• About us
  • Contact us
  • Disclaimer
Thursday, June 4, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕಾಂಗ್ರೆಸಿಗರು “ನ್ಯಾಯಾಧೀಶರನ್ನು ಭ್ರಷ್ಟರನ್ನಾಗಿ ಬಿಂಬಿಸುತ್ತಿದ್ದಾರೆ’ – ಬಿಜೆಪಿ ರಾಷ್ಟ್ರೀಯ ವಕ್ತಾರ ಸುಧಾಂಶು ತ್ರಿವೇದಿ

Coastal Times by Coastal Times
March 25, 2023
in ಕರಾವಳಿ
ಕಾಂಗ್ರೆಸಿಗರು “ನ್ಯಾಯಾಧೀಶರನ್ನು ಭ್ರಷ್ಟರನ್ನಾಗಿ ಬಿಂಬಿಸುತ್ತಿದ್ದಾರೆ’ – ಬಿಜೆಪಿ ರಾಷ್ಟ್ರೀಯ ವಕ್ತಾರ ಸುಧಾಂಶು ತ್ರಿವೇದಿ
25
VIEWS
WhatsappTelegramShare on FacebookShare on Twitter

ಮಂಗಳೂರು: ಭಯೋತ್ಪಾದನೆಗೆ ಧರ್ಮ ಇಲ್ಲ ಎನ್ನುವ ಕಾಂಗ್ರೆಸಿಗರು ಈಗ ರಾಹುಲ್‌ ಗಾಂಧಿ ವಿರುದ್ಧ ತೀರ್ಪು ಬಂದಾಗ ಇಡೀ ನ್ಯಾಯಾಧೀಶರ ಸಮುದಾಯವನ್ನೇ ಭ್ರಷ್ಟರಂತೆ ಬಿಂಬಿಸುತ್ತಿರುವುದು ಆತಂಕಕಾರಿ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಹಾಗೂ ರಾಜ್ಯ ಸಭಾ ಸದಸ್ಯ ಸುಧಾಂಶು ತ್ರಿವೇದಿ ಹೇಳಿದ್ದಾರೆ. ರಾಹುಲ್‌ ಗಾಂಧಿ ಇಂತಹ ಬೇಜವಾಬ್ದಾರಿ ಹೇಳಿಕೆ ನೀಡುವುದು ಇದು ಮೊದಲಲ್ಲ. ಕಾಂಗ್ರೆಸ್‌ ನೈತಿಕವಾಗಿ, ರಾಜಕೀಯವಾಗಿ ಮಾತ್ರವಲ್ಲ, ಈಗ ಕಾನೂನುರೀತ್ಯಾ ಕೂಡ ಸೋತಿದೆ ಎಂದು ಅವರು ಹೇಳಿದರು.

ಶುಕ್ರವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹಿಂದಿನ ಕಾಂಗ್ರೆಸ್‌ ಸರ್ಕಾರವು ಎಸ್‌ಡಿಪಿಐನ 160 ಪ್ರಕರಣಗಳನ್ನು ಮುಕ್ತಾಯಗೊಳಿಸಿ, 200 ಜನರನ್ನು ಆರೋಪಮುಕ್ತಗೊಳಿಸಿದೆ. ಝಾಕೀರ್ ನಾಯಕ್, ಅಫ್ಜಲ್ ಗುರು, ಯಾಕೂಬ್ ಮೆನನ್ ಅವರಂತಹವರನ್ನು ಹೊಗಳುವ ಮೂಲಕ ರಕ್ಷಣೆ ಮಾಡಿದೆ. ಇದು ಕಾಂಗ್ರೆಸ್‌ ಎಲ್ಲಿದ್ದರೂ, ಯಾವ ಕಾಲದಲ್ಲೂ ತನ್ನ ಸ್ವಭಾವ ಬದಲಾಯಿಸಲಾರದು ಎಂಬುದನ್ನು ತೋರಿಸುತ್ತದೆ’ ಎಂದರು.

‘ಲಂಚ ಕೊಡುವುದು, ಲಂಚ ಪಡೆಯುವಷ್ಟೇ ಅಪರಾಧವಾಗಿದೆ. ರಾಜ್ಯ ಬಿಜೆಪಿ ಸರ್ಕಾರದ ಮೇಲೆ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿರುವವರು, ತಾಂತ್ರಿಕವಾಗಿ ಅದನ್ನು ಬಹಿರಂಗಗೊಳಿಸಿ, ಸೂಕ್ತ ದೂರು ನೀಡಬೇಕು. ಇಲ್ಲಿದ್ದರೆ ಅವರೇ ಅಪರಾಧವನ್ನು ಮರೆಮಾಚಲು ಯತ್ನಿಸಿದಂತಾಗುತ್ತದೆ. ಈ ನಡುವೆ ಕಾಂಗ್ರೆಸ್ ಯಾಕೆ ಭ್ರಷ್ಟ ಗುತ್ತಿಗೆದಾರರ ಬಗ್ಗೆ ಕನಿಕರ ತೋರುತ್ತಿದೆ ಎಂಬುದು ಅರ್ಥವಾಗುತ್ತಿಲ್ಲ’ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.

