ಮಂಗಳೂರು, ಮಾ.24: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಿದ್ದನ್ನು ಖಂಡಿಸಿ ಮಂಗಳೂರಿನ ಲಾಲ್ ಬಾಗ್ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಬಿಜೆಪಿಗೆ ಧಿಕ್ಕಾರ ಕೂಗಿದ್ದಾರೆ. ಬ್ಲ್ಯಾಕ್ ಡೇ ಎಂಬ ಸ್ಲೋಗನ್ ತೋರಿಸಿ, ನೆಲದಲ್ಲಿ ಕುಳಿತು ಕಾರ್ಯಕರ್ತರು ಧರಣಿ ನಡೆಸಿದ್ದಾರೆ.
ಬಿಜೆಪಿಗೆ ಧಿಕ್ಕಾರ ಕೂಗಿದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರದ ವಿರುದ್ಧ ಆಕ್ರೋಶ ವ್ಯಕಪಡಿಸಿದರು. ವಿಧಾನಸಭೆಯ ವಿಪಕ್ಷ ಉಪನಾಯಕ ಯು.ಟಿ. ಖಾದರ್ ಮಾತನಾಡಿ, ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರಾಹುಲ್ ಗಾಂಧಿ ಸತ್ಯ ನುಡಿದಿದ್ದಾರೆ. ಇದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ. ವಿಧಾನ ಪರಿಷತ್ತಿನ ಸಭಾ ನಾಯಕ ಬಿಕೆ ಹರಿಪ್ರಸಾದ್ ಮಾತನಾಡಿ ರಾಹುಲ್ ಗಾಂಧಿ ಅವರ ಸದಸ್ಯತ್ವ ಅನರ್ಹ ಮಾಡಿದ್ದು ಪ್ರಜಾಪ್ರಭುತ್ವ ಬುಡಮೇಲುಗೊಳಿಸುವ ನಡೆ. ರಾಹುಲ್ ಗಾಂಧಿಯವರು 2019ರ ಲೋಕಸಭೆ ಚುನಾವಣೆಯಲ್ಲಿ ಕೋಲಾರದಲ್ಲಿ ನೀರವ್ ಮೋದಿ, ಲಲಿತ್ ಮೋದಿಯನ್ನು ಉಲ್ಲೇಖಿಸಿ ಮಾತನಾಡಿದ್ದರು. ಕಳ್ಳರನ್ನು ಕಳ್ಳರು ಎನ್ನದೆ ಹರಿಶ್ಚಂದ್ರರು ಎನ್ನಬೇಕೇ ಎಂದು ಪ್ರಶ್ನಿಸಿದರು.
ಪ್ರತಿಭಟನೆಯಲ್ಲಿ ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್, ಮಾಜಿ ಸಚಿವ ಅಭಯ ಚಂದ್ರ ಜೈನ್, ಮಾಜಿ ಶಾಸಕರಾದ ಐವನ್ ಡಿಸೋಜ, ಜೆ.ಆರ್. ಲೋಬೊ, ಶಕುಂತಳಾ ಶೆಟ್ಟಿ, ಮೊಯ್ದಿನ್ ಬಾವ, ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ, ವಿಶ್ವಾಸ್‌ದಾಸ್, ಮನಪಾ ವಿಪಕ್ಷ ನಾಯಕ ನವೀನ್ ಡಿಸೋಜ, ಮಾಜಿ ಮೇಯರ್ ಶಶಿಧರ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.
Discover more from Coastal Times Kannada
Subscribe to get the latest posts sent to your email.







Discussion about this post