ಅಮೆರಿಕ : ಟೆಕ್ಸಾಸ್‌ನ ಪ್ರಾಥಮಿಕ ಶಾಲೆಯಲ್ಲಿ 18ರ ಹರೆಯದ ವ್ಯಕ್ತಿಯೊಬ್ಬ ನಡೆಸಿದ ಅತ್ಯಂತ ಅಮಾನವೀಯ ಗುಂಡಿನ ದಾಳಿಯಲ್ಲಿ 18 ಮಕ್ಕಳು ಮತ್ತು ಓರ್ವ ಶಿಕ್ಷಕ ಸೇರಿ 21 ಮಂದಿ ಸಾವನ್ನಪ್ಪಿದ್ದಾರೆ. ಟೆಕ್ಸಾಸ್ ಗೌವರ್ನರ್ ಜಾರ್ಜ್ ಅಬಾಟ್ ಈ ಘಟನೆಯ ಕುರಿತು ಮಾಹಿತಿ ನೀಡಿದ್ದು, ಗುಂಡಿನ ದಾಳಿ ನಡೆಸಿದ ವ್ಯಕ್ತಿಯನ್ನು ಪೊಲೀಸರು ಹತ್ಯೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
2012ರಲ್ಲಿ ಕನೆಕ್ಟಿಕಟ್‌ನ ನ್ಯೂಟೌನ್ ಪ್ರಾಥಮಿಕ ಶಾಲೆಯಲ್ಲಿ ನಡೆದಿದ್ದ ದಾಳಿ ನಂತರ ಎಲಿಮೆಂಟ್ರಿ ಶಾಲೆಯೊಂದರಲ್ಲಿ ನಡೆದ ಅತಿ ಭೀಕರ ದಾಳಿ ಇದು ಎಂದು ‘ಇಂಟರ್‌ನ್ಯಾಷನಲ್ ನ್ಯೂಯಾರ್ಕ್ ಟೈಮ್ಸ್’ ವರದಿ ಮಾಡಿದೆ. ದಾಳಿಕೋರನನ್ನು ಪೊಲೀಸರು ಹತ್ಯೆ ಮಾಡಿದ್ದಾರೆ ಎಂದು ಟೆಕ್ಸಾಸ್ ಗವರ್ನರ್ ಗ್ರೆಗ್ ಅಬಾಟ್ ತಿಳಿಸಿದ್ದಾರೆ. ದಾಳಿಕೋರ 18 ವರ್ಷ ವಯಸ್ಸಿನವನಾಗಿದ್ದು, ಸಮೀಪದ ಪ್ರೌಢಶಾಲೆ ವಿದ್ಯಾರ್ಥಿ ಎಂದೂ ಅವರು ಮಾಹಿತಿ ನೀಡಿದ್ದಾರೆ. ವಾಹನದಲ್ಲಿ ಬಂದ ದಾಳಿಕೋರ ಪ್ರಾಥಮಿಕ ಶಾಲೆಗೆ ನುಗ್ಗಿ ಗುಂಡಿನ ದಾಳಿ ಆರಂಭಿಸಿದ್ದು, ಭೀಕರವಾಗಿ ಹತ್ಯೆ ಮಾಡಿದ್ದಾನೆ ಎಂದು ಅವರು ಹೇಳಿದ್ದಾರೆ. ‘ಶಾಲೆಗೆ ತೆರಳುವುದಕ್ಕೂ ಮುನ್ನ ದಾಳಿಕೋರ ಆತನ ಅಜ್ಜಿಯ ಮೇಲೂ ದಾಳಿ ನಡೆಸಿದ್ದ ಎನ್ನಲಾಗಿದೆ. ಆದರೆ, ಈ ಎರಡು ದಾಳಿಗಳಿಗೆ ಸಂಬಂಧವಿದೆಯೇ ಎಂಬ ಕುರಿತು ಮಾಹಿತಿ ಇಲ್ಲ’ ಎಂದು ಗವರ್ನರ್ ತಿಳಿಸಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಅವರೆನ್ನೆಲ್ಲ ಸಮೀಪದ ಉವಾಲ್ಡೆ ಸ್ಮಾರಕ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ಉಲ್ಲೇಖಿಸಿದೆ.
Discover more from Coastal Times Kannada
Subscribe to get the latest posts sent to your email.
Discussion about this post