‘ಕಾಂಗ್ರೆಸ್‌ ಶೇ85ರ ಕಮಿಷನ್ ಪಕ್ಷವಾಗಿದೆ. ಹಿಂದೆ ಪ್ರಧಾನಿಯಾಗಿದ್ದ ದಿವಂಗತ ರಾಜೀವ್ ಗಾಂಧಿ ಅವರು ಒಂದು ರೂಪಾಯಿಯಲ್ಲಿ ಕೇವಲ 15 ಪೈಸೆ ಮಾತ್ರ ಫಲಾನುಭವಿಗೆ ತಲುಪುತ್ತದೆ ಎಂದಿದ್ದರು. ಕಾಂಗ್ರೆಸ್‌ನ ಕಮಿಷನ್ ಕಾರ್ಡ್ ಆಗಲೇ ಬಹಿರಂಗಗೊಂಡಿದೆ. ನಿರುದ್ಯೋಗಿ ಪದವೀಧರರಿಗೆ ಎರಡು ವರ್ಷ ಪ್ರತಿ ತಿಂಗಳು ₹3,000 ಭತ್ಯೆ ನೀಡುವ ಯುವ ಗ್ಯಾರೆಂಟ್ ಕಾರ್ಡ್ ಅನ್ನು ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಘೋಷಿಸಿದೆ. ಆದರೆ, ರಾಜಸ್ಥಾನದಲ್ಲಿ ಇದನ್ನು ಘೋಷಿಸಿದ್ದ ಕಾಂಗ್ರೆಸ್ ಈವರೆಗೂ ಅದನ್ನು ನೀಡಿಲ್ಲ’ ಎಂದು ಟೀಕಿಸಿದರು.

‘ನೀಡಿದ ಭರವಸೆಯನ್ನು ಈಡೇರಿಸಲು ಸಾಧ್ಯವಾಗದ ಕಾಂಗ್ರೆಸ್ ಕರ್ನಾಟಕದಲ್ಲಿ ಮತ್ತೆ ಗ್ಯಾರೆಂಟಿಯ ಭರವಸೆ ನೀಡಿದೆ. ಬಿಜೆಪಿ ತಾನು ಹೇಳಿದನ್ನು ಮಾಡಿ ತೋರಿಸಿದೆ. ಹೀಗಾಗಿ, ಕರ್ನಾಟಕದ ಜನರು ಬಿಜೆಪಿಯ ಮೇಲೆ ಭರವಸೆ ಹೊಂದಿದ್ದಾರೆ’ ಎಂದರು.

ಬೊಮ್ಮಾಯಿ ಉತ್ತಮ ಕೆಲಸ ಮಾಡಿದ್ದಾರೆ. ಹಾಗಾಗಿ ಸದ್ಯಕ್ಕೆ ಅವರೇ ಸಿಎಂ ಅಭ್ಯರ್ಥಿ ಎಂದರು. ಕಾಂಗ್ರೆಸ್‌ ಹಲವು ಉಚಿತ ಯೋಜನೆಗಳನ್ನು ಘೋಷಿಸಿರಬಹುದು, ಆದರೆ ಹೇಳಿದ್ದನ್ನು ಯಾವತ್ತಿಗೂ ಈಡೇರಿಸಿಲ್ಲ. ರಾಜಸ್ಥಾನ, ಛತ್ತೀಸಗಢದಲ್ಲೂ ಹೇಳಿದ್ದನ್ನು ಪಾಲಿಸಿಲ್ಲ ಎಂದರು. ರಾಜ್ಯ ವಕ್ತಾರ ಕ್ಯಾ| ಗಣೇಶ್‌ ಕಾರ್ಣಿಕ್‌, ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ ಎಂ., ರವಿಶಂಕರ ಮಿಜಾರ್‌, ಜಗದೀಶ್‌ ಶೇಣವ ಉಪಸ್ಥಿತರಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ರಾಹುಲ್ ಗಾಂಧಿ ಸಂಸದ ಸ್ಥಾನ ಅನರ್ಹ-ಮಂಗಳೂರಿನಲ್ಲಿ ಕಾಂಗ್ರೆಸ್ ನಿಂದ ಪ್ರತಿಭಟನೆ

Next Post

ಸುಳ್ಯ : ಕಾಮಗಾರಿ ವೇಳೆ ಗುಡ್ಡ ಕುಸಿತ– ಕೆಲಸ ನಿರತ ಮೂವರು ಕಾರ್ಮಿಕರು ಸಾವು

Related Posts

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ
ಕರಾವಳಿ

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

June 3, 2026
30
ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ
ಕರಾವಳಿ

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

June 2, 2026
75
Next Post
ಸುಳ್ಯ : ಕಾಮಗಾರಿ ವೇಳೆ ಗುಡ್ಡ ಕುಸಿತ– ಕೆಲಸ ನಿರತ ಮೂವರು ಕಾರ್ಮಿಕರು ಸಾವು

ಸುಳ್ಯ : ಕಾಮಗಾರಿ ವೇಳೆ ಗುಡ್ಡ ಕುಸಿತ– ಕೆಲಸ ನಿರತ ಮೂವರು ಕಾರ್ಮಿಕರು ಸಾವು

Discussion about this post

Recent News

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

June 3, 2026
30
ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

June 2, 2026
75
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

June 3, 2026
ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

June 2, 2026
ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

June 1, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d