ಉಡುಪಿ : ಜಗತ್ತಿನ ಸುದೃಢ ಹಾಗೂ ಸ್ವಾವಲಂಬಿ ದೇಶವಾಗಿ ರೂಪುಗೊಳ್ಳುತ್ತಿರುವ ಭಾರತದ ಆತ್ಮ ನಿರ್ಭರತೆ ಗೆ ಸಹಕಾರ ರಂಗದ ಕೊಡುಗೆ ಅಪಾರ. ಸಹಕಾರ ಭಾರತಿ ಸಹಕಾರ ಕ್ಷೇತ್ರದ ಸುಧಾರಣೆ ಹಾಗೂ ಆಧುನೀಕರಣಕ್ಕಾಗಿ ಸಂಘಟನಾತ್ಮಕವಾಗಿ ದೇಶ ವ್ಯಾಪಿಯಾಗಿ ಕಾರ್ಯ ಚಟುವಟಿಕೆಗಳನ್ನು ನಿರಂತರವಾಗಿ ಹಮ್ಮಿಕೊಳ್ಳುತ್ತಿದೆ. ಹಾಲು ಪ್ರಕೋಷ್ಠದ ಅಭ್ಯಾಸ ವರ್ಗ ವು ಗ್ರಾಮೀಣ ಭಾಗದಲ್ಲಿರುವ ಹೈನುಗಾರರ ಸಂಘಟನೆಯಲ್ಲಿ ಮಾಹಿತಿ ಮಾರ್ಗದರ್ಶನ ನೀಡುವ ಕೆಲಸ ಮಾಡುತ್ತಿದೆ ಎಂದು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನೂತನ ಅಧ್ಯಕ್ಷರಾದ ಶ್ರೀ ಕೆ ಪಿ ಸುಚರಿತ ಶೆಟ್ಟಿ ಯವರು ಮೆಚ್ಚುಗೆ ವ್ಯಕ್ತಪಡಿಸಿದರು.
ಅವರು ಮೇ24 ಮಂಗಳವಾರದಂದು ಉಡುಪಿ ನಗರದ ಅಂಬಲಪಾಡಿಯ ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಭಾಂಗಣದಲ್ಲಿ ಜರುಗಿದ ಉಡುಪಿ ಜಿಲ್ಲಾ ಸಹಕಾರ ಭಾರತೀಯ ಹಾಲು ಪ್ರಕೋಷ್ಠದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತಿದ್ದರು.
ಸಹಕಾರ ಭಾರತೀಯ ಸಂಸ್ಥಾಪಕರಾದ ಶ್ರೀ ಲಕ್ಷ್ಮಣರಾವ್ ಇನಾಂದಾರ್ ಅವರು ನಮ್ಮ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಬಾಲ್ಯಕಾಲದಲ್ಲಿ ಸಾಮಾಜಿಕ ಚಟುವಟಿಕೆಗಳಿಗೆ ಮಾರ್ಗದರ್ಶಕರಾಗಿದ್ದು, ಅವರು ಕಟ್ಟಿ ಬೆಳೆಸಿದ ಸಹಕಾರ ಭಾರತಿ ಸಂಘಟನೆ ಇಂದು ದೇಶಾದ್ಯಂತ ಸುದೃಢವಾಗಿ ಬೆಳೆದಿದೆ ಎಂದು ಶ್ಲಾಘಿಸಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಸಹಕಾರ ಭಾರತಿ ರಾಷ್ಟ್ರೀಯ ಮತ್ಸ್ಯ ಪ್ರಕೋಷ್ಠದ ಸಹ ಸಂಚಾಲಕರಾದ ಶ್ರೀ ಮಂಜುನಾಥ ಎಸ್ಕೆ ಯವರು ಸಹಕಾರಿ ಕ್ಷೇತ್ರದಲ್ಲಿ ಇತ್ತೀಚೆಗೆ ಆಗುತ್ತಿರುವ ಕ್ರಾಂತಿಕಾರಕ ಬದಲಾವಣೆ ಮತ್ತು ಗ್ರಾಮೀಣ ಭಾಗದ ಹಾಲು ಉತ್ಪಾದಕರ ಸಂಘಗಳು ಹಾಲು ಖರೀದಿಯ ಜೊತೆಗೆ ಹೈನುಗಾರರಿಗೆ ಅವಶ್ಯಕವಾದ ಇನ್ನಿತರ ಸೇವೆಗಳನ್ನು ನೀಡುವುದರ ಮೂಲಕ ಸಮಾಜಮುಖಿ ಕಾರ್ಯಗಳ ಜೊತೆಗೆ, ಸಂಘದ ಆರ್ಥಿಕ ಅಭಿವೃದ್ಧಿಗೂ ಪೂರಕ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದರ ಅವಶ್ಯಕತೆಯ ಬಗ್ಗೆ ತಿಳಿಸಿದರು.
ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಜಿಲ್ಲಾ ಸಹಕಾರ ಭಾರತೀಯ ಅಧ್ಯಕ್ಷರಾದ ಶ್ರೀ ಬೋಳ ಸದಾಶಿವ ಶೆಟ್ಟಿಯವರು ವಹಿಸಿದ್ದು, ಸಹಕಾರ ಭಾರತಿ ಸಂಘಟನೆ ಉಡುಪಿ ಜಿಲ್ಲೆಯ ಏಳು ತಾಲೂಕುಗಳಲ್ಲಿಯೂ ಕೂಡ ಕ್ರಿಯಾಶೀಲವಾಗಿದ್ದು, ಮುಂದಿನ ದಿನಗಳಲ್ಲಿ ತಾಲ್ಲೂಕು ಮಟ್ಟದಿಂದ ಗ್ರಾಮ ಮಟ್ಟದವರೆಗೂ ಸಂಘಟನೆಯ ಕಾರ್ಯಚಟುವಟಿಕೆಗಳು ವಿಸ್ತಾರಗೊಳ್ಳಲಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಶ್ರೀ ಕೆಪಿ ಸುಚ ರಿತ ಶೆಟ್ಟಿ ಅವರನ್ನು ಅಭಿನಂದಿಸಿ ಗೌರವಿಸಲಾಯಿತು.
ಸಹಕಾರ ಭಾರತಿ ಸಂಘಟನೆಯ ಹುಟ್ಟು ಮತ್ತು ಬೆಳವಣಿಗೆಯ ಬಗ್ಗೆ ಮೈಸೂರು ವಿಭಾಗದ ಸಂಘಟನಾ ಕಾರ್ಯದರ್ಶಿಗಳಾದ ಶ್ರೀ ಮೋಹನಕುಮಾರ ಕುಂಬ್ಳೆ ಕರವರು ಮತ್ತು ಹಾಲು ಉತ್ಪಾದಕರ ಸಂಘಗಳ ಆಡಳಿತ ನಿರ್ವಹಣೆ ಯ ಬಗ್ಗೆ ಶಂಕರನಾರಾಯಣ ಹಾಲು ಉತ್ಪಾದಕರ ಸಹಕಾರಿ ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ದಯಾನಂದ ರಾವ್ ರವರು ಮತ್ತು ಸ್ವಾವಲಂಬಿ ಭಾರತದ ಬಗ್ಗೆ ಉಡುಪಿ ನಗರಸಭಾ ಸದಸ್ಯರಾದ ವಿಜಯ ಕೊಡವೂರು ರವರುವಿಶೇಷ ಉಪನ್ಯಾಸವನ್ನು ನೀಡಿದರು.
ವೇದಿಕೆಯಲ್ಲಿ ಸಹಕಾರ ಭಾರತಿ ಹಾಲು ಪ್ರಕೋಷ್ಠದ ರಾಜ್ಯ ಸಂಚಾಲಕರಾದ ಸಾಣೂರು ನರಸಿಂಹ ಕಾಮತ್ ಮೈಸೂರು ವಿಭಾಗದ ಸಂಘಟನಾ ಕಾರ್ಯದರ್ಶಿಗಳಾದ ಶ್ರೀ ಮೋಹನ ಕುಮಾರ್ ಕುಂಬ್ಳೆ ಕರ್, ಜಿಲ್ಲಾ ಮಹಿಳಾ ಪ್ರಮುಖರಾದ ಶ್ರೀಮತಿ ವಿಜೇತ ವಿದ್ಯಾ ಪೈ,ಜಿಲ್ಲಾ ಹಾಲು ಪ್ರಕೋಷ್ಠದ ಸಹ ಸಂಚಾಲಕರಾದ ಶ್ರೀ ಸುರೇಶ್ ರಾವ್ ಉಪಸ್ಥಿತರಿದ್ದರು. ಸಹಕಾರ ಭಾರತಿ ಉಡುಪಿ ಜಿಲ್ಲಾ ಹಾಲು ಪ್ರಕೋಷ್ಠದ ಸಂಚಾಲಕರಾದ ಶ್ರೀ ಕಮಲಾಕ್ಷ ಹೆಬ್ಬಾರ್ ರವರು ಸ್ವಾಗತಿಸಿದರು. ಸಹಕಾರ ಭಾರತಿ ಕಾರ್ಕಳ ತಾಲೂಕು ಅಧ್ಯಕ್ಷರಾದ ಶ್ರೀ ಹರೀಶ್ ಕಲ್ಯಾರವರು ಕಾರ್ಯಕ್ರಮ ನಿರೂಪಿಸಿ, ವಂದನಾರ್ಪಣೆಗೈದರು. ಉಡುಪಿ ಜಿಲ್ಲೆಯ ಏಳು ತಾಲೂಕುಗಳಿಂದ ಹಾಲು ಪ್ರಕೋಷ್ಠದ ಸಂಚಾಲಕರು, ಸಹ ಸಂಚಾಲಕರು ಹಾಗೂ ವಿವಿಧ ಹಾಲು ಉತ್ಪಾದಕರ ಸಂಘಗಳ ಅಧ್ಯಕ್ಷರು ಮತ್ತು ನಿರ್ದೇಶಕರು ಅಭ್ಯಾಸ ವರ್ಗದಲ್ಲಿ ಪಾಲ್ಗೊಂಡರು.
Discover more from Coastal Times Kannada
Subscribe to get the latest posts sent to your email.
Discussion about this post