪ್ಲಾನ್ ಸಂಚಿಕೆಯಲ್ಲಿ ಹೇಳಿದ್ದರು.
Discover more from Coastal Times Kannada
Subscribe to get the latest posts sent to your email.
Discussion about this post